ಚಂದ್ರನ ಅಂಗಳದಲ್ಲಿ ಇತಿಹಾಸ ಬರೆಯಲು ವಿಕ್ರಮ್ ಲ್ಯಾಂಡರ್ ಸನ್ನದ್ಧ: ಸಿಎಂ ಸಿದ್ದರಾಮಯ್ಯ ಸೇರಿ ಹಲವರಿಂದ ಶುಭ ಹಾರೈಕೆ

ಚಂದ್ರಯಾನ-3 ಯೋಜನೆಯ ಭಾಗವಾಗಿರುವ ವಿಕ್ರಂ ಲ್ಯಾಂಡರ್ ಇಂದು ಸಂಜೆ 6.04 ನಿಮಿಷಕ್ಕೆ ಚಂದ್ರನ ನೆಲಕ್ಕಿಳಿದು ಇತಿಹಾಸ ಬರೆಯಲು ಸನ್ನದ್ಧವಾಗಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಶುಭಹಾರೈಸಿದ್ದಾರೆ.
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಚಂದ್ರಯಾನ-3 ಯೋಜನೆಯ ಭಾಗವಾಗಿರುವ ವಿಕ್ರಂ ಲ್ಯಾಂಡರ್ ಇಂದು ಸಂಜೆ 6.04 ನಿಮಿಷಕ್ಕೆ ಚಂದ್ರನ ನೆಲಕ್ಕಿಳಿದು ಇತಿಹಾಸ ಬರೆಯಲು ಸನ್ನದ್ಧವಾಗಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಶುಭಹಾರೈಸಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಕೋಟ್ಯಾಂತರ ಭಾರತೀಯರು ಕಾತುರದಿಂದ ಕಾಯುತ್ತಿರುವ ಚಂದ್ರಯಾನ-3 ರ ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನ ಮೇಲ್ಮೈಯಲ್ಲಿ ಇಳಿಯಲಿ, ಆ ಮೂಲಕ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ವಿಜ್ಞಾನಿಗಳ ದಶಕಗಳ ಪರಿಶ್ರಮ ಕೈಗೂಡಲಿ ಎಂದು ಹಾರೈಸುತ್ತೇನೆ. ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಇಳಿಯುವ ಐತಿಹಾಸಿಕ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ನಾನು ಕೂಡ ಉತ್ಸುಕನಾಗಿದ್ದೇನೆಂದು ಹೇಳಿದ್ದಾರೆ.

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಟ್ವೀಟ್ ಮಾಡಿ, ‘ಇಸ್ರೋ ಸಂಸ್ಥೆಯನ್ನು ನಾನು ನನ್ನ ಸಹ ಭಾರತೀಯರೊಂದಿಗೆ ಸೇರಿ ಅಭಿನಂದಿಸುತ್ತೇನೆ. ಇಸ್ರೋ ವಿಶ್ವ ದರ್ಜೆಯ ವೈಜ್ಞಾನಿಕ ಸಂಸ್ಥೆಯಾಗಿದ್ದು, ದಶಕಗಳಿಂದ ನಮಗೆಲ್ಲರಿಗೂ ಹೆಮ್ಮೆ ತಂದಿದೆ. ಅವರ ಅಮೋಘ ಸಾಧನೆಗಳು ನಮ್ಮನ್ನು ವಿಶ್ವದ ಅಗ್ರಸ್ಥಾನದಲ್ಲಿರಿಸಿದೆ. ದೇವರು ನಮ್ಮ ರಾಷ್ಟ್ರ ಮತ್ತು ನಮ್ಮ ವಿಜ್ಞಾನಿಗಳನ್ನು ಆಶೀರ್ವದಿಸಲಿ’ ಎಂದು ಚಂದ್ರಯಾನ-3ಕ್ಕೆ ಶುಭಕೋರಿದ್ದಾರೆ.

ಕೇಂದ್ರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಟ್ವೀಟ್ ಮಾಡಿ, ಕೋಟ್ಯಾಂತರ ಭಾರತೀಯರ ಪ್ರಾರ್ಥನೆ, ಹಾರೈಕೆ ಎಲ್ಲವೂ ಇಸ್ರೋದ ಸಾಹಸಕ್ಕೆ ಸಹಕಾರಿಯಾಗಲಿ. ಚಂದ್ರನ ಅಂಗಳದಲ್ಲಿ ಇಳಿಯಲು ಸಜ್ಜಾದ ಚಂದ್ರಯಾನ-3 ಯಶಸ್ವಿಯಾಗಲಿ ಎಂದು ಶುಭ ಹಾರೈಸುತ್ತೇನೆಂದು ಹೇಳಿದ್ದಾರೆ.

ಶಿಕಾರಿಪುರ ಬಿಜೆಪಿ ಶಾಸಕ ಬಿವೈ ವಿಜಯೇಂದ್ರ ಟ್ವೀಟ್ ಮಾಡಿ, ವಿಶ್ವವೇ ಕಾತುರದಿಂದ ಕಾಯುತ್ತಿರುವ ‘ಚಂದ್ರಯಾನ-3’ರ ಚಂದ್ರಸ್ಪರ್ಶ ಭಾರತದ ಐತಿಹಾಸಿಕ ಸಾಧನೆಗೆ ಕ್ಷಣಗಣನೆ ಆರಂಭವಾಗಿದೆ. ನಮ್ಮ ವಿಜ್ಞಾನಿಗಳ ಅಪಾರ ಪರಿಶ್ರಮದಿಂದ, ಚಂದ್ರನ ಸನಿಹದಲ್ಲಿರುವ ಕಕ್ಷೆಯಲ್ಲಿ ವಿಕ್ರಮ್ ಖಂಡಿತಾ ಚಂದಿರನ ಮೇಲೆ ಅಡಿ ಇಡಲಿದ್ದಾನೆ. ಸಾಪ್ಟ್ ಲ್ಯಾಂಡಿಂಗ್ ಯಶಸ್ಸಿಯಾಗಲೆಂದು ಹಾರೈಸೋಣ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com