ಸಚಿವ ರಾಮಲಿಂಗಾರೆಡ್ಡಿ
ಸಚಿವ ರಾಮಲಿಂಗಾರೆಡ್ಡಿ

ಮಹಿಳೆಯರಿಗೆ ಉಚಿತ ಬಸ್​ ಪ್ರಯಾಣ ಸ್ಥಗಿತಗೊಳಿಸಲ್ಲ: ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟನೆ

ರಾಜ್ಯ ಸಾರಿಗೆ ಸಂಸ್ಥೆಗಳ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆಯನ್ನು ಸ್ಥಗಿತಗೊಳಿಸುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಬುಧವಾರ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು: ರಾಜ್ಯ ಸಾರಿಗೆ ಸಂಸ್ಥೆಗಳ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆಯನ್ನು ಸ್ಥಗಿತಗೊಳಿಸುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಬುಧವಾರ ಸ್ಪಷ್ಟಪಡಿಸಿದ್ದಾರೆ.

ಕಾಂಗ್ರೆಸ್​ ಸರ್ಕಾರ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ಸ್ಥಗಿತಗೊಳಿಸಲಾಗುತ್ತಿದೆ ಎಂಬ ಊಹಾಪೋಹಗಳು ಕೇಳಿಬರುತ್ತಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ ರಾಮಲಿಂಗಾ ರೆಡ್ಡಿ ಅವರು, ಯೋಜನೆ ನಿಂತು ಹೋಗುತ್ತದೆ ಅಂತ ಊಹಾಪೋಹಗಳು ಕೇಳಿ ಬರುತ್ತಿವೆ. ಒಂದು ಪಕ್ಷದವರು ಈ ಹಾಪೋಹಗಳನ್ನು ಮಾಡಿಸುತ್ತಿದ್ದಾರೆ. ಆದರೆ ಇನ್ನು 10 ವರ್ಷ ಈ ಶಕ್ತಿ ಯೋಜನೆ ಮುಂದುವರಿಯುತ್ತದೆ ಎಂದು ಹೇಳಿದ್ದಾರೆ.

ಇನ್ನು ಕೆಎಸ್ ಆರ್ ಟಿಸಿ ಸಹ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಮಹಿಳೆಯರಿಗೆ ಉಚಿತ ಬಸ್​ ಪ್ರಯಾಣದ ಯೋಜನೆ ಸ್ಥಗಿತಗೊಳ್ಳಲ್ಲ ಎಂದು ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ಮಹಿಳೆಯರಿಗೆ ಉಚಿತ ಬಸ್​ ಪ್ರಯಾಣದ ಯೋಜನೆ ಮುಂದುವರಿಯುತ್ತೆ. ಯಾವುದೇ ಗೊಂದಲದ ಸಂದೇಶಗಳನ್ನು ಸಾರ್ವಜನಿಕರು ನಂಬಬಾರದು. ಮಹಿಳೆಯರ ಉಚಿತ‌ ಪ್ರಯಾಣದ ಶಕ್ತಿ ಯೋಜನೆ ಸ್ಥಗಿತಗೊಳ್ಳಲ್ಲ ಎಂದು ಕೆಎಸ್ಆರ್ ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

Related Stories

No stories found.

Advertisement

X
Kannada Prabha
www.kannadaprabha.com