ಖಾಸಗಿ ಶಾಲೆಗಳು ಒಂದೊಂದು ಸರ್ಕಾರಿ ಶಾಲೆ ದತ್ತು ಪಡೆಯಲಿ, ನಾನೂ 3 ಶಾಲೆ ದತ್ತು ಪಡೆಯುವೆ: ಡಿಸಿಎಂ ಡಿಕೆಶಿ

ಖಾಸಗಿ ಶಾಲೆಗಳು ಒಂದೊಂದು ಸರ್ಕಾರಿ ಶಾಲೆಯನ್ನು ದತ್ತು ಪಡೆಯಬೇಕು. ಒಂದು ಹೊಸ ಪರಿಕಲ್ಪನೆ ಜಾರಿಗೆ ನಾವು ಮುಂದಾಗಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರು ಬುಧವಾರ ಹೇಳಿದ್ದಾರೆ.
ಸಭೆಯಲ್ಲಿ ಡಿಸಿಎಂ ಡಿಕೆಶಿ
ಸಭೆಯಲ್ಲಿ ಡಿಸಿಎಂ ಡಿಕೆಶಿ

ಬೆಂಗಳೂರು: ಖಾಸಗಿ ಶಾಲೆಗಳು ಒಂದೊಂದು ಸರ್ಕಾರಿ ಶಾಲೆಯನ್ನು ದತ್ತು ಪಡೆಯಬೇಕು. ಒಂದು ಹೊಸ ಪರಿಕಲ್ಪನೆ ಜಾರಿಗೆ ನಾವು ಮುಂದಾಗಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರು ಬುಧವಾರ ಹೇಳಿದ್ದಾರೆ.

ಇಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ,  ಕಾರ್ಪೊರೇಟ್ ಸೋಷಿಯಲ್ ರೆಸ್ಪಾನ್ಸಿಬಿಲಿಟಿ ಫಂಡ್​​ನಿಂದ(CSR Fund) ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಖಾಸಗಿ ಶಾಲೆಗಳು ತಲಾ ಒಂದೊಂದು ಸರ್ಕಾರಿ ಶಾಲೆ ದತ್ತು ಪಡೆಯಬೇಕು. ಈ ಹೊಸ ಪರಿಕಲ್ಪನೆಯನ್ನು ಹೇಗೆ ಜಾರಿ ಮಾಡಬೇಕು ಎಂಬ ಬಗ್ಗೆ ಚರ್ಚೆ ಮಾಡಿದ್ದೇವೆ. ನಾನೂ ಕೂಡ ಮೂರು ಶಾಲೆಗಳ ಮಾಲೀಕ. ನಾನೂ ಪಂಚಾಯಿತಿ ಮಟ್ಟದಲ್ಲಿ ಮೂರು ಸರ್ಕಾರಿ ಶಾಲೆ ದತ್ತು ಪಡೆಯುವೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಇದೇ ವೇಳೆ ಕೆಆರ್​​ಎಸ್ ನಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ವಿಚಾರವಾಗಿ ಪ್ರತಿಪಕ್ಷಗಳು ಟೀಕೆಗೆ ಪ್ರತಿಕ್ರಿಯಿಸಿದ ಡಿಸಿಎಂ, “ಯಾಕೆ ನೀರು ಬಿಟ್ಟಿದ್ದೀರಿ ಎಂದು ನಮ್ಮನ್ನು ಪ್ರಶ್ನಿಸಲು ನಮ್ಮ ಬಳಿ ಡ್ಯಾಂನ ಬೀಗ ಇದೆಯಾ ಎಂದು ಪ್ರಶ್ನಿಸಿದರು.

ಕೆಆರ್​ಎಸ್ ಬೀಗ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಳಿ ಇದೆ. ಕೇಂದ್ರ ಸರ್ಕಾರದ ಬಳಿ‌ ಇದೆ. ರಾಜಕಾರಣವನ್ನು ಎಷ್ಟು ಮಾಡಬೇಕೋ ಅಷ್ಟೇ ಮಾಡಬೇಕು. ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೂ ಕಾನೂನು ಗೊತ್ತಿದೆ. ನೀರು ಯಾರ ನಿಯಂತ್ರಣದಲ್ಲಿ ಇದೆ? ಇದೆಲ್ಲ ಈಗ ಚರ್ಚೆ ಮಾಡಲ್ಲ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com