ಇಂದಿರಾ ಕ್ಯಾಂಟೀನ್​ ಊಟದ ದರ ಹೆಚ್ಚಿಸಲು ಸಚಿವ ಸಂಪುಟ ಒಪ್ಪಿಗೆ

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕನಸಿನ ಕೂಸು ಇಂದಿರಾ ಕ್ಯಾಂಟೀನ್​ನಲ್ಲಿ ಬಡವರಿಗೆ ನೀಡುತ್ತಿದ್ದ ಊಟದ ದರ ಹೆಚ್ಚಿಸಲು ಸಚಿವ ಸಂಪುಟ ಸಭೆ ಶನಿವಾರ ಒಪ್ಪಿಗೆ ನೀಡಿದೆ.
ಇಂದಿರಾ ಕ್ಯಾಂಟಿನ್
ಇಂದಿರಾ ಕ್ಯಾಂಟಿನ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕನಸಿನ ಕೂಸು ಇಂದಿರಾ ಕ್ಯಾಂಟೀನ್​ನಲ್ಲಿ ಬಡವರಿಗೆ ನೀಡುತ್ತಿದ್ದ ಊಟದ ದರ ಹೆಚ್ಚಿಸಲು ಸಚಿವ ಸಂಪುಟ ಸಭೆ ಶನಿವಾರ ಒಪ್ಪಿಗೆ ನೀಡಿದೆ.

ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಇಂದಿರಾ ಕ್ಯಾಂಟಿನ್ ಊಟದ ದರ ಹೆಚ್ಚಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಆದರೆ, ಬಿಬಿಎಂಪಿ ವ್ಯಾಪ್ತಿಯ ಇಂದಿರಾ ಕ್ಯಾಂಟೀನ್​ಗಳಲ್ಲಿ ಹಳೇ ದರ ಮುಂದುವರಿಕೆಯಾಗಲಿದೆ.

ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಸಚಿವ ಎಚ್. ಕೆ. ಪಾಟೀಲ್ ಅವರು, ರಾಜ್ಯದ ಇತರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಇಂದಿರಾ ಕ್ಯಾಂಟಿನ್ ಊಟದ ದರ 27 ರೂ. ನಿಗದಿ ಮಾಡಲಾಗಿದೆ ಎಂದರು.

ಇಂದಿರಾ ಕ್ಯಾಂಟೀನ್​ಗಳಲ್ಲಿ ಒಂದು ಊಟದ ಬೆಲೆ 60 ರೂ. ದರ ನಿಗದಿ ಮಾಡಲಾಗಿದೆ. ಆದರೆ ಗ್ರಾಹಕರಿಂದ ಕೇವಲ 27 ರೂ. ಸಂಗ್ರಹಿಸಲಿದ್ದು, ಉಳಿದ 33 ರೂ. ಸಬ್ಸಿಡಿಯನ್ನು ಸರ್ಕಾರ ನೀಡಲಿದೆ. ರಾಜ್ಯಾದ್ಯಂತ ನೂತನವಾಗಿ ನಿರ್ಮಾಣವಾಗಲಿರುವ ಇಂದಿರಾ ಕ್ಯಾಂಟೀನ್​​ಗಳಲ್ಲಿ ಈ ಹೊಸ ದರ ಜಾರಿಗೆ ಬರಲಿದೆ ಎಂದು ಸಚಿವರು ತಿಳಿಸಿದ್ದಾರೆ.

ಬಿಬಿಎಂಪಿ  ಹೊರತುಪಡಿಸಿ ಸ್ಥಳೀಯ ಸಂಸ್ಥೆಗಳಲ್ಲಿ ಹೊಸದಾಗಿ 188 ಇಂದಿರಾ ಕ್ಯಾಂಟೀನ್​ ತೆರೆಯಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಹೊಸ ಇಂದಿರಾ ಕ್ಯಾಂಟೀನ್​ಗೆ 27 ಕೋಟಿ ರೂ. ನೀಡಲು ಅನುಮೋದಿಸಲಾಗಿದೆ. ಸ್ಥಳೀಯ ತಿಂಡಿ ತಿನಿಸು ಗಮನದಲ್ಲಿಟ್ಟುಕೊಂಡು ಇಂದಿರಾ ಕ್ಯಾಂಟೀನ್ ಮೆನು ಇರಲಿದೆ ಎಂದು ಎಚ್.ಕೆ.ಪಾಟೀಲ್ ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com