ಡಿಸಿಎಂ ಡಿಕೆ ಶಿವಕುಮಾರ್
ಡಿಸಿಎಂ ಡಿಕೆ ಶಿವಕುಮಾರ್

ಕಾವೇರಿ ವಿವಾದ: ನಾವು ನೆರೆಹೊರೆಯವರು, ತಮಿಳುನಾಡು ಜೊತೆ ಹೋರಾಟ ಬಯಸಲ್ಲ- ಡಿಸಿಎಂ ಡಿಕೆ ಶಿವಕುಮಾರ್

ಕರ್ನಾಟಕ ಮತ್ತು ತಮಿಳುನಾಡು ನೆರೆಹೊರೆಯ ರಾಜ್ಯಗಳಾಗಿದ್ದು, ಕಾವೇರಿ ವಿವಾದದಲ್ಲಿ ಉಭಯ ರಾಜ್ಯಗಳು ಪರಸ್ಪರ ಹೋರಾಡಲು ಬಯಸುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
Published on

ಬೆಂಗಳೂರು: ಕರ್ನಾಟಕ ಮತ್ತು ತಮಿಳುನಾಡು ನೆರೆಹೊರೆಯ ರಾಜ್ಯಗಳಾಗಿದ್ದು, ಕಾವೇರಿ ವಿವಾದದಲ್ಲಿ ಉಭಯ ರಾಜ್ಯಗಳು ಪರಸ್ಪರ ಹೋರಾಡಲು ಬಯಸುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಪ್ರತ್ಯೇಕ ಪೀಠ ರಚನೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದ ನಂತರ ಮಾತನಾಡಿದ ಡಿಕೆ ಶಿವಕುಮಾರ್, ತಮಿಳುನಾಡಿಗೆ ಪ್ರತಿದಿನ 24,000 ಕ್ಯೂಸೆಕ್ಸ್ ನೀರು ಬಿಡುಗಡೆಗೆ ಉನ್ನತ ನ್ಯಾಯಾಲಯ ಆದೇಶಿಸಿದೆ. ಆದರೆ, ಕರ್ನಾಟಕ ರಾಜ್ಯ ನೀರಿನ ಕೊರತೆ ಎದುರಿಸುತ್ತಿದೆ ಎಂದರು. 

ಪ್ರತ್ಯೇಕ ಪೀಠ ರಚನೆಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಆಗಸ್ಟ್ ವರೆಗೂ 10,000 ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಲು ನಮಗೆ ಸೂಚಿಸಲಾಗಿತ್ತು. ನಮ್ಮ ಅಣೆಕಟ್ಟುಗಳಲ್ಲಿ ನೀರಿನ ಕೊರತೆಯಿರುವುದಾಗಿ ಕನಿಷ್ಠ ಪಕ್ಷ ಸಮಯಾವಕಾಶದ ಅಗತ್ಯವಿದೆ ಎಂಬುದು ನಮ್ಮ ಬೇಡಿಕೆಯಾಗಿದೆ ಎಂದು ಅವರು ತಿಳಿಸಿದರು. 

ಕಾವೇರಿ ನೀರು ಬಿಡುಗಡೆ ಮೂಲಕ INDIA ಮೈತ್ರಿಕೂಟವಾದ ತಮಿಳುನಾಡು ಸಮಾಧಾನಪಡಿಸಲು ಪ್ರಯತ್ನಿಸಲಾಗುತ್ತಿದೆ ಎಂಬ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಹೇಳಿಕೆ ವಿರುದ್ಧ ವಾಗ್ದಾಳಿ ನಡೆಸಿದ ಶಿವಕುಮಾರ್, ಪರಸ್ಪರ ಗೌರವಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಅದನ್ನು ವಿಪಕ್ಷಗಳ ನಾಯಕರು ಅರ್ಥ ಮಾಡಿಕೊಳ್ಳಬೇಕಾಗಿದೆ ಎಂದರು.

ತಮಿಳುನಾಡು ನೀರು ಬಳಕೆ ವಿಚಾರದಲ್ಲಿ ನಾವು ಏನನ್ನು ಮಾಡಿಲ್ಲ, ಜೆಡಿಎಸ್, ಬಿಜೆಪಿ ಅಧಿಕಾರದಲ್ಲಿದ್ದಾಗ ಕಾವೇರಿ ವಿಚಾರದಲ್ಲಿ ಏನು ಮಾಡಿದರು ಎಂಬುದು ಗೊತ್ತಿದೆ. ಈ ವಿಚಾರದಲ್ಲಿ ಕೇಂದ್ರ ಸರ್ಕಾರ ಅಫಿಡವಿಟ್ ಸಲ್ಲಿಸಬೇಕು ಆದರೆ, ಅವರು ಮಮಾಡಿಲ್ಲ. ನಾವು ತಮಿಳುನಾಡಿಗೆ ಎಷ್ಟು ಪ್ರಮಾಣದ ನೀರು ಬಿಟ್ಟಿದ್ದೇವೆ ಎಂಬುದರ ಬಗ್ಗೆ ಎಲ್ಲಾ ದಾಖಲೆಗಳಿವೆ. ಎಲ್ಲಾ ದಾಖಲೆಗಳನ್ನು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.

ಕಾವೇರಿ ವಿಚಾರವಾಗಿ ಆಗಸ್ಟ್ 23 ರಂದು ಸರ್ವ ಪಕ್ಷ ಸಭೆ ಕರೆಯಲಾಗಿದೆ. ಕರ್ನಾಟಕ ಮತ್ತು ತಮಿಳುನಾಡಿಗೆ ಸಂಬಂಧಿಸಿದ ಧೀರ್ಘಕಾಲದ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಸಲಹೆ ನೀಡಲು ಕೆಲ ಹಿರಿಯ ಸಂಸದ ಸದಸ್ಯರನ್ನು ಕೂಡಾ ಆಹ್ವಾನಿಸಲಾಗಿದೆ ಎಂದು ಡಿಕೆ ಶಿವಕುಮಾರ್ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com