ಕನ್ನಡ ಪಠ್ಯ ಪುಸ್ತಕದಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಅವಮಾನ:  ಪಾಠ ಕೈಬಿಡಲು ಆಗ್ರಹಿಸಿ ವಿಪ್ರ ಒಕ್ಕೂಟದಿಂದ ಪ್ರತಿಭಟನೆ

8ನೇ ತರಗತಿ ಪಠ್ಯ ಪುಸ್ತಕದಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಅವಮಾನ ಮಾಡಲಾಗಿದ್ದು, ತಕ್ಷಣವೇ ಆ ಪಾಠವನ್ನು ತೆಗೆದುಹಾಕಬೇಕೆಂದು ಆಗ್ರಹಿಸಿ ಕಲಬುರಗಿಯಲ್ಲಿ ಇಂದು ವಿಪ್ರ ಸಂಘಟನೆಗಳ ಒಕ್ಕೂಟ ಪ್ರತಿಭಟನೆ ನಡೆಸಿತು.
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ
Updated on

ಬೆಂಗಳೂರು: 8ನೇ ತರಗತಿ ಪಠ್ಯ ಪುಸ್ತಕದಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಅವಮಾನ ಮಾಡಲಾಗಿದ್ದು, ತಕ್ಷಣವೇ ಆ ಪಾಠವನ್ನು ತೆಗೆದುಹಾಕಬೇಕೆಂದು ಆಗ್ರಹಿಸಿ ಕಲಬುರಗಿಯಲ್ಲಿ ಇಂದು ವಿಪ್ರ ಸಂಘಟನೆಗಳ ಒಕ್ಕೂಟ ಪ್ರತಿಭಟನೆ ನಡೆಸಿತು.
 
ಮಿನಿ ವಿಧಾನಸೌಧದ ಎದುರು ಸಮುದಾಯದ ಒಕ್ಕೂಟ ಪ್ರತಿಭಟನೆ ನಡೆಸಿದೆ. ಸರ್ದಾರ್ ವಲ್ಲಭ ಭಾಯ್ ಪಟೇಲ್ ವೃತ್ತದಿಂದ ಮಿನಿ ವಿಧಾನಸೌಧಕ್ಕೆ ಮೆರವಣಿಗೆಯಲ್ಲಿ ಆಗಮಿಸಿದ ಒಕ್ಕೂಟದ ಸದಸ್ಯರು ಜಿಲ್ಲಾಧಿಕಾರಿಗಳ ಕಚೇರಿ ಮೂಲಕ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ.

" 8 ನೇ ತರಗತಿಯ ಕನ್ನಡ ಪಠ್ಯ ಪುಸ್ತಕದಲ್ಲಿ ವಿಜಯಮಾಲ ರಂಗನಾಥ್ ಅವರು ಬರೆದಿರುವ ರಕ್ತದ ಗುಂಪು ಎಂಬ ಪಾಠದಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಅವಮಾನ ಮಾಡಲಾಗಿದೆ. ಇದರಿಂದ ಸಮುದಾಯದ ಭಾವನೆಗಳಿಗೆ ನೋವುಂಟಾಗಿದೆ ಎಂದು ಮನವಿ ಪತ್ರದಲ್ಲಿ ಒಕ್ಕೂಟ ತಿಳಿಸಿದೆ. 

ಪಠ್ಯಪುಸ್ತಕದಿಂದ ಪಾಠ ಹಿಂಪಡೆಯಬೇಕು, ಇಲ್ಲವಾದಲ್ಲಿ  ಬೇಡಿಕೆ  ಈಡೇರುವವರೆಗೂ ಹೋರಾಟ ದುವರಿಸುವುದಾಗಿ ಒಕ್ಕೂಟ ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com