ರಾಮನಗರ: ಮಕ್ಕಳ ಮೇಲೆ ಹರಿದ ಗೂಡ್ಸ್ ವಾಹನ; ಆಸ್ಪತ್ರೆಯಲ್ಲಿ ನಾಲ್ಕನೇ ಮಗು ಸಾವು, ಕುಟುಂಬಸ್ಥರ ಪ್ರತಿಭಟನೆ

ಗೊಲ್ಲರದೊಡ್ಡಿಯಲ್ಲಿ ಗೂಡ್ಸ್ ವಾಹನವೊಂದು ಶಾಲಾ ಮಕ್ಕಳಿಗೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ಸೋಮವಾರ ನಾಲ್ಕಕ್ಕೆ ಏರಿದೆ. ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮತ್ತೊಬ್ಬ ಬಾಲಕಿ ಭಾನುವಾರ ರಾತ್ರಿ ಮೃತಪಟ್ಟಿದ್ದು, ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಬಾಲಕಿ ಶವವನ್ನು ರಸ್ತೆ ಮಧ್ಯೆ ಇಟ್ಟು ಸೋಮವಾರ ಪ್ರತಿಭಟನೆ ನಡೆಸಿದರು.
ರಾಮನಗರ: ಮಕ್ಕಳ ಮೇಲೆ ಹರಿದ ಗೂಡ್ಸ್ ವಾಹನ; ಆಸ್ಪತ್ರೆಯಲ್ಲಿ ನಾಲ್ಕನೇ ಮಗು ಸಾವು, ಕುಟುಂಬಸ್ಥರ ಪ್ರತಿಭಟನೆ
ರಾಮನಗರ: ಮಕ್ಕಳ ಮೇಲೆ ಹರಿದ ಗೂಡ್ಸ್ ವಾಹನ; ಆಸ್ಪತ್ರೆಯಲ್ಲಿ ನಾಲ್ಕನೇ ಮಗು ಸಾವು, ಕುಟುಂಬಸ್ಥರ ಪ್ರತಿಭಟನೆ

ರಾಮನಗರ: ಜಿಲ್ಲೆಯ ಗೊಲ್ಲರದೊಡ್ಡಿಯಲ್ಲಿ ಗೂಡ್ಸ್ ವಾಹನವೊಂದು ಶಾಲಾ ಮಕ್ಕಳಿಗೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ಸೋಮವಾರ ನಾಲ್ಕಕ್ಕೆ ಏರಿದೆ. ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮತ್ತೊಬ್ಬ ಬಾಲಕಿ ಭಾನುವಾರ ರಾತ್ರಿ ಮೃತಪಟ್ಟಿದ್ದು, ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಬಾಲಕಿ ಶವವನ್ನು ರಸ್ತೆ ಮಧ್ಯೆ ಇಟ್ಟು ಸೋಮವಾರ ಬೆಳಗ್ಗೆ ಪ್ರತಿಭಟನೆ ನಡೆಸಿದರು.

ಆಗಸ್ಟ್ 9 ರಂದು ಅಪಘಾತ ಸಂಭವಿಸಿದ್ದು, ಈ ವೇಳೆ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವಿಗೀಡಾಗಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಮಗು ಮೂರು ದಿನಗಳ ನಂತರ ಸಾವಿಗೀಡಾಗಿತ್ತು. 

ಇದೀಗ ಗ್ರಾಮದ ರಾಜಣ್ಣ ಮತ್ತು ಶಾಂತಮ್ಮ ದಂಪತಿಯ ಎರಡನೇ ಪುತ್ರಿ 7 ವರ್ಷದ ಜ್ಞಾನವಿ ಸಾವಿಗೀಡಾಗಿದ್ದು, ಬೆಂಗಳೂರಿನ ಇಂದಿರಾಗಾಂಧಿ ಇನ್‌ಸ್ಟಿಟ್ಯೂಟ್ ಆಫ್ ಚೆಸ್ಟ್ ಡಿಸೀಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. 

ಕುಟುಂಬಸ್ಥರು, ಸಂಬಂಧಿಕರು ಹಾಗೂ ಸ್ಥಳೀಯರು ಬಾಲಕಿಯ ಶವವನ್ನು ರಾಮನಗರ-ಮಾಗಡಿ ರಸ್ತೆಯಲ್ಲಿ ಇಟ್ಟು ಪ್ರತಿಭಟನೆ ನಡೆಸಿದರು. ನಾಲ್ವರು ಮಕ್ಕಳನ್ನು ಬಲಿಪಡೆದ ಗೂಡ್ಸ್ ವಾಹನದ ಚಾಲಕನಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು. ಅಧಿಕಾರಿಗಳು ಸ್ಥಳಕ್ಕೆ ಬಂದು ಅಳಲು ಆಲಿಸಬೇಕು ಹಾಗೂ ಮೃತ ಮಕ್ಕಳ ಕುಟುಂಬಕ್ಕೆ ಅಗತ್ಯ ಪರಿಹಾರ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಮುಖಂಡ ಎಚ್‌ಡಿ ಕುಮಾರಸ್ವಾಮಿ ಅಪಘಾತದ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ ಮತ್ತು ಇಂತಹ ದುರಂತಗಳಿಗೆ ಕಾರಣವಾಗುವ ದುಡುಕಿನ ಮತ್ತು ನಿರ್ಲಕ್ಷ್ಯದ ಚಾಲನೆ ವಿರುದ್ಧ ಕ್ರಮ ಕೈಗೊಳ್ಳಲು ಮತ್ತು ಶಾಲಾ ಮಕ್ಕಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

'ಐದು ವರ್ಷದ ರೋಹಿತ್ ಮತ್ತು ಎಂಟು ವರ್ಷದ ಶಾಲಿನಿ ಗೂಡ್ಸ್ ವಾಹನದಡಿ ಸಿಲುಕಿ ಸಾವಿಗೀಡಾಗಿದ್ದಾರೆ. ಮಕ್ಕಳು ಟ್ಯೂಷನ್ ಮುಗಿಸಿ ಮನೆಗೆ ಹೋಗುತ್ತಿದ್ದಾಗ ಗೂಡ್ಸ್ ವಾಹನ ಡಿಕ್ಕಿ ಹೊಡೆದಿತ್ತು. ಗುಂಪಿನಲ್ಲಿ ಹೋಗುತ್ತಿದ್ದ ಇತರ ಮೂವರು ಮಕ್ಕಳಿಗೆ ಗಂಭೀರ ಗಾಯಗಳಾಗಿದ್ದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ' ಎಂದು ಅವರು ಹೇಳಿದರು.

ಚಾಲಕನ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದೆ. ಘಟನೆಯಲ್ಲಿ ಪ್ರಾಣ ಕಳೆದುಕೊಂಡ ಮಕ್ಕಳಿಗೆ ನನ್ನ ಹೃತ್ಪೂರ್ವಕ ಸಂತಾಪವನ್ನು ತಿಳಿಸುತ್ತೇನೆ. ಈ ದುಃಖವನ್ನು ತಡೆದುಕೊಳ್ಳುವ ಶಕ್ತಿಯನ್ನು ದೇವರು ಕುಟುಂಬಕ್ಕೆ ನೀಡಲಿ. ಗಾಯಗೊಂಡ ಮಕ್ಕಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com