

ಬೆಳಗಾವಿ: ಹುಟ್ಟೂರಾದ ಖಾನಾಪುರ ತಾಲೂಕಿನ ಚಿಕ್ಕಹಟ್ಟಿಹೊಳಿ ಗ್ರಾಮದ ಸರ್ವಾಂಗೀಣ ಅಭಿವೃದ್ಧಿಗೆ 60 ಕೋಟಿ ರೂ. ಮೀಸಲಿಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಬುಧವಾರ ಹೇಳಿದರು.
ಖಾನಾಪುರದ ಚಿಕ್ಕಹಟ್ಟಿಹೊಳಿ ಗ್ರಾಮದಲ್ಲಿ ದುರ್ಗಾ ಮಾತೆಯ ಮೂರ್ತಿ ಪ್ರತಿಷ್ಠಾಪನಾ ಸಮಾರಂಭದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಾತನಾಡಿದರು.
ಖಾನಾಪುರದಲ್ಲಿ ನಡೆದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು, ಚಿಕ್ಕಹಟ್ಟಿಹೊಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಲಾಗುತ್ತಿದೆ. ಇದಕ್ಕಾಗಿ ಸರ್ವಾಂಗೀಣ ಅಭಿವೃದ್ಧಿಗೆ 60 ಕೋಟಿ ರೂ. ಮೀಸಲಿಡಲಾಗುವುದು ಎಂದು ಹೇಳಿದರು.
ಇದೇ ವೇಳೆ ತಮ್ಮ ಬಾಲ್ಯದ ದಿನಗಳನ್ನು ಸ್ಮರಿಸಿದ ಅವರು, ಚಿಕ್ಕಹಟ್ಟಿಹೊಳಿಯಲ್ಲಿ ಹುಟ್ಟಿ ಬೆಳೆದಿದ್ದೇನೆ, ಇಲ್ಲಿ ಸರ್ಕಾರಿ ಬಸ್‌ಗಳಲ್ಲಿ ಪ್ರಯಾಣಿಸುತ್ತಿದ್ದೆ ಎದು ತಿಳಿಸಿದರು.