ವಿಜಯನಗರ: ಚಿರತೆ ದಾಳಿಯಿಂದ ಬೈಕ್ ಸವಾರನಿಗೆ ಗಂಭೀರ ಗಾಯ; ಸ್ಥಳೀಯರಲ್ಲಿ ಆತಂಕ

ವಿಜಯನಗರ ಜಿಲ್ಲೆಯ ಹಡಗಲಿ ತಾಲೂಕಿನಲ್ಲಿ ಸೋಮವಾರ ಬೈಕ್ ಸವಾರೊಬ್ಬರ ಮೇಲೆ ಚಿರತೆ ದಾಳಿ ಮಾಡಿದ್ದು, ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ವಿಜಯನಗರ: ವಿಜಯನಗರ ಜಿಲ್ಲೆಯ ಹಡಗಲಿ ತಾಲೂಕಿನಲ್ಲಿ ಸೋಮವಾರ ಬೈಕ್ ಸವಾರೊಬ್ಬರ ಮೇಲೆ ಚಿರತೆ ದಾಳಿ ಮಾಡಿದ್ದು, ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಪ್ರವೀಣ್ ಎಂದು ಗುರುತಿಸಲಾದ ಯುವಕ ಮಾಗಳ-ಹಿರೇಹಡಗಲಿ ಗ್ರಾಮಗಳ ನಡುವೆ ಸಂಚರಿಸುತ್ತಿದ್ದಾಗ ಈ ಘಟನೆ ನಡೆದಿದೆ. 
ಪ್ರವೀಣ್‌ನ ಗಲಾಟೆ, ಕಿರುಚಾಟ ಕೇಳಿದ ರೈತರು ಹಾಗೂ ದಾರಿಹೋಕರು ಆತನ ಸಹಾಯಕ್ಕೆ ಧಾವಿಸಿದ್ದು, ಚಿರತೆ ಸ್ಥಳದಿಂದ ಪರಾರಿಯಾಗಿದೆ. ಗಾಯಗೊಂಡ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಲ್ಲಿನ ಬಹುತೇಕ ಗ್ರಾಮಸ್ಥರು ಈ ಭಾಗದಲ್ಲಿ ತಮ್ಮ ಕುಟುಂಬ ಸದಸ್ಯರೊಂದಿಗೆ ಬೈಕ್, ಸ್ಕೂಟರ್‌ಗಳಲ್ಲಿ ಸಂಚರಿಸುತ್ತಿದ್ದು, ವಿವಿಧ ಹಳ್ಳಿಗಳಿಂದ ಹೆಚ್ಚಿನ ಸಂಖ್ಯೆಯ ಜನರು ಕಾರ್ಖಾನೆಗಳಿಗೆ ನಡೆದುಕೊಂಡು ಇದೇ ಮಾರ್ಗದಲ್ಲಿ ಹೋಗುತ್ತಾರೆ. ಹೀಗಾಗಿ, ಈ ಘಟನೆ ಜನರಲ್ಲಿ ಆತಂಕ ಮೂಡಿಸಿದೆ.

ಅರಣ್ಯ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ದನ, ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಚಿರತೆ ಇದೀಗ ಮನುಷ್ಯರ ಮೇಲೆ ದಾಳಿ ನಡೆಸುತ್ತಿದ್ದು, ಅನಾಹುತ ಸಂಭವಿಸುವ ಮುನ್ನ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಈ ಭಾಗದ ಜನರು ಆಗ್ರಹಿಸಿದ್ದಾರೆ.

ಇದೇ ಜಿಲ್ಲೆಯ ಹೊಸಪೇಟೆ ತಾಲೂಕಿನ ಗ್ರಾಮಗಳಲ್ಲೂ ಚಿರತೆ ಕಾಣಿಸಿಕೊಂಡಿದೆ. ಇತ್ತೀಚೆಗೆ ಅಧಿಕಾರಿಗಳು ನಡೆಸಿದ ಸಮೀಕ್ಷೆಯಲ್ಲಿ ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಚಿರತೆಗಳ ಹಾವಳಿ ಹೆಚ್ಚಿರುವುದು ಕಂಡುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com