ಚಂದ್ರನ ಮೇಲೆ ಲ್ಯಾಂಡರ್ ಇಳಿದ ಸ್ಥಳ 'ಶಿವಶಕ್ತಿ', ಚಂದ್ರಯಾನ-3 ಯಶಸ್ವಿಯಾದ ಆಗಸ್ಟ್​ 23 ಇನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನ: ಪ್ರಧಾನಿ ಮೋದಿ ಘೋಷಣೆ

ಚಂದ್ರಯಾನ-3 ಮಿಷನ್ ಯಶಸ್ವಿಯಾಗಿದ್ದು ಇಡೀ ಮನುಕುಲಕ್ಕೆ ಮಹತ್ವಪೂರ್ಣವಾದದ್ದು, ಆಗಸ್ಟ್ 23ರಂದು ಚಂದ್ರಯಾನ ಯಶಸ್ವಿಯಾದ ದಿನವನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.
ಚಂದ್ರಯಾನ-3ರ ವಿಕ್ರಮ್ ಲ್ಯಾಂಡರ್ ನ ಮೊದಲ ಲ್ಯಾಂಡಿಂಗ್ ಫೋಟೋವನ್ನು ಪ್ರಧಾನಿ ಮೋದಿಯವರಿಗೆ ನೀಡಿದ ಇಸ್ರೊ ಅಧ್ಯಕ್ಷ ಎಸ್ ಸೋಮನಾಥ್
ಚಂದ್ರಯಾನ-3ರ ವಿಕ್ರಮ್ ಲ್ಯಾಂಡರ್ ನ ಮೊದಲ ಲ್ಯಾಂಡಿಂಗ್ ಫೋಟೋವನ್ನು ಪ್ರಧಾನಿ ಮೋದಿಯವರಿಗೆ ನೀಡಿದ ಇಸ್ರೊ ಅಧ್ಯಕ್ಷ ಎಸ್ ಸೋಮನಾಥ್
Updated on

ಬೆಂಗಳೂರು: ಚಂದ್ರಯಾನ-3 ಮಿಷನ್ ಯಶಸ್ವಿಯಾಗಿದ್ದು ಇಡೀ ಮನುಕುಲಕ್ಕೆ ಮಹತ್ವಪೂರ್ಣವಾದದ್ದು, ಆಗಸ್ಟ್ 23ರಂದು ಚಂದ್ರಯಾನ ಯಶಸ್ವಿಯಾದ ದಿನವನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.

ಶಿವಶಕ್ತಿ ಪಾಯಿಂಟ್ : ಚಂದ್ರನ ಮೇಲೆ ವಿಕ್ರಮ್​ ಲ್ಯಾಂಡರ್ ಇಳಿದ ಸ್ಥಳವನ್ನು ‘ಶಿವಶಕ್ತಿ ಪಾಯಿಂಟ್’ ಎಂದು ಕರೆಯೋಣ. ಶಿವನಲ್ಲಿ ಮಾನವ ಶಕ್ತಿಯನ್ನು ರೂಪಿಸುವ ಶಕ್ತಿ ಇದೆ. ಚಂದ್ರನ ಮೇಲೂ ತಿರಂಗ ರಾರಾಜಿಸುತ್ತಿದೆ ಎಂದ ಮೋದಿ, ಚಂದ್ರಯಾನ-2 ಪತನ ಸ್ಥಳಕ್ಕೆ ತಿರಂಗ ಪಾಯಿಂಟ್​ ಎಂದು ಹೆಸರಿಟ್ಟರು. ಈ ತಿರಂಗ ಪಾಯಿಂಟ್​​​ ಮುಂದಿನ ಸಾಧನೆಗಳಿಗೆ ಪ್ರೇರಣೆಯಾಯಿತು. ಚಂದ್ರಯಾನ-3 ಯಶಸ್ಸಿನಲ್ಲಿ ಇಸ್ರೋ ಸಾಧನೆ ದೊಡ್ಡದು. ಮೇಕ್​ ಇನ್​ ಇಂಡಿಯಾ ಈಗ ಚಂದ್ರನವರೆಗೂ ತಲುಪಿದೆ ಎಂದು ಖುಷಿಯಿಂದ ಮುಕ್ತಕಂಠದಿಂದ ಇಸ್ರೊ ವಿಜ್ಞಾನಿಗಳನ್ನು ಶ್ಲಾಘಿಸಿ ಬೆಂಗಳೂರಿನ ಇಸ್ರೊ ಕಚೇರಿಯಲ್ಲಿಂದು ಘೋಷಿಸಿದರು.

