ಚಂದ್ರಯಾನ-3 ಯಶಸ್ಸಿನ ಸಂಭ್ರಮಾಚರಣೆಯಲ್ಲಿ ವಿದ್ಯಾರ್ಥಿಗಳು
ಚಂದ್ರಯಾನ-3 ಯಶಸ್ಸಿನ ಸಂಭ್ರಮಾಚರಣೆಯಲ್ಲಿ ವಿದ್ಯಾರ್ಥಿಗಳು

ಚಂದ್ರಯಾನ-3 ಐತಿಹಾಸಿಕ ಲ್ಯಾಂಡಿಂಗ್: ಎಲ್ಲೆಲ್ಲೂ ಸಂಭ್ರಮಾಚರಣೆ, ಗಣ್ಯರಿಂದ ವಿಜ್ಞಾನಿಗಳಿಗೆ ಮೆಚ್ಚುಗೆಯ ಮಹಾಪೂರ!

ಚಂದ್ರನ ದಕ್ಷಿಣ ಧ್ರುವದಲ್ಲಿ ವಿಕ್ರಮ್ ಲ್ಯಾಂಡರ್ ಆಗಿದ್ದು, ಚಂದ್ರಯಾನ-3 ಯಶಸ್ವಿಯಾದ ಬೆನ್ನಲ್ಲೇ, ಎಲ್ಲೆಲ್ಲೂ ಸಂಭ್ರಮಾಚರಣೆ ಮನೆ ಮಾಡಿದೆ.  

ಬೆಂಗಳೂರು: ಚಂದ್ರನ ದಕ್ಷಿಣ ಧ್ರುವದಲ್ಲಿ ವಿಕ್ರಮ್ ಲ್ಯಾಂಡರ್ ಆಗಿದ್ದು, ಚಂದ್ರಯಾನ-3 ಯಶಸ್ವಿಯಾದ ಬೆನ್ನಲ್ಲೇ, ಎಲ್ಲೆಲ್ಲೂ ಸಂಭ್ರಮಾಚರಣೆ ಮನೆ ಮಾಡಿದೆ. ಬುಧವಾರ ಬೆಂಗಳೂರಿನ ಜವಾಹರಲಾಲ್ ನೆಹರು ತಾರಾಲಯದಲ್ಲಿ ನೆರೆದಿದ್ದ ವಿದ್ಯಾರ್ಥಿಗಳು, ಹಿರಿಯ ನಾಗರಿಕರು, ಇಸ್ರೋ ಮಾಜಿ ವಿಜ್ಞಾನಿಗಳು ಸೇರಿದಂತೆ ನೂರಾರು ಜನರು ತಮ್ಮ ಕುಟುಂಬ ಸದಸ್ಯರೊಂದಿಗೆ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡು ಪರಸ್ಪರ ಅಭಿನಂದನೆ ಸಲ್ಲಿಸಿದರು. ಒಂದು ರೀತಿಯ ಹಬ್ಬದ ವಾತವಾರಣವೇ ಕಂಡುಬಂದಿತು. 

ಇಸ್ರೋಗೆ ಇದೊಂದು ಮಹತ್ವದ ಕ್ಷಣ ಎಂದು ಬುಧವಾರ ತಾರಾಲಯದಲ್ಲಿದ್ದ ಇಸ್ರೋ ವಿಜ್ಞಾನಿಯೊಬ್ಬರು ಭಾವನಾತ್ಮಕವಾಗಿ ಹೇಳಿದರು. ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್‌ಎಸ್ ಬೋಸ್ ರಾಜು ಮತ್ತಿತರರು ದೊಡ್ಡ ಪರದೆಯಲ್ಲಿ ಪ್ರಸಾರವಾದ  ವಿಕ್ರಮ್ ಸಾಫ್ಟ್ ಲ್ಯಾಂಡಿಂಗ್ ಅನ್ನು ವೀಕ್ಷಿಸಿದರು. ನಂತರ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿದ ಸಚಿವರು,  ನಮ್ಮ ವಿಜ್ಞಾನಿಗಳ ಬಗ್ಗೆ ನಾವು ಹೆಮ್ಮೆಪಡುತ್ತೇವೆ. ಚಿಕ್ಕ ವಯಸ್ಸಿನಲ್ಲಿ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಧರ್ಮವನ್ನು ಅಳವಡಿಸಲು ಕ್ರಿಯಾ ಯೋಜನೆಯನ್ನು ರೂಪಿಸಲು ನಾವು ಯೋಚಿಸುತ್ತಿದ್ದೇವೆ ಎಂದು ತಿಳಿಸಿದರು. 

