ನ್ಯಾಯಕ್ಕಾಗಿ ಸೌಜನ್ಯ ತಾಯಿ ಹೋರಾಟ: ಪ್ರಧಾನಿ ಮೋದಿ ಭೇಟಿ ಮಾಡಿಸುವಂತೆ ಬಿಜೆಪಿ ನಾಯಕರ ಬಳಿ ಬೇಡಿಕೆ

ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗಳಿಗೆ ನ್ಯಾಯ ದೊರಕಿಸಲು ಹೋರಾಟ ನಡೆಸುತ್ತಿರುವ ಸೌಜನ್ಯ ತಾಯಿ ಕುಸುಮಾವತಿ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ  ಮಾಡಲು ಅವಕಾಶ ಮಾಡಿಕೊಡುವಂತೆ ದಕ್ಷಿಣ ಕನ್ನಡ ಸಂಸದ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಒತ್ತಾಯಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಮಂಗಳೂರು: ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗಳಿಗೆ ನ್ಯಾಯ ದೊರಕಿಸಲು ಹೋರಾಟ ನಡೆಸುತ್ತಿರುವ ಸೌಜನ್ಯ ತಾಯಿ ಕುಸುಮಾವತಿ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ  ಮಾಡಲು ಅವಕಾಶ ಮಾಡಿಕೊಡುವಂತೆ ದಕ್ಷಿಣ ಕನ್ನಡ ಸಂಸದ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಒತ್ತಾಯಿಸಿದ್ದಾರೆ.

ಭಾನುವಾರ ಬೆಳ್ತಂಗಡಿಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಕುಸುಮಾವತಿ ಅವರು, ಪ್ರಕರಣದ ಸಮಗ್ರ ತನಿಖೆಗೆ ಒತ್ತಾಯಿಸಿದರು.

ಇದೇ ವೇಳೆ ಸಂಸದ ನಳಿನ್ ಕುಮಾರ್ ಕಟೀಲ್ ಅವರು, 11 ವರ್ಷಗಳಿಂದ ತಮ್ಮ ಮಗಳಿಗೆ ನ್ಯಾಯ ದೊರಕಿಸಿಕೊಡುವ ಕುರಿತು ಧ್ವನಿ ಎತ್ತಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಇದೀಗ ಸಂಸದರು ನನ್ನ ಮಗಳ ಪರವಾಗಿ ಧ್ವನಿ ಎತ್ತಿದ್ದಾರೆ. ನನ್ನ ಮಗಳಿಗೆ ನ್ಯಾಯ ದೊರಕಿಸಿಕೊಡುವಂತೆ ಇಲ್ಲಿ ನೆರೆದಿರುವ ನಾಯಕರನ್ನು ಕೋರುತ್ತಿದ್ದೇನೆ. ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಲು ನನಗೆ ಸಹಾಯ ಮಾಡಿಕೊಡಿ ಎಂಗು ಮನವಿ ಮಾಡಿಕೊಂಡರು.

ಬಳಿಕ"ಧೀರಜ್ ಕೆಲ್ಲ, ಮಲ್ಲಿಕ್ ