ಡಿಸಿಎಂ ಡಿಕೆ ಶಿವಕುಮಾರ್​ ಸಿಟಿ ರೌಂಡ್ಸ್: ಬಾಕಿ ಕಾಮಗಾರಿಗಳ ಪರಿಶೀಲನೆ

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶನಿವಾರ ಬೆಂಗಳೂರಿನಲ್ಲಿ ಸಿಟಿ ರೌಂಡ್ಸ್ ನಡೆಸಿದ್ದು, ಈ ವೇಳೆ ವಿವಿಧ ಯೋಜನೆಗಳ ಕಾಮಗಾರಿಗಳ ಸ್ಥಿತಿಗತಿ ಕುರಿತು ಖುದ್ದು ಪರಿಶೀಲನೆ ನಡೆಸಿ, ಅಧಿಕಾರಿಗಳಿಂದ ವರದಿ ಪಡೆದುಕೊಂಡರು.
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶನಿವಾರ ಬೆಂಗಳೂರಿನಲ್ಲಿ ಬಾಕಿ ಉಳಿದಿರುವ ಮೂಲಸೌಕರ್ಯ ಕಾಮಗಾರಿಗಳನ್ನು ಪರಿಶೀಲಿಸಿದರು.
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶನಿವಾರ ಬೆಂಗಳೂರಿನಲ್ಲಿ ಬಾಕಿ ಉಳಿದಿರುವ ಮೂಲಸೌಕರ್ಯ ಕಾಮಗಾರಿಗಳನ್ನು ಪರಿಶೀಲಿಸಿದರು.

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶನಿವಾರ ಬೆಂಗಳೂರಿನಲ್ಲಿ ಸಿಟಿ ರೌಂಡ್ಸ್ ನಡೆಸಿದ್ದು, ಈ ವೇಳೆ ವಿವಿಧ ಯೋಜನೆಗಳ ಕಾಮಗಾರಿಗಳ ಸ್ಥಿತಿಗತಿ ಕುರಿತು ಖುದ್ದು ಪರಿಶೀಲನೆ ನಡೆಸಿ, ಅಧಿಕಾರಿಗಳಿಂದ ವರದಿ ಪಡೆದುಕೊಂಡರು.

ಮೊದಲಿಗೆ ಈಜಿಪುರ ಸರಕಾರಿ ಶಾಲೆಗೆ ಭೇಟಿ ನೀಡಿದ ಉಪ ಮುಖ್ಯಮಂತ್ರಿಗಳು, ವಿದ್ಯಾರ್ಥಿಗಳಿಗೆ ಆಹಾರ ಕಿಟ್ ವಿತರಿಸಿದರು. ಬಳಿಕ ಕೋರಮಂಗಲ ಬಳಿಯ ಅಪೂರ್ಣಗೊಂಡಿರುವ ಈಜಿಪುರ ಮೇಲ್ಸೇತುವೆಯನ್ನು ಪರಿಶೀಲಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ.ಶಿವಕುಮಾರ್ ಅವರು, 2.9 ಕಿಮೀ ಉದ್ದದ ಮೇಲ್ಸೇತುವೆ 2014ರಲ್ಲಿ ಮಂಜೂರಾಗಿದ್ದು, 2017ರಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದು ಹೇಳಿದರು.

"ಗುತ್ತಿಗೆದಾರರು ಕೇವಲ ಶೇ.35 ಕೆಲಸವನ್ನು ಪೂರ್ಣಗೊಳಿಸಿ, ನಂತರ ಯೋಜನೆಯನ್ನು ಕೈಬಿಟ್ಟಿದ್ದಾರೆ. ಈಗ ಗುತ್ತಿಗೆದಾರರೊಬ್ಬರು ಮೇಲ್ಸೇತುವೆ ಪೂರ್ಣಗೊಳಿಸಲು ಮುಂದಾಗಿದ್ದಾರೆ. ಗುತ್ತಿಗೆದಾರರು ಶೇ.19ರಷ್ಟು ಹೆಚ್ಚು ಹಣದ ಬೇಡಿಕೆಯಿದ್ದು, ಇದೀಗ ಯೋಜನೆಗೆ 100 ಕೋಟಿ ರೂ. ಆಗತ್ಯವಿದೆ ಎಂದು ತಿಳಿಸಿದರು.

ವರದಿಗಳ ಪ್ರಕಾರ, ಸೋನಿ ವರ್ಲ್ಡ್ ಸಿಗ್ನಲ್‌ನಿಂದ ಕೇಂದ್ರೀಯ ಸದನ್‌ವರೆಗಿನ ಫ್ಲೈಓವರ್ ಯೋಜನೆಗೆ 240 ಕೋಟಿ ರೂಪಾಯಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ, ಕಾಮಗಾರಿ ಕೆಲಸವನ್ನು ಆದ್ಯತೆಯ ಆಧಾರದ ಮೇಲೆ ತೆಗೆದುಕೊಳ್ಳುತ್ತಿದ್ದೇವೆ. ಇದಕ್ಕಾಗಿ ನಗರೋತ್ಥಾನ ಅನುದಾನ ಅಥವಾ ಇನ್ನಾವುದೇ ಹಣವನ್ನು ಬಳಸಬಹುದೇ ಎಂಬುದನ್ನು ಪರಿಶೀಲನೆ ನಡೆಸಲಾಗುತ್ತಿದೆ. ಈ ನಿಟ್ಟಿನಲ್ಲಿ ಸಚಿವ ಸಂಪುಟ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಾಗುತ್ತೆದ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com