ಹಾಸನ: ಆನೆ ದಾಳಿಗೆ ಮಹಿಳೆ ಬಲಿ

ಕಾಡಾನೆ ದಾಳಿಗೆ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ 37 ವರ್ಷದ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಹಾಸನ: ಕಾಡಾನೆ ದಾಳಿಗೆ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ 37 ವರ್ಷದ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ.

ಮೃತ ಮಹಿಳೆಯನ್ನು ಕವಿತಾ ಎಂದು ಗುರುತಿಸಲಾಗಿದೆ. ತನ್ನ ಪೋಷಕರನ್ನು ಭೇಟಿಯಾಗುವ ಸಲುವಾಗಿ ಮಹಿಳೆ ವಡೂರು ಗ್ರಾಮಕ್ಕೆ ಬಂದಿದ್ದರು. ಈ ಸಂದರ್ಭದಲ್ಲಿ ಮನೆ ಹಿಂದೆ ಇದ್ದ ಜಮೀನಿಗೆ ಹೋಗಿದ್ದಾಗ ಆನೆ ದಾಳಿ ಮಾಡಿದೆ.

ತಕ್ಷಣ ಕುಟುಂಬಸ್ಥರು ಆಕೆಯನ್ನು ಹಾಸನದ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಸಾವನ್ನಪ್ಪಿದ್ದಾಳೆ.

ಈ ನಡುವೆ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿದ ಅರಣ್ಯ ಇಲಾಖೆಯ ಅಧಿಕಾರಿಗಳು, ಕಾಡಾನೆಯನ್ನು ಪತ್ತೆ ಮಾಡಿ ಸ್ಥಳಾಂತರಿಸಲು ಕ್ರಮಗಳ ಕೈಗೊಂಡಿದ್ದಾರೆ.

ಇದೇ ವೇಳೆ ಆನೆಗಳು ಪದೇ ಪದೇ ದಾಳಿ ಮಾಡುತ್ತಿರುವ ಬಗ್ಗೆ ಗ್ರಾಮದ ಜನರು ಆತಂಕ ವ್ಯಕ್ತಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com