ಆಗಸ್ಟ್ 18 ರಿಂದ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮೊಟ್ಟೆ, ಬಾಳೆಹಣ್ಣು ವಿತರಣೆ

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸರ್ಕಾರವು ವಾರದಲ್ಲಿ ಎರಡು ದಿನ ಮೊಟ್ಟೆ ಮತ್ತು ಬಾಳೆಹಣ್ಣುಗಳನ್ನು ವಿತರಿಸಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಬುಧವಾರ ಹೇಳಿದ್ದಾರೆ.
ಮಧು ಬಂಗಾರಪ್ಪ
ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸರ್ಕಾರವು ವಾರದಲ್ಲಿ ಎರಡು ದಿನ ಮೊಟ್ಟೆ ಮತ್ತು ಬಾಳೆಹಣ್ಣುಗಳನ್ನು ವಿತರಿಸಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಬುಧವಾರ ಹೇಳಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ವಿದ್ಯಾರ್ಥಿಗಳಿಗೆ ಮೊಟ್ಟೆ, ಬಾಳೆಹಣ್ಣು ವಿತರಿಸುವ ಯೋಜನೆ ಆ.18ರಿಂದ ಜಾರಿಗೆ ಬರಲಿದೆ. ಮೊದಲು ಮಂಡ್ಯ ಜಿಲ್ಲೆಯಲ್ಲಿ ಈ ಯೋಜನೆ ಉದ್ಘಾಟನೆಯಾಗಲಿದೆ ಎಂದರು.

"ಈ ಹಿಂದೆ, ಯೋಜನೆಯನ್ನು 8ನೇ ತರಗತಿಯವರೆಗೆ ವಿಸ್ತರಿಸಲು ಯೋಜಿಸಲಾಗಿತ್ತು. ಇದೀಗ ಈ ಯೋಜನೆಯನ್ನು 10ನೇ ತರಗತಿವರೆಗೆ ವಿಸ್ತರಿಸುವ ನಿರ್ಧಾರ ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳಿಗೆ ಪೌಷ್ಠಿಕ ಆಹಾರ ಒದಗಿಸುವ ನಿಟ್ಟಿನಲ್ಲಿ ಈ ಯೋಜನೆ ಜಾರಿಗೊಳಿಸಲಾಗುತ್ತಿದೆ’ ಎಂದು ಸಚಿವರು ತಿಳಿಸಿದ್ದಾರೆ.

ಮಧ್ಯಾಹ್ನದ ಊಟದ ಜತೆಗೆ ಮೊಟ್ಟೆ, ಬಾಳೆಹಣ್ಣು ನೀಡಲಾಗುವುದು ಎಂದು ಮಧು ಬಂಗಾರಪ್ಪ ಅವರು ಹೇಳಿದ್ದಾರೆ.

ಈ ಹಿಂದೆ ರಾಜ್ಯ ಸರ್ಕಾರದ ಈ ನಿರ್ಧಾರ ತೀವ್ರ ವಿವಾದಕ್ಕೆ ಕಾರಣವಾಗಿತ್ತು. ಈ ನಿರ್ಧಾರವು ಸಮಾಜದ ಒಂದು ವರ್ಗವನ್ನು ಕೆರಳಿಸಿತ್ತು. ಈ ಯೋಜನೆ ಶಾಲೆಗೆ ಹೋಗುವ ಮಕ್ಕಳಲ್ಲಿ ತಾರತಮ್ಯವನ್ನು ಉಂಟು ಮಾಡುತ್ತದೆ. ಹೀಗಾಗಿ ಶಾಲಾ ಆವರಣದಲ್ಲಿ ಮೊಟ್ಟೆಗಳನ್ನು ವಿತರಿಸಬಾರದು ಎಂದು ಒತ್ತಾಯಿಸಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com