ಮಂಗಳೂರು: ಜಾನುವಾರುಗಳನ್ನು ಅಮಾನವೀಯವಾಗಿ ಸಾಗಿಸುತ್ತಿದ್ದ ನಾಲ್ವರ ಬಂಧನ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಮುಳಿಯ ಎಂಬಲ್ಲಿ ಅಮಾನವೀಯ ರೀತಿಯಲ್ಲಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ನಾಲ್ವರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಮುಳಿಯ ಎಂಬಲ್ಲಿ ಅಮಾನವೀಯ ರೀತಿಯಲ್ಲಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ನಾಲ್ವರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಬಂಧಿತರನ್ನು ಸಾಲೆತ್ತೂರಿನ ಹಮೀದ್, ಇಬ್ರಾಹಿಂ, ಮಂಜೇಶ್ವರದ ಮೂಸಾ ಮತ್ತು ಬಂಟ್ವಾಳದ ಹಮೀದ್ ಅಲಿಯಾಸ್ ಜಲಾಲ್ ಎಂದು ಗುರುತಿಸಲಾಗಿದೆ.

ಆರೋಪಿಗಳು ಕೇರಳಕ್ಕೆ ಜಾನುವಾರುಗಳನ್ನು ಸಾಗಿಸುತ್ತಿದ್ದ ಸರಕು ಸಾಗಣೆ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.

ಈ ನಾಲ್ವರ ವಿರುದ್ಧ ಪ್ರಾಣಿಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ 1960 ಮತ್ತು ಕರ್ನಾಟಕ ಜಾನುವಾರು ಹತ್ಯೆ ತಡೆ ಕಾಯ್ದೆ 2020ರ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಈ ಮಧ್ಯೆ, ದ್ವಿಚಕ್ರವಾಹನಗಳಲ್ಲಿ ಬಂದ ಐದು ಜನರ ತಂಡ ತಮ್ಮ ಮೇಲೆ ಬೇಸ್‌ಬಾಲ್ ಬ್ಯಾಟ್ ಮತ್ತು ಚಾಕುವಿನಿಂದ ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ ಎಂದು ಬಂಧಿತ ಆರೋಪಿಗಳು ಪೊಲೀಸರಿಗೆ ದೂರು ನೀಡಿದ್ದಾರೆ.

ಜಾನುವಾರು ಸಾಗಾಟ ಪ್ರಕರಣದ ಆರೋಪಿ ಮೂಸಾ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com