ಆತ್ಮಹತ್ಯೆ ಬೆದರಿಕೆ ಆರೋಪ: ಬಿಬಿಎಂಪಿ ಗುತ್ತಿಗೆದಾರರ ವಿರುದ್ಧ ಎಫ್​ಐಆರ್ ದಾಖಲು

ಬಿಬಿಎಂಪಿ ಗುತ್ತಿಗೆದಾರರು ಹಾಗೂ ರಾಜ್ಯ ಸರ್ಕಾರದ ನಡುವಿನ ಹಗ್ಗಜಗ್ಗಾಟ ಮತ್ತಷ್ಟು ತಾರಕಕ್ಕೇರಿದೆ. ಬಾಕಿ ಬಿಲ್​ ಬಿಡುಗಡೆ ಮಾಡುವಂತೆ ಆಗ್ರಹಿಸಿ ಆತ್ಮಹತ್ಯೆ ಬೆದರಿಕೆ ಹಾಕಿದ್ದ ಗುತ್ತಿಗೆದಾರರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಬಿಬಿಎಂಪಿ ಗುತ್ತಿಗೆದಾರರು ಹಾಗೂ ರಾಜ್ಯ ಸರ್ಕಾರದ ನಡುವಿನ ಹಗ್ಗಜಗ್ಗಾಟ ಮತ್ತಷ್ಟು ತಾರಕಕ್ಕೇರಿದೆ. ಬಾಕಿ ಬಿಲ್​ ಬಿಡುಗಡೆ ಮಾಡುವಂತೆ ಆಗ್ರಹಿಸಿ ಆತ್ಮಹತ್ಯೆ ಬೆದರಿಕೆ ಹಾಕಿದ್ದ ಗುತ್ತಿಗೆದಾರರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಬಿಬಿಎಂಪಿ ಅಧಿಕಾರಿ ಮಹದೇವ್ ದೂರಿನ ಮೇರೆಗೆ ಬೆಂಗಳೂರಿನ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಬಿಬಿಎಂಪಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಂಜುನಾಥ್ ಸೇರಿದಂತೆ ಒಟ್ಟು 57 ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಈ ದೂರಿನ ಸಂಬಂಧ ಗುತ್ತಿಗೆದಾರರ ವಿಚಾರಣೆಗ ಮುಂದಾಗಿರುವ ಪೊಲೀಸರು, ಗುತ್ತಿಗೆದಾರರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಎಸಿಪಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಗುತ್ತಿಗೆದಾರರಿಗೆ ನೋಟಿಸ್​ ನೀಡಿದ್ದಾರೆಂದು ತಿಳಿದುಬಂದಿದೆ.

ಬಿಜೆಪಿ ಆಡಳಿತದಲ್ಲಿ ಬಿಬಿಎಂಪಿ ನಡೆಸಿದ್ದ ಕಾಮಗಾರಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಸರ್ಕಾರವು, ಕಾಮಗಾರಿಗಳನ್ನು ಪರಿಶೀಲನೆ ನಡೆಸಿ ಬಾಕಿ ಬಿಲ್ ಗಳ ತೆರವುಗೊಳಿಸಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಹೊಸದಾಗಿ ಯಾವುದೇ ಕಾಮಗಾರಿಗೂ ಆದೇಶಗಳನ್ನು ನೀಡಿಲ್ಲ.

ಬಿಜೆಪಿ ಸರ್ಕಾರವು ಅನುಮತಿ ನೀಡಿದ್ದ ಕಾಮಗಾರಿಗಳೆಲ್ಲವೂ ಪೂರ್ಣಗೊಂಡಿದ್ದು, 25,000 ಕೋಟಿಗೆ ಬಿಲ್‌ಗಳನ್ನು ತೆರವುಗೊಳಿಸಲಾಗಿದೆ ಇನ್ನು ಕೇವಲ 650 ಕೋಟಿ ಬಿಲ್ ಗಳನ್ನು ತೆರವುಗೊಳಿಸಬೇಕಿದೆ ಎಂದು ಡಿಕೆ.ಶಿವಕುಮಾರ್ ಅವರು ಹೇಳಿದ್ದರು.

ಪ್ರಾಮಾಣಿಕವಾಗಿ ಕಾಮಗಾರಿ ನಿರ್ವಹಿಸಿರುವ ಗುತ್ತಿಗೆದಾರರ ಬಾಕಿ ಬಿಲ್‌ಗಳನ್ನು ತೆರವುಗೊಳಿಸಿ ಅವರ ಹಿತಾಸಕ್ತಿ ಕಾಪಾಡಲಾಗುವುದು. ಎರಡರಿಂದ ಮೂರು ವರ್ಷಗಳಿಂದ ಬಿಲ್‌ಗಳು ಬಾಕಿ ಉಳಿದಿದ್ದು, ಬೆದರಿಕೆಯೊಡ್ಡಿದರೆ ಗುತ್ತಿಗೆದಾರರು ಬಿಲ್‌ಗಳನ್ನು ತೆರವುಗೊಳಿಸಲು ಸಾಧ್ಯವಿಲ್ಲ. ಕಾಮಗಾರಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಸಮಿತಿ ವರದಿ ನೀಡಲಿದ್ದು, ಅದರಂತೆ ಬಿಲ್‌ಗಳನ್ನು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದರು.

ಈ ನಡುವೆ ಡಿಕೆ.ಶಿವಕುಮಾರ್ ಅವರು ಶೇ.15ರಷ್ಟು ಕಮಿಷನ್ ಕೇಳಿದ್ದು, ಹೀಗಾಗಿಯೇ ಬಿಲ್ ಗಳನ್ನು ತೆರವುಗೊಳಿಸುತ್ತಿಲ್ಲ ಎಂದು ಬಿಜೆಪಿ ಆರೋಪಿಸಿದೆ. ಆದರೆ, ಗುತ್ತಿಗೆದಾರರ ಸಂಘ ಯಾವುದೇ ಸಚಿವರು ನಮ್ಮಿಂದ ಕಮಿಷನ್ ಕೇಳಿಲ್ಲ ಎಂದು ಸ್ಪಷ್ಟಪಡಿಸಿದೆ.

ಈ ಎಲ್ಲಾ ಬೆಳವಣಿಗೆ ನಡುವಲ್ಲೇ ಗುತ್ತಿಗೆದಾರರು ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ಮಧ್ಯಪ್ರವೇಶಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com