ವೇತನ ನೀಡುವಂತೆ ಆಗ್ರಹ: ಮೈಮೇಲೆ ಮಲ ಸುರಿದುಕೊಂಡು ಪೌರಕಾರ್ಮಿಕರ ಪ್ರತಿಭಟನೆ

15 ತಿಂಗಳಿಂದ ವೇತನ ನೀಡಿಲ್ಲ ಎಂದು ಆರೋಪಿಸಿ ಇಬ್ಬರು ಪೌರಕಾರ್ಮಿಕರು ತಮ್ಮ ಮೈಮೇಲೆ ಮಲ ಸುರಿದುಕೊಂಡು ಪ್ರತಿಭಟನೆ ನಡೆಸಿದ ಘಟನೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ಅವರ ಸ್ವಕ್ಷೇತ್ರ ಕನಕಪುರದಲ್ಲಿ ಮಂಗಳವಾರ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: 15 ತಿಂಗಳಿಂದ ವೇತನ ನೀಡಿಲ್ಲ ಎಂದು ಆರೋಪಿಸಿ ಇಬ್ಬರು ಪೌರಕಾರ್ಮಿಕರು ತಮ್ಮ ಮೈಮೇಲೆ ಮಲ ಸುರಿದುಕೊಂಡು ಪ್ರತಿಭಟನೆ ನಡೆಸಿದ ಘಟನೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ಅವರ ಸ್ವಕ್ಷೇತ್ರ ಕನಕಪುರದಲ್ಲಿ ಮಂಗಳವಾರ ನಡೆದಿದೆ.

ಕನಕಪುರ ತಾಲೂಕಿನ ಕಲ್ಲಹಳ್ಳಿ ಗ್ರಾಮದ ಪಂಚಾಯತ್ ಕಚೇರಿಯ ಮುಂಭಾಗ ಗುತ್ತಿಗೆ ಆಧಾರದ ಮೇಲೆ ಪೌರಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ರಂಗಯ್ಯ ಮತ್ತು ಸುರೇಶ್ ಎಂಬವವರು ಸಂಬಳ ನೀಡುವಂತೆ ಒತ್ತಾಯಿಸಿ ಮಲ ಸುರಿದುಕೊಂಡು ಪ್ರತಿಭಟನೆ ನಡೆಸಿದ್ದಾರೆ.

15 ತಿಂಗಳಿಂದ ವೇತನ ಮಂಜೂರಾಗಿಲ್ಲ, ಪದೇ ಪದೇ ಮನವಿ ಮಾಡಿದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು.

ಇದರಿಂದ ಎಚ್ಚೆತ್ತ ಪಂಚಾಯತ್​ ಆಡಳಿತ ಬಾಕಿ ಸಂಬಳ 3.20 ಲಕ್ಷ ರೂಪಾಯಿಯನ್ನು ಪಾವತಿ ಮಾಡಿದೆ. ಬಳಿಕ ಇಬ್ಬರು ಪೌರಕಾರ್ಮಿಕರು ತಮ್ಮ ಪ್ರತಿಭಟನೆಯನ್ನು ಕೈಬಿಟ್ಟಿದ್ದಾರೆ.

ಈ ಬೆಳವಣಿಗೆಗೆ ಖಂಡನೆ ವ್ಯಕ್ತಪಡಿಸಿರುವ ಜಯ ಕರ್ನಾಟಕ ಜನಪರ ವೇದಿಕೆಯ ರಾಜ್ಯ ಸಲಹೆಗಾರ ಹಾಗೂ ಕನಕಪುರ ನಿವಾಸಿ ಕುಮಾರಸ್ವಾಮಿ ಅವರು, ಇದಕ್ಕೆ ಕಾರಣರಾದ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಒತ್ತಾಯಿಸಿ ಬುಧವಾರ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಮತ್ತು ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳುವಂತೆ ಜಿಲ್ಲಾ ಪಂಚಾಯತ್ ಸಿಇಒಗೆ ಮನವಿ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com