ನಾಡು ನುಡಿ ಜಲ ವಿಚಾರದಲ್ಲಿ ರಾಜಕೀಯ ಸರಿಯಲ್ಲ, ಎಲ್ಲರೂ ಒಗ್ಗೂಡಿ ಹೋರಾಡಬೇಕು: ಸಂಸದೆ ಸುಮಲತಾ

ನಾಡು ನುಡಿ ಜಲ ವಿಚಾರದಲ್ಲಿ ರಾಜಕೀಯ ಮಾಡಬಾರದು, ಎಲ್ಲರೂ ಒಗ್ಗಟ್ಟಿನಿಂದ ಹೋರಾಡಬೇಕೆಂದು ಸಂಸದೆ ಸುಮಲತಾ ಅಂಬರೀಷ್ ಅವರು ಶನಿವಾರ ಹೇಳಿದರು.
ಸಂಸದೆ ಸುಮಲತಾ
ಸಂಸದೆ ಸುಮಲತಾ

ಮಂಡ್ಯ: ನಾಡು ನುಡಿ ಜಲ ವಿಚಾರದಲ್ಲಿ ರಾಜಕೀಯ ಮಾಡಬಾರದು, ಎಲ್ಲರೂ ಒಗ್ಗಟ್ಟಿನಿಂದ ಹೋರಾಡಬೇಕೆಂದು ಸಂಸದೆ ಸುಮಲತಾ ಅಂಬರೀಷ್ ಅವರು ಶನಿವಾರ ಹೇಳಿದರು.

ತಮಿಳುನಾಡಿಗೆ ಕಾವೇರಿ ನೀರು ಹರಿಸಿದ ವಿಚಾರ ಸಂಬಂಧ ಪ್ರತಿಕ್ರಿಯೆ ನೀಡಿದ ಅವರು, ನಾಡು, ನುಡಿ, ಜಲ ವಿಚಾರದಲ್ಲಿ ರಾಜಕೀಯ ಮಾಡಬಾರದು. ರಾಜ್ಯದ ರೈತರು, ಜನರಿಗೆ ಸಮಸ್ಯೆಯಾದರೆ ಎಲ್ಲರೂ ಒಂದಾಗಬೇಕು. ಪಕ್ಷ ಭೇದ ಮರೆತು ಎಲ್ಲರೂ ಒಂದಾಗಿ ಹೋರಾಟ ಮಾಡಬೇಕು ಎಂದು ಹೇಳಿದರು.

ಕಾವೇರಿ ಕಣಿವೆ ವ್ಯಾಪ್ತಿಯಲ್ಲಿ 4 ವರ್ಷ ಉತ್ತಮ ಮಳೆಯಾಗಿತ್ತು. ಈ ವರ್ಷ ರಾಜ್ಯದಲ್ಲಿ ಮಳೆ ಕೊರತೆಯಾಗಿದೆ. ಹೀಗಾಗಿ ನೀರಿನ ಸಮಸ್ಯೆ ಉಂಟಾಗಿದೆ. ಈ ಬಗ್ಗೆ ಕಾವೇರಿ ನೀರು ಪ್ರಾಧಿಕಾರಕ್ಕೆ ಮನವರಿಕೆ ಮಾಡಬೇಕು. ಮಳೆ ಕೊರತೆಯಿಂದ ರೈತರು ಜನರ ಸಮಸ್ಯೆ ಬಗ್ಗೆ ಕೇಂದ್ರ ಜಲಶಕ್ತಿ ಸಚಿವರಿಗೆ ಪತ್ರ ಬರೆದು ಮಾಹಿತಿ ನೀಡಿದ್ದೇನೆ ಎಂದು ತಿಳಿಸಿದರು.

ಇದೇ ವೇಳೆ ಕಾಂಗ್ರೆಸ್ ನಿಂದ ಆಫರ್ ಬಂದಿದೆ ಎಂಬ ವಿಚಾರ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಇದೆಲ್ಲಾ ಊಹಾಪೋಹವಷ್ಟೇ. ರಾಜಕೀಯ ನನಗೆ ಅನಿವಾರ್ಯ ಅಲ್ಲ, ಆಕಸ್ಮಿಕ ಎಂದರು.

ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವ ವಿಚಾರಕ್ಕೆ ಸಂಬಂಧಿಸಿ ಮಂಡ್ಯದಲ್ಲಿ ಸಂಸದೆ ಸುಮಲತಾ ಪ್ರತಿಕ್ರಿಯೆ ನೀಡಿದ್ದಾರೆ. ನಾಡು, ನುಡಿ, ಜಲ ವಿಚಾರದಲ್ಲಿ ರಾಜಕೀಯ ಮಾಡಬಾರದು. ರಾಜ್ಯದ ರೈತರು, ಜನರಿಗೆ ಸಮಸ್ಯೆಯಾದರೆ ಎಲ್ಲರೂ ಒಂದಾಗಬೇಕು. ಪಕ್ಷದ ಭೇದಮರೆತು ಎಲ್ಲರೂ ಒಂದಾಗಿ ಹೋರಾಟ ಮಾಡಬೇಕು. ಕಾವೇರಿ ಕಣಿವೆ ವ್ಯಾಪ್ತಿಯಲ್ಲಿ 4 ವರ್ಷ ಉತ್ತಮ ಮಳೆಯಾಗಿತ್ತು. ಈ ವರ್ಷ ರಾಜ್ಯದಲ್ಲಿ ಮಳೆ ಕೊರತೆಯಿಂದ ನೀರಿನ ಸಮಸ್ಯೆ ಇದೆ. ಈ ಬಗ್ಗೆ ಕಾವೇರಿ ನದಿ ನೀರು ಪ್ರಾಧಿಕಾರಕ್ಕೆ ಮನವರಿಕೆ ಮಾಡಬೇಕು. ಕಾವೇರಿ ನದಿ ನೀರಿನ ಸಮಸ್ಯೆ ಬಗ್ಗೆ ಕೇಂದ್ರಕ್ಕೆ ಪತ್ರ ಬರೆದಿದ್ದೇನೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com