ತನ್ನನ್ನು ಹೆಸರಿಸಲು ಇಚ್ಛಿಸದ ಹೆಮ್ಮೆಯ ಭಾರತೀಯ ಪ್ರಜೆ. “ಈ ದಿನ ನಮ್ಮಲ್ಲಿ ಪ್ರತಿಯೊಬ್ಬರಿಗೂ ಸೇರಿದೆ. ಈ ಅಪ್ರತಿಮ ಕ್ಷಣಕ್ಕೆ ಸಾಕ್ಷಿಯಾಗಲು, ನಾನು ಕೆಲಸದಿಂದ ಒಂದು ದಿನ ರಜೆ ತೆಗೆದುಕೊಂಡೆ. ನಾವು ಮಾಡಿದೆವು! ಭಾರತ ಮಾಡಿದೆ!” ಅವರು ಹೇಳಿದರು. ಚಂದ್ರಯಾನ-3 ಲ್ಯಾಂಡಿಂಗ್ ನೋಡಲು ನೆರೆದಿದ್ದ ಉತ್ಸಾಹಿ ಶಾಲಾ ವಿದ್ಯಾರ್ಥಿಗಳು ಇದು ಕಲಿಕೆಯ ಕ್ಷಣ ಎಂದು ಹೇಳಿದರು.

“ಚಂದ್ರಯಾನ-3 ಚಂದ್ರನ ಮೇಲೆ ಲ್ಯಾಂಡಿಂಗ್‌ಗೆ ಸಾಕ್ಷಿಯಾಗಿರುವುದು ವಿಜ್ಞಾನ ತಂತ್ರಜ್ಞಾನ ಮತ್ತು ಬಾಹ್ಯಾಕಾಶ ಪರಿಶೋಧನೆಯಲ್ಲಿ ನನ್ನ ಆಸಕ್ತಿಯನ್ನು ಹೆಚ್ಚಿಸಿದೆ. ಯೂನಿವರ್ಸ್‌ನಲ್ಲಿ ಇನ್ನೂ ಹೆಚ್ಚಿನವುಗಳಿವೆ ಎಂಬ ಭರವಸೆಯನ್ನು ಇದು ಎತ್ತಿ ತೋರಿಸುತ್ತದೆ. ನಾವು ಸಾಕಷ್ಟು ಪ್ರಯತ್ನಿಸಿದರೆ ಸಾಧಿಸಲು ಅಸಾಧ್ಯವಾದುದು ಯಾವುದೂ ಇಲ್ಲ ಎಂದು ಕೆನಡಿಯನ್ ಇಂಟರ್ ನ್ಯಾಷನಲ್ ಶಾಲೆಯ ವಿದ್ಯಾರ್ಥಿನಿ ಸಾರಿಕಾ ಹೇಳಿದರು.

ಚಂದ್ರಯಾನ ಯಶಸ್ವಿ ಬೆನ್ನಲ್ಲೇ, ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಟ್ವೀಟ್ ಮಾಡಿದ್ದಾರೆ. 

ದೇಶದ ವಿಜ್ಞಾನಿಗಳ ನಿರಂತರ ಪ್ರಯತ್ನ ಮತ್ತು ದಶಕಗಳ ಶ್ರಮ ಇಂದು ಫಲ ನೀಡಿದೆ. ಚಂದ್ರಯಾನ-3 ರ ವಿಕ್ರಮ್ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವದಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್ ಆಗಿದ್ದು, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಸಾಧನೆಯಿಂದ ಜಗತ್ತೇ ಬೆರಗಾಗುವಂತೆ ಮಾಡಿದೆ. ಪ್ರತಿಯೊಬ್ಬ ಭಾರತೀಯನಿಗೂ ಇದು ಹೆಮ್ಮೆಯ ಕ್ಷಣ. ಇಂತಹ ಅಪೂರ್ವ ಸಾಧನೆಗಾಗಿ ದೇಶದ ವಿಜ್ಞಾನಿಗಳಿಗೆ ಅಭಿನಂದನೆಗಳು ಎಂದು ಮುಖ್ಯಮಂತ್ರಿ ಟ್ವೀಟ್ ಮಾಡಿದ್ದಾರೆ. 

