ರಾಜ್ಯದ ಕನಿಷ್ಠ 100 ತಾಲ್ಲೂಕುಗಳು ಬರ ಪರಿಸ್ಥಿತಿಯನ್ನು ಎದುರಿಸುತ್ತಿವೆ: ಕೃಷಿ ಸಚಿವ ಚಲುವರಾಯಸ್ವಾಮಿ

ರಾಜ್ಯದಲ್ಲಿ ಈ ಭಾರಿ ಮುಂಗಾರು ಮಳೆ ಕೊರತೆಯಿಂದ ಆಗಿರುವ ಹಾನಿ ಕುರಿತು ಕ್ಷೇತ್ರ ಪರಿಶೀಲಿಸಿ ದೃಢೀಕರಣ ಪಡೆಯುವ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಕನಿಷ್ಠ 100 ತಾಲ್ಲೂಕುಗಳನ್ನು ಸೆಪ್ಟಂಬರ್ ಅಂತ್ಯದೊಳಗೆ ಬರಪೀಡಿತ ಎಂದು ಘೋಷಿಸಲಾಗುತ್ತದೆ ಎಂದು ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು.
ಎನ್ ಚಲುವರಾಯಸ್ವಾಮಿ
ಎನ್ ಚಲುವರಾಯಸ್ವಾಮಿ

ಬೆಂಗಳೂರು: ರಾಜ್ಯದಲ್ಲಿ ಈ ಭಾರಿ ಮುಂಗಾರು ಮಳೆ ಕೊರತೆಯಿಂದ ಆಗಿರುವ ಹಾನಿ ಕುರಿತು ಕ್ಷೇತ್ರ ಪರಿಶೀಲಿಸಿ ದೃಢೀಕರಣ ಪಡೆಯುವ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಕನಿಷ್ಠ 100 ತಾಲ್ಲೂಕುಗಳನ್ನು ಸೆಪ್ಟಂಬರ್ ಅಂತ್ಯದೊಳಗೆ ಬರಪೀಡಿತ ಎಂದು ಘೋಷಿಸಲಾಗುತ್ತದೆ ಎಂದು ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು.

ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಳೆ ಕೊರತೆಯಿಂದ ತೊಂದರೆಗೆ ಸಿಲುಕಿರುವ ಗ್ರಾಮಗಳಿಗೆ ಅಧಿಕಾರಿಗಳು ಭೇಟಿ ನೀಡಿ, ವರದಿಯನ್ನು ಸಿದ್ಧಪಡಿಸುತ್ತಿದ್ದಾರೆ. ರಾಜ್ಯದ ಹೆಚ್ಚಿನ ತಾಲ್ಲೂಕುಗಳಲ್ಲಿ ಬರ ಪರಿಸ್ಥಿತಿ ಇರುವುದು ಸರ್ಕಾರಕ್ಕೆ ಮನವರಿಕೆಯಾಗಿದೆ. ಅಗತ್ಯ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಬರಪೀಡಿತ ತಾಲ್ಲೂಕುಗಳ ಘೋಷಣೆಗೆ ನಿರ್ಧರಿಸಲಾಗಿದೆ ಎಂದರು.

ಈಗಾಗಲೇ 194 ಪಂಚಾಯಿತಿ ವ್ಯಾಪ್ತಿಯಲ್ಲಿ ಮಳೆ ಕೊರತೆಯಿಂದಾಗಿ ಬೆಳೆಗಳು ಒಣಗಿದ್ದು, ಈಗ ಅವುಗಳನ್ನು ಉಳಿಸಿಸೊಳ್ಳಲು ಸಾಧ್ಯವಾಗುತ್ತಿಲ್ಲ. ಈ ಪಂಚಾಯತಿಗಳು ಬಾಗಲಕೋಟೆ, ಗದಗ, ತುಮಕೂರು ಮತ್ತು ಬೆಳಗಾವಿ ಜಿಲ್ಲೆಗಳಿಗೆ ಸೇರಿವೆ. ಈ ಗ್ರಾಮ ಪಂಚಾಯಿತಿಗಳಲ್ಲಿ ವಿಮೆ ಪರಿಹಾರ ಪಾವತಿಗೆ ಕ್ರಮ ಕೈಗೊಳ್ಳಲಾಗಿದೆ. ಸರ್ಕಾರ 35,284 ರೈತರಿಗೆ 35 ಕೋಟಿ ರೂ. ಪರಿಹಾರ ವಿತರಿಸಲು ಸಿದ್ಧತೆ ನಡೆದಿದೆ ಎಂದು ಹೇಳಿದರು. 

ಆಗಸ್ಟ್ ತಿಂಗಳಿನಲ್ಲಿ ವಾಡಿಕೆಗಿಂತ ಶೇ 25ರಷ್ಟು ಮಳೆ ಕೊರತೆಯಾಗಿದೆ. ರಾಜ್ಯದಲ್ಲಿ ಈ ಹಂಗಾಮಿನಲ್ಲಿ ಶೇ 79ರಷ್ಟು ಮಾತ್ರ ಬೆಳೆ ಬಿತ್ತನೆ ನಡೆದಿದ್ದು, ಬೆಳೆ ರಕ್ಷಣೆಗೆ ಒತ್ತು ನೀಡಲಾಗಿದೆ. ಅಣೆಕಟ್ಟುಗಳು, ಕೃಷಿ ಹೊಂಡಗಳು ಮತ್ತು ಇತರ ನೀರಿನ ಮೂಲಗಳ ಸುತ್ತಮುತ್ತಲಿನ ಬೆಳೆಗಳು ಸುರಕ್ಷಿತವಾಗಿವೆ. ಆದರೆ, ಮಳೆಯಾಶ್ರಿತ ಪ್ರದೇಶಗಳಲ್ಲಿನ ಬೆಳೆಗಳು ನಷ್ಟವಾಗುವ ಸಾಧ್ಯತೆಯಿದೆ ಎಂದು ಅವರು ಹೇಳಿದರು.

ಪ್ರಮುಖ ಬೆಳೆಗಳಿಗೆ ಸಂಬಂಧಿಸಿದಂತೆ, ಭತ್ತವನ್ನು ಸಾಮಾನ್ಯಕ್ಕಿಂತ 4 ಲಕ್ಷ ಹೆಕ್ಟೇರ್ ಕಡಿಮೆ, ರಾಗಿ (3.5 ಲಕ್ಷ ಹೆಕ್ಟೇರ್), ತೊಗರಿ (2.5 ಲಕ್ಷ), ಹತ್ತಿ (1.43 ಲಕ್ಷ ಹೆಕ್ಟೇರ್), ಶೇಂಗಾ (93,000 ಹೆಕ್ಟೇರ್) ಮತ್ತು ಸೂರ್ಯಕಾಂತಿ 71,000 ಹೆಕ್ಟೇರ್ ಪ್ರದೇಶಗಳಲ್ಲಿ ಬಿತ್ತನೆಯಾಗಿದೆ.

ರೈತರ ಸಾಲ ಮನ್ನಾ ಅಗತ್ಯವಿದ್ದಲ್ಲಿ ಸಚಿವ ಸಂಪುಟದಲ್ಲಿ ಚರ್ಚಿಸಲಾಗುವುದು. ಪ್ರತಿ ತಿಂಗಳು ಜಿಲ್ಲೆಗೊಂದು ಪ್ರವಾಸ ಮಾಡಿ ರೈತರನ್ನು ಭೇಟಿ ಮಾಡುವುದಾಗಿ ಭರವಸೆ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com