ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ಪತ್ರ: ಇಬ್ಬರು ಅಧಿಕಾರಿಗಳು ಸಿಐಡಿ ಪೊಲೀಸರ ವಶಕ್ಕೆ!

ಕೃಷಿ ಸಚಿವ ಚಲುವರಾಯಸ್ವಾಮಿ ಪ್ರತಿ ಕೆಲಸಕ್ಕೆ ಲಂಚ ನಿಗದಿ ಮಾಡಿದ್ದಾರೆ ಎಂದು ರಾಜ್ಯಪಾಲರಿಗೆ ಬರೆಯಲಾಗಿದ್ದ ಪತ್ರದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಅಧಿಕಾರಿಗಳನ್ನು ಸಿಐಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಚಲುವರಾಯಸ್ವಾಮಿ
ಚಲುವರಾಯಸ್ವಾಮಿ

ಮೈಸೂರು: ಕೃಷಿ ಸಚಿವ ಚಲುವರಾಯಸ್ವಾಮಿ ಪ್ರತಿ ಕೆಲಸಕ್ಕೆ ಲಂಚ ನಿಗದಿ ಮಾಡಿದ್ದಾರೆ ಎಂದು ರಾಜ್ಯಪಾಲರಿಗೆ ಬರೆಯಲಾಗಿದ್ದ ಪತ್ರದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಅಧಿಕಾರಿಗಳನ್ನು ಸಿಐಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಕೆ.ಆರ್‌.ಪೇಟೆಯ ಕೃಷಿ ಅಧಿಕಾರಿಗಳಾದ ಶಿವಪ್ರಸಾದ್​, ಗುರುದತ್ ಎನ್ನುವರನ್ನು ತನಿಖಾ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು ತನಿಖೆ ನಡೆಸಿದ್ ವಿಚಾರಣೆ ನಡೆಸುತ್ತಿದ್ದಾರೆ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅವರಿಗೆ ಸಚಿವ ಚಲುವರಾಯಸ್ವಾಮಿ ವಿರುದ್ಧ ಲಂಚ ಅರೋಪ ಪತ್ರವನ್ನು ಬರೆದಿರುವುದು ಇವರೇ ಎನ್ನುವುದು ತಿಳಿದುಬಂದಿದೆ.

ಮುಖ್ಯಮಂತ್ರಿ ಕಚೇರಿ ಮತ್ತು ಸಚಿವರ ಒತ್ತಡದ ಮೇರೆಗೆ ತನಿಖೆ ಮುಂದುವರಿದು ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತ ಅಧಿಕಾರಿಗಳಿಂದ ಅವರು ತಮ್ಮ ಸ್ವಂತ ಇಚ್ಛೆಯ ಪತ್ರ ಬರೆದಿದ್ದಾರೆಯೇ ಅಥವಾ ಅವರ ಮೇಲಧಿಕಾರಿಗಳಿಂದ ಪ್ರಭಾವಿತರಾಗಿದ್ದಾರೆಯೇ ಎಂದು ಕಂಡುಹಿಡಿಯಲು ಸಿಐಡಿ ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇನ್ನು ಪತ್ರ ಬರೆಯಲು ಹೇಳಿದ್ಯಾರು? ಲಂಚ ಕೇಳಿದ್ದಕ್ಕೆ ರಾಜ್ಯಪಾಲರಿಗೆ ಪತ್ರ ಬರೆಯಲಾಯಿತೇ? ಈ ಪತ್ರ ಬರೆದಿರುವ ಹಿಂದಿನ ಉದ್ದೇಶವೇನು? ಹೀಗೆ ಹಲವು ಆಯಾಮಗಳಲ್ಲಿ ಸಿಐಡಿ ಅಧಿಕಾರಿಗಳು ತನಿಖೆ ನಡೆಸಿದ್ದು, ಈ ಬಗ್ಗೆ ಇನ್ನಷ್ಟು ಮಾಹಿತಿ ತಿಳಿದು ಬರಬೇಕಿದೆ.

ರಾಜ್ಯಪಾಲ ತಾವರ್‌ಚಂದ್‌ ಗೆಹ್ಲೋಟ್‌ ಅವರಿಗೆ ಬರೆದಿರುವ ಪತ್ರ ನಕಲಿಯಾಗಿದ್ದು, ಸಚಿವರ ಮಾನಹಾನಿ ಮಾಡುವ ಉದ್ದೇಶದಿಂದ ಸಚಿವರು ಮತ್ತು ಇಲಾಖೆ ಅಧಿಕಾರಿಗಳು ಆರೋಪಿಸಿದ್ದಾರೆಯೇ ಎಂಬ ಆಯಾಮದಲ್ಲಿ ಪ್ರಕರಣದ ತನಿಖೆ ನಡೆಸಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com