ರಾಷ್ಟ್ರೀಯ ಬಾಹ್ಯಾಕಾಶ ದಿನ: ಚಂದ್ರನ ಮೇಲೆ ಪ್ರಜ್ಞಾನ್​ ಪರಾಕ್ರಮ ಕಂಡು ಖುಷಿಯಾಗಿದೆ. ಇಡೀ ವಿಶ್ವವೇ ಭಾರತದ ವಿಜ್ಞಾನ, ತಂತ್ರಜ್ಞಾನವನ್ನು ಒಪ್ಪಿಕೊಂಡಿದೆ ಎಂದು ಇಸ್ರೋ ಕಮಾಂಡ್​ ಸೆಂಟರ್​ನಲ್ಲಿ ಪ್ರಧಾನಿ ಮೋದಿ ಹೇಳಿದರು. ಆಗಸ್ಟ್ 23 ರ ಆ ದಿನ ನನ್ನ ಕಣ್ಣ ಮುಂದೆ ಪ್ರತಿ ಸೆಕೆಂಡ್ ಮತ್ತೆ ಮತ್ತೆ ತಿರುಗುತ್ತಿದೆ, ನಿಮ್ಮ ಸಾಧನೆಯನ್ನು ಎಷ್ಟೇ ಕೊಂಡಾಡಿದರೂ ಅದು ಕಡಿಮೆಯೇ. ಚಂದ್ರನ ಮೇಲೆ ಪ್ರಜ್ಞಾನ್​ ಪರಾಕ್ರಮ ಕಂಡು ಖುಷಿಯಾಗಿದೆ. ಇಡೀ ವಿಶ್ವವೇ ಭಾರತದ ವಿಜ್ಞಾನ, ತಂತ್ರಜ್ಞಾನವನ್ನು ಒಪ್ಪಿಕೊಂಡಿದೆ ಎಂದು ಇಸ್ರೋ ಕಮಾಂಡ್​ ಸೆಂಟರ್​ನಲ್ಲಿ ಪ್ರಧಾನಿ ಮೋದಿ ಹೇಳಿದರು.

ವಿಶ್ವದ ದೊಡ್ಡ ದೊಡ್ಡ ಸಮಸ್ಯೆಗಳಿಗೆ ಭಾರತ ಪರಿಹಾರ ಕಂಡಿದೆ. ನಿಮ್ಮೆಲ್ಲರ ಈ ಸಾಧನೆ ಇತರರಿಗೆ ಸ್ಪೂರ್ತಿದಾಯಕವಾಗಿದೆ. ನೀವೆಲ್ಲರೂ ಸೇರಿ ಭಾರತದ ಕನಸನ್ನು ನನಸು ಮಾಡಿದ್ದೀರಿ. ನಾನು ವಿದೇಶದಲ್ಲಿದ್ದೆ, ಆದರೆ ನನ್ನ ಹೃದಯವು ಎಲ್ಲಾ ಸಮಯದಲ್ಲೂ ಸಂಪೂರ್ಣವಾಗಿ ನಿಮ್ಮೊಂದಿಗೆ ಇತ್ತು ಎಂದು ವಿಜ್ಞಾನಿಗಳನ್ನು ಉದ್ದೇಶಿಸಿ ಮೋದಿ ಹೇಳಿದರು.

ತಿರಂಗಾ: ಚಂದ್ರಯಾನ-2 ಪತನಗೊಂಡ ಸ್ಥಳಕ್ಕೆ ‘ತಿರಂಗಾ’ ಎಂದು ಹೆಸರಿಸೋಣ. ಭಾರತ ಚಂದ್ರಯಾನ ಹಾಗೂ ಮಂಗಳಯಾನದಲ್ಲಿ ಯಶಸ್ಸನ್ನು ಗಳಿಸಿ ಮಾನವಸಹಿತ ಗಗನಯಾನಕ್ಕೆ ಸಿದ್ಧತೆ ನಡೆಸುತ್ತಿದೆ. ಈ ಮೂಲಕ ಭಾರತೀಯ ನೆಲ, ಇಲ್ಲಿನ ಜನರ ಮನ ಹಾಗೂ ಚಂದ್ರನಲ್ಲೂ ತಿರಂಗಾ ಮನೆ ಮಾಡಿದೆ ಎಂದು ಅವರು ಹೇಳಿದರು. 

ಈ ಯಶಸ್ಸು ಭಾರತದ ವೈಜ್ಞಾನಿಕ ಶಂಕನಾದವಾಗಿದೆ. ಚಂದ್ರಯಾನದಿಂದ ಮನುಕುಲ ಅಭಿವೃದ್ಧಿ ಸಾಧ್ಯವಿದೆ. ಹಿಮಾಲಯದಿಂದ ಕನ್ಯಾಕುಮಾರಿ ವರೆಗೂ ಜೋಡಿಸುವ ಸಾಮರ್ಥ್ಯ ಇದೆ. ಶಿವನಲ್ಲಿ ಮಾನವನ ಅಭಿವೃದ್ಧಿ ಇದೆ. ಚಂದ್ರಯಾನ-3 ರ ಯಶಸ್ಸಿನಿಂದಾಗಿ ಮೇಕ್ ಇನ್ ಇಂಡಿಯಾದ ಮೇಲೆ ಬಲವಾದ ನಂಬಿಕೆ ಮೂಡುತ್ತಿದೆ ಎಂದು ಮೋದಿ ಅಭಿಪ್ರಾಯಪಟ್ಟರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com