ನವೆಂಬರ್ ಮೊದಲ ವಾರದಲ್ಲಿ ಹಂಪಿ ಉತ್ಸವ?

ಈ ಬಾರಿಯ ಹಂಪಿ ಉತ್ಸವನ್ನು ನವೆಂಬರ್ ಮೊದಲ ವಾರದಲ್ಲಿ ನಡೆಯುವ ಸಾಧ್ಯತೆಗಳಿದ್ದು, ಉತ್ಸವ ನಡೆಸಲು ಸಿದ್ಧತೆಗಳು ಆರಂಭವಾಗಿವೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಹೊಸಪೇಟೆ: ಈ ಬಾರಿಯ ಹಂಪಿ ಉತ್ಸವನ್ನು ನವೆಂಬರ್ ಮೊದಲ ವಾರದಲ್ಲಿ ನಡೆಯುವ ಸಾಧ್ಯತೆಗಳಿದ್ದು, ಉತ್ಸವ ನಡೆಸಲು ಸಿದ್ಧತೆಗಳು ಆರಂಭವಾಗಿವೆ.

ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಬಿ ಝಡ್ ಜಮೀರ್ ಅಹಮದ್ ಖಾನ್ ಈ ಸಂಬಂಧ ಮಾಹಿತಿ ನೀಡಿದ್ದಾರೆ. ಉತ್ಸವ ಕುರಿತು ಸಚಿವರು ಸ್ಥಳೀಯ ಆಡಳಿತ ಮಂಡಳಿ ಹಾಗೂ ಇತರೆ ಇಲಾಖೆಗಳ ಜೊತೆ ಚರ್ಚೆ ಆರಂಭಿಸಿದ್ದಾರೆ.

ಜಿಲ್ಲಾಡಳಿತ ಮಂಡಳಿ ಕಳೆದ ವಾರ ಅಧಿಕಾರಿಗಳೊಂದಿಗೆ ಮೊದಲ ಸುತ್ತಿನ ಸಭೆ ನಡೆಸಿದ್ದು, ಶೀಘ್ರದಲ್ಲೇ ಉಪ ಸಮಿತಿ ರಚಿಸಲಾಗುವುದು. ಹಣ ಮಂಜೂರಾತಿ ಸೇರಿದಂತೆ ಎಲ್ಲಾ ಸಿದ್ಧತೆಗಳು ಆರಂಭವಾಗಿವೆ ಎಲ್ಲವೂ ಅಂದುಕೊಂಡಂತೆ ನಡೆದರೆ ನವೆಂಬರ್ 3ರಿಂದ 5ರವರೆಗೆ ಮೂರು ದಿನಗಳ ಕಾಲ ಕಾರ್ಯಕ್ರಮ ನಡೆಯಲಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಉತ್ಸವ ಕುರಿತು ಸಿದ್ಧತೆಗಳ ಆರಂಭಿಸಲಾಗಿದೆ. ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗಿದೆ, ನವೆಂಬರ್‌ನಲ್ಲಿ ಕಾರ್ಯಕ್ರಮ ನಡೆಸಬೇಕು ಎಂದು ಸ್ಥಳೀಯ ನಿವಾಸಿಗಳು ಹಾಗೂ ಸಾಮಾಜಿಕ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಯೋಜನೆ ರೂಪಿಸುವಂತೆ ಜಿಲ್ಲಾಡಳಿತ ಮಂಡಳಿಗೆ ಸೂಚನೆ ನೀಡಲಾಗಿದೆ. ಒಮ್ಮೆ ಯೋಜನೆಗಳು ಪೂರ್ಣಗೊಂಡರೆ, ಖರ್ಚುವೆಚ್ಚಗಳ ಅಂದಾಜು ಮಾಡಿ, ಸರ್ಕಾರದ ಮುಂದಿಡಲಾಗುವುದು. ಮುಖ್ಯಮಂತ್ರಿಗಳು ಚರ್ಚೆ ನಡೆಸಿ ಹಣ ಬಿಡುಗಡೆ ಮಾಡುತ್ತಾರೆಂದು ಜಮೀರ್ ಅವರು ಹೇಳಿದರು.

ವಿಜಯನಗರ ಜಿಲ್ಲಾಡಳಿತದ ಅಧಿಕಾರಿಯೊಬ್ಬರು ಮಾತನಾಡಿ, ಈ ಬಾರಿಯ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕನಿಷ್ಠ ಎರಡು ತಿಂಗಳ ಸಿದ್ಧತೆ ಅಗತ್ಯವಿದೆ. ಇತ್ತೀಚೆಗೆ ಇಲಾಖೆಗಳೊಂದಿಗೆ ಸಭೆ ನಡೆಸಲಾಗಿದ್ದು, ಯೋಜನೆ ಮತ್ತು ದಿನಾಂಕಗಳನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು. ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆಯಂತೆ ಶೀಘ್ರವೇ ಉಪ ಸಮಿತಿ ರಚಿಸಿ ಹಂಪಿ ಉತ್ಸವ ಯಶಸ್ವಿಗೆ ಕೆಲಸ ಆರಂಭಿಸಲಾಗುತ್ತದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com