ಸುಳ್ಳು ಸುದ್ದಿ ಪತ್ತೆಗೆ ಸರ್ಕಾರ ಕ್ರಮ; ಫ್ಯಾಕ್ಟ್ ಚೆಕ್ ಘಟಕ ರಚನೆಗೆ ಸಿಎಂ ಅನುಮೋದನೆ

ಪ್ರಜಾಪ್ರಭುತ್ವಕ್ಕೆ ಬೆದರಿಕೆ ಹಾಗೂ ಸಮಾಜದ ದೃವೀಕರಣಕ್ಕೆ ಸುಳ್ಳು ಸುದ್ದಿಗಳು ಕಾರಣವಾಗಿವೆ. ಈ ಸಂಬಂಧ ಸುಳ್ಳು ಸುದ್ದಿ ಹಬ್ಬಿಸುವವರ ಹೆಡೆಮುರಿ ಕಟ್ಟಲು, ನಕಲಿ ಸಂದೇಶಗಳಿಗೆ ಬ್ರೇಕ್ ಹಾಕಲು ಸರ್ಕಾರ ಮುಂದಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಪ್ರಜಾಪ್ರಭುತ್ವಕ್ಕೆ ಬೆದರಿಕೆ ಹಾಗೂ ಸಮಾಜದ ದೃವೀಕರಣಕ್ಕೆ ಸುಳ್ಳು ಸುದ್ದಿಗಳು ಕಾರಣವಾಗಿವೆ. ಈ ಸಂಬಂಧ ಸುಳ್ಳು ಸುದ್ದಿ ಹಬ್ಬಿಸುವವರ ಹೆಡೆಮುರಿ ಕಟ್ಟಲು, ನಕಲಿ ಸಂದೇಶಗಳಿಗೆ ಬ್ರೇಕ್ ಹಾಕಲು ಸರ್ಕಾರ ಮುಂದಾಗಿದೆ.

ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು, ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ಸ್ಥಾಪನೆ ಸೇರಿದಂತೆ ಅಗತ್ಯ ಇರುವ ಎಲ್ಲಾ ನಿಯಮ ಮತ್ತು ಕಾನೂನು ರೂಪಿಸುವ ಯೋಜನೆಗೆ ಅನುಮೋದನೆ ನೀಡಿದೆ,

ಸೋಮವಾರ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸೈಬರ್ ಸುರಕ್ಷತೆಗೆ ಸಂಬಂಧಿಸಿದಂತೆ ಸಭೆಯಲ್ಲಿ ಅವರು ಈ ತೀರ್ಮಾನ ಮಾಡಿದರು. ಸುಳ್ಳು ಸುದ್ದಿಗಳ ಮತ್ತು ಸುಳ್ಳು ಸುದ್ದಿ ಸೃಷ್ಟಿಸುವ ಸಿಂಡಿಕೇಟ್ ಗಳ ಪತ್ತೆ, ಸುಳ್ಳು ಸುದ್ದಿ ಪ್ರಸಾರಕ್ಕೆ ತಡೆ, ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವ ಮೂರು ಹಂತಗಳ ಕ್ರಮಕ್ಕೆ ಮುಂದಿನ ಕೆಲವೇ ದಿನಗಳಲ್ಲಿ ಬ್ರೇಕ್ ಹಾಕಲು ಸಭೆಯಲ್ಲಿ ನಿರ್ಧರಿಸಲಾಯಿತು.

ಪ್ಯಾಕ್ಟ್ ಚೆಕ್ ಘಟಕವು ಮೇಲುಸ್ತುವಾರಿ ಸಮಿತಿ, SOPC ಪರಿಶೀಲನೆ, ನೋಡಲ್ ಅಧಿಕಾರಿಗಳ ನೇಮಕ ಸೇರಿದಂತೆ ಸತ್ಯ ತಪಾಸಣೆ ತಂಡ ವಿಶ್ಲೇಷಣೆ ತಂಡದ ಸದಸ್ಯರನ್ನು ಒಳಗೊಂಡಿರಲಿದೆ.

ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, ಬೆಂಗಳೂರು ಪೊಲೀಸ್ ಕೂಡ ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಯಾಶೀಲವಾಗಿದ್ದರೂ, ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ಅಗತ್ಯವಿದೆ. AI ಬಳಕೆ ಮಾಡಿ ಡೀಪ್ ಫೇಕ್ ಕೂಡ ಉಪಯೋಗ ಮಾಡಲಾಗುತ್ತಿದೆ. ಇದು ಸುಳ್ಳು ಸುದ್ದಿ ಹರಡುವವರಿಗೆ ಅನುಕೂಲವಾಗುತ್ತದೆ ಎಂದು ಹೇಳಿದರು.

ಗೃಹ ಸಚಿವ ಜಿ.ಪರಮೇಶ್ವರ ಮಾತನಾಡಿ, ಫೇಕ್ ಸುದ್ದಿ ಜಾಲ ಜಾಗತಿಕವಾಗಿ ಬಾಲ್ಯಾವಸ್ಥೆಯಲ್ಲಿದ್ದರೂ ಮುಂದೆ ವ್ಯಾಪಕವಾಗಿ ಬಳಕೆಯಾಗುವ ಸಾಧ್ಯತೆಯಿದೆ. ಸುಳ್ಳು ಸುದ್ದಿ ಬಳಕೆ ಮಾಡುವವರಿಗೆ ಶಿಕ್ಷೆ ಆಗಬೇಕು. ಈ ಘಟಕವನ್ನು ರಚಿಸಿ, ಸಾಮರ್ಥ್ಯ ಹೆಚ್ಚಿಸುವ ಕೆಲಸ ಆಗಬೇಕು ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com