ಪ್ರತಿ ಜಿಲ್ಲೆಯ ಸರ್ಕಾರಿ ಕಾಲೇಜುಗಳಲ್ಲಿ ಕೆಎಸ್ಒಯುಗೆ ಎರಡು ಕೊಠಡಿ ಒದಗಿಸಲು ಒಪ್ಪಿಗೆ!

ದೂರಶಿಕ್ಷಣಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಉನ್ನತ ಶಿಕ್ಷಣ ಇಲಾಖೆಯು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯಕ್ಕೆ (ಕೆಎಸ್‌ಒಯು) ತನ್ನ ಅಧ್ಯಯನ ಕೇಂದ್ರವನ್ನು ನಡೆಸಲು ಪ್ರತಿ ಜಿಲ್ಲೆಯ ಸರ್ಕಾರಿ ಕಾಲೇಜುಗಳಲ್ಲಿ ಎರಡು ವಿಶಾಲವಾದ ಕೊಠಡಿಗಳನ್ನು ಒದಗಿಸಲು ಒಪ್ಪಿಗೆ ನೀಡಿದೆ.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ

ಮೈಸೂರು: ದೂರಶಿಕ್ಷಣಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಉನ್ನತ ಶಿಕ್ಷಣ ಇಲಾಖೆಯು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯಕ್ಕೆ (ಕೆಎಸ್‌ಒಯು) ತನ್ನ ಅಧ್ಯಯನ ಕೇಂದ್ರವನ್ನು ನಡೆಸಲು ಪ್ರತಿ ಜಿಲ್ಲೆಯ ಸರ್ಕಾರಿ ಕಾಲೇಜುಗಳಲ್ಲಿ ಎರಡು ವಿಶಾಲವಾದ ಕೊಠಡಿಗಳನ್ನು ಒದಗಿಸಲು ಒಪ್ಪಿಗೆ ನೀಡಿದೆ.

ಇತ್ತೀಚೆಗೆ ರಾಷ್ಟ್ರೀಯ ಮೌಲ್ಯಾಂಕನ ಮತ್ತು ಮಾನ್ಯತಾ ಮಂಡಳಿ (NAAC) ನಿಂದ A+ ಮಾನ್ಯತೆ ಪಡೆದಿರುವ ಕೆಎಸ್ಒಯು ಕಲಿಯುವವರ ಮನೆ ಬಾಗಿಲಿಗೆ ಉನ್ನತ ಶಿಕ್ಷಣವನ್ನು ಕೊಂಡೊಯ್ಯಲು ವಿವಿಧ ಕಾರ್ಯಕ್ರಮಗಳನ್ನು ಪ್ರಾರಂಭಿಸಿದೆ. ಇದರ ಭಾಗವಾಗಿ, ರಾಜ್ಯದ ಎಲ್ಲಾ ಭಾಗಗಳಲ್ಲಿ, ವಿಶೇಷವಾಗಿ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡಿರುವ ಅಧಿಕಾರಿಗಳು, ಎಲ್ಲಾ ಜಿಲ್ಲೆಗಳಲ್ಲಿ ಪ್ರಾದೇಶಿಕ ಕೇಂದ್ರಗಳು ಮತ್ತು ಸ್ಟಡಿ ಸೆಂಟರ್‌ಗಳನ್ನು ತೆರೆಯಲು ನಿರ್ಧರಿಸಿದ್ದಾರೆ.

ಕೆಎಸ್ಒಯು ಅಧಿಕಾರಿಗಳು ಇತ್ತೀಚೆಗೆ ಉನ್ನತ ಶಿಕ್ಷಣ ಸಚಿವ ಎಂಸಿ ಸುಧಾಕರ್ ಅವರನ್ನು ಭೇಟಿ ಮಾಡಿ, ಸರ್ಕಾರಿ ಕಾಲೇಜುಗಳಲ್ಲಿ ಅಧ್ಯಯನ ಕೇಂದ್ರಗಳನ್ನು ನಡೆಸಲು ಕೊಠಡಿಗಳನ್ನು ಒದಗಿಸುವಂತೆ ಮನವಿ ಮಾಡಿ, ಒಪ್ಪಿಗೆ ಪಡೆದಿದ್ದರು. 

ವಿಶ್ವವಿದ್ಯಾನಿಲಯವು ಮೂರು ಹಂತದ ವ್ಯವಸ್ಥೆಯಡಿಯಲ್ಲಿ ನಡೆಯುತ್ತದೆ. ಕೇಂದ್ರ ಕಚೇರಿ ಮೈಸೂರಿನಲ್ಲಿದ್ದರೂ ಇತರ ಜಿಲ್ಲೆಗಳಲ್ಲಿ ಪ್ರಾದೇಶಿಕ ಕೇಂದ್ರಗಳು ಮತ್ತು ಅಧ್ಯಯನ ಕೇಂದ್ರಗಳನ್ನು ಪ್ರಾರಂಭಿಸುವ ಅಗತ್ಯವಿತ್ತು ಎಂದು ಕೆಎಸ್ಒಯು ಕುಲಪತಿ ಪ್ರೊ. ಶರಣಪ್ಪ ವಿ ಹಾಲ್ಸೆ ಟಿಎನ್ಐಇಗೆ ತಿಳಿಸಿದ್ದಾರೆ.

ವಿಶ್ವವಿದ್ಯಾನಿಲಯವು ಎಲ್ಲಾ ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳಿಗೆ ತರಗತಿಗಳನ್ನು ನಡೆಸಲು ಕೇಂದ್ರಗಳನ್ನು ಹೊಂದಿಲ್ಲದ ಕಾರಣ, ನಾವು ಸಚಿವರನ್ನು ಸಂಪರ್ಕಿಸಿ ಬೆಂಬಲ ನೀಡುವಂತೆ ಮನವಿ ಮಾಡಿದ್ದೇವೆ. ಪ್ರತಿ ಜಿಲ್ಲೆಯ ಸರ್ಕಾರಿ ಕಾಲೇಜುಗಳಲ್ಲಿ ಕೊಠಡಿ ನೀಡಲು ಸಚಿವರು ಒಪ್ಪಿಗೆ ಸೂಚಿಸಿದ್ದು, ಈ ನಿಟ್ಟಿನಲ್ಲಿ ಅಗತ್ಯ ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಹೇಳಿದರು. 
ಈಮಧ್ಯೆ, ವಿಶ್ವವಿದ್ಯಾನಿಲಯವು ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಪ್ರಾದೇಶಿಕ ಕೇಂದ್ರಗಳನ್ನು ನಿರ್ಮಿಸಲು ಯೋಜಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com