ನಕಲಿ ಖಾತೆ ಸೃಷ್ಟಿಸಿ ಬೆಂಗಳೂರು ಪೊಲೀಸರ ವರ್ಚಸ್ಸಿಗೆ ಧಕ್ಕೆ ತರಲು ಯತ್ನ: ವೈದ್ಯಕೀಯ ವಿದ್ಯಾರ್ಥಿ ಬಂಧನ

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ನಕಲಿ ಖಾತೆ ಸೃಷ್ಟಿಸಿ ಬೆಂಗಳೂರು ಪೊಲೀಸರ ವರ್ಚಸ್ಸಿಗೆ ಧಕ್ಕೆ ತರಲು ಯತ್ನಿಸಿದ ಹಿನ್ನೆಲೆಯಲ್ಲಿ ವೈದ್ಯಕೀಯ ವಿದ್ಯಾರ್ಥಿಯನ್ನ ಬಂಧನಕ್ಕೊಳಪಡಿಸಲಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ನಕಲಿ ಖಾತೆ ಸೃಷ್ಟಿಸಿ ಬೆಂಗಳೂರು ಪೊಲೀಸರ ವರ್ಚಸ್ಸಿಗೆ ಧಕ್ಕೆ ತರಲು ಯತ್ನಿಸಿದ ಹಿನ್ನೆಲೆಯಲ್ಲಿ ವೈದ್ಯಕೀಯ ವಿದ್ಯಾರ್ಥಿಯನ್ನ ಬಂಧನಕ್ಕೊಳಪಡಿಸಲಾಗಿದೆ.

ತಮಿಳುನಾಡು ಮೂಲದ ಮಗೇಶ್ ಕುಮಾರ್ ಬಂಧಿತ ವಿದ್ಯಾರ್ಥಿಯಾಗಿದ್ದಾನೆ. ನಗರದ ಪೊಲೀಸರ ವರ್ಚಸ್ಸಿಗೆ ಧಕ್ಕೆ ತರುವ ಸಲುವಾಗಿ ವಿದ್ಯಾರ್ಥಿ, ಬೆಂಗಳೂರು ಪೊಲೀಸರ ಅಧಿಕೃತ ಟ್ವಿಟರ್ ಖಾತೆ ಹೋಲುವ ರೀತಿಯಲ್ಲಿ ಖಾತೆಯನ್ನು ಸೃಷ್ಟಿಸಿದ್ದ.

ಐಪಿಎಲ್ ಪಂದ್ಯಾವಳಿ, ಅಂತರಾಷ್ಟ್ರೀಯ ಕ್ರಿಕೆಟ್ ಪಂದ್ಯಾವಳಿ ಕುರಿತು ಭಾರತೀಯ ಕ್ರಿಕೆಟ್ ಆಟಗಾರರನ್ನು ಟೀಕೆ ಮಾಡಲು ಈ ಖಾತೆಯನ್ನು ಬಳಸಿಕೊಳ್ಳುತ್ತಿದ್ದ. ಅಲ್ಲದೆ, ಸೆಲೆಬ್ರಿಟಿಗಳನ್ನೂ ಟಾರ್ಗೆಟ್ ಮಾಡುತ್ತಿದ್ದ.

ಈ ಖಾತೆಯನ್ನು ಗಮನಿಸಿದ ನಗರದ ಪೊಲೀಸರು, ಖಾತೆಯನ್ನು ನಿಷ್ಕ್ರಿಯಗೊಳ್ಳುವಂತೆ ಮಾಡಿದ್ದು, ವಿದ್ಯಾರ್ಥಿಯನ್ನು ಬಂಧನಕ್ಕೊಳಪಡಿಸಿದ್ದಾರೆ. ವಿಚಾರಣೆ ಬಳಿಕ ವಿದ್ಯಾರ್ಥಿಯನ್ನು ಬಿಡುಗಡೆ ಮಾಡಿದ್ದಾರೆ. ಮಗೇಶ್ ವಿರುದ್ಧ ಸೈಬರ್ ಕ್ರೈಂ ಪೊಲೀಸರು. ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com