ಕೊಪ್ಪಳ: ಅತ್ಯಾಚಾರ ಕೇಸ್, ಆರೋಪಿಗಳ ಬಂಧನಕ್ಕೆ ವಿಶೇಷ ತಂಡ ರಚನೆ- ಪೊಲೀಸರ ಹೇಳಿಕೆ

ಜಮೀನು ವಿವಾದಕ್ಕೆ ಸಂಬಂಧಿಸಿದಂತೆ 46 ವರ್ಷದ ಮಹಿಳೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಲು ಮುಂದಾಗಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಕೊಪ್ಪಳ: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ 46 ವರ್ಷದ ಮಹಿಳೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಲು ಮುಂದಾಗಿದ್ದಾರೆ. ಸಂಬಂಧಿಕರ ನಡುವಿನ ಆಸ್ತಿ ವಿವಾದ ವಿಚಾರವಾಗಿ ಗಲಾಟೆಯಾಗಿದ್ದು, ಸಂತ್ರಸ್ತೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದ್ದು, ಆಕೆಯ ಪತಿ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆಗಸ್ಟ್ 8 ರಂದು ದಾಖಲಿಸಿರುವ ಎಫ್‌ಐಆರ್ ನಲ್ಲಿ ಆರೋಪಿಸಲಾಗಿದೆ. 

ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಅವರಿಗೆ ಕಳುಹಿಸಲಾದ ನೋಟಿಸ್‌ಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಅವರನ್ನು ಬಂಧಿಸಲು ತಂಡ ರಚಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ. 16 ಜನ ಆರೋಪಿಗಳೆಂದು ಸಂತ್ರಸ್ತೆ ಹಾಗೂ ಆಕೆಯ ಕುಟುಂಬಸ್ಥರು ಹೆಸರಿಸಿದ್ದಾರೆ. ಆರೋಪಿಗಳು ಸಾಕ್ಷಿಗಳಿಗೆ ಬೆದರಿಕೆ ಹಾಕುತ್ತಿದ್ದರೆ ಕೆಲ ಪೊಲೀಸ್ ಅಧಿಕಾರಿಗಳು ತಮ್ಮ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಕುಟುಂಬ ಸದಸ್ಯರು ಹೇಳಿದ್ದಾರೆ.

ಜುಲೈ 26 ರಂದು ಘಟನೆ ನಡೆದ ಒಂದು ದಿನದ ನಂತರ ಮಹಿಳಾ ಆಯೋಗ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಿಗೆ ಪತ್ರ ಬರೆದಿದ್ದೇವೆ. ಆದರೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಅಧಿಕಾರಿಯೊಬ್ಬರು ನನನ್ನು ಹೆದರಿಸಲು ಪ್ರಯತ್ನಿಸಿದ ನಂತರ ಅವರ ವಿರುದ್ಧ ಎಸ್ ಪಿ ಬಳಿ ದೂರು ದಾಖಲಿಸಿರುವುದಾಗಿ ಸಂತ್ರಸ್ತೆ ಪತಿ ತಿಳಿಸಿದ್ದಾರೆ.

ಆಸ್ತಿ ವಿವಾದ ಬಹಳ ದಿನಗಳಿಂದ ನಡೆಯುತ್ತಿದ್ದು, ಕುಟುಂಬ ಹಲವಾರು ಸಂಕಷ್ಟಗಳನ್ನು ಎದುರಿಸುತ್ತಿದೆ. ನಮ್ಮ ಹೊಲದಲ್ಲಿ ಬೆಳೆ ಬೆಳೆಯಲು ಸಾಧ್ಯವಾಗುತ್ತಿಲ್ಲ,  ಹೊಲಕ್ಕೆ ನೀರು ಕೊಡಲು  ಸಂಬಂಧಿಕರು ನಿರಾಕರಿಸಿದ್ದಾರೆ. 2021 ರಲ್ಲಿ ಅದೇ ಆರೋಪಿಗಳ ವಿರುದ್ಧ ಜಗಳ ಆಗಿ, ಗಂಗಾವತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೇವು, ಆದರೆ, ಯಾರು ಕೂಡಾ ಸಹಾಯಕ್ಕೆ ಬರಲಿಲ್ಲ ಎಂದು ಅವರು ಕಣ್ಣೀರು ಹಾಕಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com