ಚಂದ್ರನ ದಕ್ಷಿಣ ಧ್ರುವದಲ್ಲಿ ಮೃದುವಾದ ಆದರೆ ಐತಿಹಾಸಿಕ ಲ್ಯಾಂಡಿಂಗ್ ಅನ್ನು ಮಾಡುತ್ತಿರುವುದು ನನ್ನ ನೆನಪಿನಲ್ಲಿ ಶಾಶ್ವತವಾಗಿ ಉಳಿಯುತ್ತದೆ! ಇಸ್ರೋವಿನಲ್ಲಿರುವ ನಮ್ಮ ಅದ್ಭುತ ವಿಜ್ಞಾನಿಗಳು, ಎಂಜಿನಿಯರ್‌ಗಳು ಮತ್ತು ತಂತ್ರಜ್ಞರ ನಂಬಲಾಗದ ಕಠಿಣ ಪರಿಶ್ರಮದಿಂದ ಈ ಅದ್ಭುತ ಸಾಧನೆ ಸಾಧ್ಯವಾಗಿದೆ! ನಮ್ಮ ಪ್ರೀತಿಯ ರಾಷ್ಟ್ರವು ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿದ ಮೊದಲ ದೇಶವಾಗಿದೆ, ಇದು ಈ ದಿನವನ್ನು ಇನ್ನಷ್ಟು ವಿಶೇಷಗೊಳಿಸುತ್ತದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಟ್ವೀಟ್ ನಲ್ಲಿ ಹೇಳಿದ್ದಾರೆ. 

ಇಸ್ರೋ ವಿಶ್ವ ದರ್ಜೆಯ ಸಂಸ್ಥೆಯಾಗಿದೆ. ಇದು ದಶಕಗಳಿಂದ ನಮಗೆ ಹೆಮ್ಮೆ ತಂದಿದೆ. ಅವರ ಅಮೋಘ ಸಾಧನೆಗಳು ನಮ್ಮನ್ನು ವಿಶ್ವದ ಅಗ್ರಸ್ಥಾನದಲ್ಲಿರಿಸಿದೆ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಟ್ವೀಟ್ ಮಾಡಿದ್ದಾರೆ. 

ಚಂದ್ರಯಾನ-3 ಪ್ರತಿ ಭಾರತೀಯನ ಕನಸುಗಳು ಮತ್ತು ಮಹತ್ವಾಕಾಂಕ್ಷೆಗಳನ್ನು ಪ್ರೇರೇಪಿಸುತ್ತಾ, ಭಾರತವನ್ನು ಮತ್ತಷ್ಟು ಬ್ರಹ್ಮಾಂಡದತ್ತ ಮುನ್ನಡೆಸುತ್ತದೆ ಎಂದು ಬಯೋಕಾನ್ ಲಿಮಿಟೆಡ್ ಮತ್ತು ಬಯೋಕಾನ್ ಬಯೋಲಾಜಿಕ್ಸ್ ಸಂಸ್ಥಾಪಕರಾದ  ಕಿರಣ್ ಮಜುಂದಾರ್ ಶಾ ಹೇಳಿದ್ದಾರೆ. 

ಚಂದ್ರನ ಮೇಲೆ ಬಾಹ್ಯಾಕಾಶ ನೌಕೆಯನ್ನು ಯಶಸ್ವಿಯಾಗಿ ಇಳಿಸಿದ 4 ನೇ ದೇಶ ಎಂಬ ಖ್ಯಾತಿಗೆ ಪಾತ್ರರಾದ ಭಾರತಕ್ಕೆ ಅಭಿನಂದನೆಗಳು. ಈ ಕಾರ್ಯಾಚರಣೆಯಲ್ಲಿ ನಿಮ್ಮ ಪಾಲುದಾರರಾಗಲು ನಮಗೆ ಸಂತೋಷವಾಗಿದೆ ಎಂದು  NASA ನಿರ್ವಾಹಕರರಾದ ಸೇನ್ ಬಿಲ್ ನೆಲ್ಸನ್  ಟ್ವೀಟ್ ಮಾಡಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com