ಸಾಂದರ್ಭಿಕ ಚಿತ್ರ
ರಾಜ್ಯ
ಬೆಂಗಳೂರು: ಖಾಸಗಿ ಕಂಪನಿಯ ಬಸ್ ಹರಿದು ವೃದ್ಧ ಸಾವು
ಖಾಸಗಿ ಕಂಪನಿಯೊಂದರ ಬಸ್ ಹರಿದು ವೃದ್ಧರೊಬ್ಬರು ಮೃತಪಟ್ಟಿರುವ ಘಟನೆ ಬನಶಂಕರಿಯಲ್ಲಿ ನಡೆದಿದೆ. 79 ವರ್ಷದ ವೃದ್ಧರೊಬ್ಬರ ಬೈಸಿಕಲ್ ಗೆ ಬಸ್ ಡಿಕ್ಕಿ ಹೊಡೆದ ನಂತರ ನಿಯಂತ್ರಣ ಕಳೆದುಕೊಂಡು ರಸ್ತೆ ಮೇಲೆ ಬಿದ್ದ ಅವರ ಬಸ್ ಹರಿದಿದೆ.
ಬೆಂಗಳೂರು: ಖಾಸಗಿ ಕಂಪನಿಯೊಂದರ ಬಸ್ ಹರಿದು ವೃದ್ಧರೊಬ್ಬರು ಮೃತಪಟ್ಟಿರುವ ಘಟನೆ ಬನಶಂಕರಿಯಲ್ಲಿ ನಡೆದಿದೆ. 79 ವರ್ಷದ ವೃದ್ಧರೊಬ್ಬರ ಬೈಸಿಕಲ್ ಗೆ ಬಸ್ ಡಿಕ್ಕಿ ಹೊಡೆದ ನಂತರ ನಿಯಂತ್ರಣ ಕಳೆದುಕೊಂಡು ರಸ್ತೆ ಮೇಲೆ ಬಿದ್ದ ಅವರ ಬಸ್ ಹರಿದಿದೆ.
ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಲ್ಲಿ ಅವರು ಮೃತಪಟ್ಟಿರುವುದಾಗಿ ವರದಿಯಾಗಿದೆ. ಗುರುವಾರ ಮಧ್ಯಾಹ್ನ 12:45 ರ ಸುಮಾರಿಗೆ ಡಾ ಪುನೀತ್ ರಾಜ್‌ಕುಮಾರ್ ರಸ್ತೆಯ ಅಶ್ವಿನಿ ಅಪಾರ್ಟ್‌ಮೆಂಟ್ ಬಳಿ ಅಪಘಾತ ಸಂಭವಿಸಿದೆ. ಮೃತರನ್ನು ಕೃಷ್ಣಾ ರೆಡ್ಡಿ ಎಂದು ಗುರುತಿಸಲಾಗಿದ್ದು, ಕದಿರೇನಹಳ್ಳಿ ನಿವಾಸಿ ಎನ್ನಲಾಗಿದೆ.
ಕತ್ರಿಗುಪ್ಪೆಯಲ್ಲಿರುವ ತನ್ನ ಸ್ನೇಹಿತರನ್ನು ಭೇಟಿ ಮಾಡಲು ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಈ ಸಂಬಂಧ ಬನಶಂಕರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


