ರಾಜ್ಯದ ಕರಾವಳಿ, ಮಲೆನಾಡಿನಲ್ಲಿ ಮುಂದಿನ ಐದು ದಿನ ಭಾರಿ ಮಳೆ- ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕರಾವಳಿ, ಮಳೆನಾಡಿನಲ್ಲಿ ಮುಂದಿನ ಐದು ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಮಧ್ಯೆ ಮುಂದಿನ 24 ಗಂಟೆಗಳಲ್ಲಿ ಮೂರು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಹಳದಿ ಆಲರ್ಟ್ ಘೋಷಿಸಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದ ಕರಾವಳಿ, ಮಳೆನಾಡಿನಲ್ಲಿ ಮುಂದಿನ ಐದು ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಮಧ್ಯೆ ಮುಂದಿನ 24 ಗಂಟೆಗಳಲ್ಲಿ ಮೂರು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಹಳದಿ ಆಲರ್ಟ್ ಘೋಷಿಸಲಾಗಿದೆ.

ನಿನ್ನೆಯಿಂದ ರಾಜ್ಯದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿ ಮಳೆ ಆರಂಭವಾಗಿದ್ದು, ರಾಜಧಾನಿ ಬೆಂಗಳೂರಿನಲ್ಲಿಯೂ ಮಳೆಯಾಗಿದೆ. ಉತ್ತರ ಒಳನಾಡಿನ ವಿಜಯಪುರ, ಯಾದಗಿರಿ, ಬಾಗಲಕೋಟೆ ಮತ್ತು ಕೊಪ್ಪಳ ಭಾಗದಲ್ಲಿ ಮಳೆಯಾಗಿರುವ ಬಗ್ಗೆ ವರದಿಯಾಗಿದೆ. 

ಕಳೆದ ಎರಡ್ಮೂರು ವಾರಗಳಿಂದ ರಾಜ್ಯಾದ್ಯಂತ ಮಳೆ ಕೊರತೆ ಉಂಟಾಗಿದ್ದು, ರೈತರಲ್ಲಿ ತಲ್ಲಣ ಮೂಡಿಸಿದೆ. ಈ ಮಧ್ಯೆ ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಮೈಸೂರು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದ್ದು, ಕೊಪ್ಪಳ, ಬೆಂಗಳೂರು ಮತ್ತು ದಾವಣಗೆರೆಯಲ್ಲಿ ಸಾಧಾರಣ ಮಳೆಯಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com