ಮಂಗಳೂರು: ನಿಷೇಧಿತ ಎಂಡಿಎಂಎ ಮಾರಾಟ ಮಾಡುತ್ತಿದ್ದ ನಾಲ್ವರ ಬಂಧನ

ನಗರವನ್ನು ಡ್ರಗ್ಸ್ ಮುಕ್ತಗೊಳಿಸುವ ನಿಟ್ಟಿನಲ್ಲಿ ಕಾರ್ಯಾಚರಣೆ ಕೈಗೊಂಡಿರುವ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ, 200 ಗ್ರಾಂ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮಂಗಳೂರು: ನಗರವನ್ನು ಡ್ರಗ್ಸ್ ಮುಕ್ತಗೊಳಿಸುವ ನಿಟ್ಟಿನಲ್ಲಿ ಕಾರ್ಯಾಚರಣೆ ಕೈಗೊಂಡಿರುವ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ, 200 ಗ್ರಾಂ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಎಸಿಪಿ ಪಿಎ ಹೆಗ್ಡೆ ನೇತೃತ್ವದ ಸಿಸಿಬಿ ತಂಡ ನಡೆಸಿದ ದಾಳಿಯಲ್ಲಿ ಬೆಂಗಳೂರಿನಿಂದ ತಂದ ಎಂಡಿಎಂಎ ಅನ್ನು ಮಾರಾಟ ಮಾಡುತ್ತಿದ್ದ ಮೂವರನ್ನು ನಗರದ ಫಳ್ನೀರ್ ಪ್ರದೇಶದಲ್ಲಿ ಬಂಧಿಸಲಾಗಿದೆ.

ಮಾದಕ ವಸ್ತುಗಳು ಹಾಗೂ ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆ (ಎನ್‌ಡಿಪಿಎಸ್) ಅಡಿಯಲ್ಲಿ ಎಂಡಿಎಂಎ ಅನ್ನು ನಿಷೇಧಿಸಲಾಗಿದೆ.

ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಕೇರಳದ ನೆರೆಯ ಕಾಸರಗೋಡು ಜಿಲ್ಲೆಯ ಎಎನ್ ಮೊಹಮ್ಮದ್ ಹನೀಫ್ (47), ಸೈಯದ್ ಫೌಜಾನ್ (30) ಮತ್ತು ಸಿರಾಜುದ್ದೀನ್ ಅಬೂಬಕರ್ (35) ಅವರನ್ನು ಬಂಧಿಸಿದ್ದಾರೆ ಎಂದು ಅವರು ಹೇಳಿದರು.

ಆರೋಪಿಗಳು ಬಳಸುತ್ತಿದ್ದ ಕಾರು, 5 ಲಕ್ಷ ಮೌಲ್ಯದ 100 ಗ್ರಾಂ ಎಂಡಿಎಂಎ, 4 ಸಾವಿರ ನಗದು, ಮೂರು ಮೊಬೈಲ್ ಫೋನ್, ಡಿಜಿಟಲ್ ತೂಕದ ಮಾಪಕವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಜಪ್ತಿ ಮಾಡಿರುವ ವಸ್ತುಗಳ ಒಟ್ಟು ಮೌಲ್ಯ 10.94 ಲಕ್ಷ ಎಂದು ಅಂದಾಜಿಸಲಾಗಿದೆ.

ಈ ಕುರಿತು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತೊಂದು ಪ್ರಕರಣ

ಮತ್ತೊಂದು ಪ್ರಕರಣದಲ್ಲಿ ಎಂಡಿಎಂಎ ಮಾರಾಟ ಮಾಡುತ್ತಿದ್ದ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದ ಬಳಿಯ ಅಳಪೆ ಗ್ರಾಮದ ಒಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ಕೇರಳದ ಕಾಸರಗೋಡಿನ ವಿಕೆ ಇಬ್ರಾಹಿಂ ಅರ್ಷದ್ ಎಂದು ಗುರುತಿಸಲಾಗಿದೆ.

ಆತನಿಂದ 5 ಲಕ್ಷ ರೂ. ಮೌಲ್ಯದ 100 ಗ್ರಾಂ ಎಂಡಿಎಂಎ, 1000 ರೂಪಾಯಿ ನಗದು, ಮೊಬೈಲ್ ಫೋನ್ ಮತ್ತು ಡಿಜಿಟಲ್ ತೂಕದ ಮಾಪಕವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ವಸ್ತುಗಳ ಒಟ್ಟು ಮೌಲ್ಯ 5.11 ಲಕ್ಷ ಎಂದು ಅಂದಾಜಿಸಲಾಗಿದೆ.

ಈ ಸಂಬಂಧ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com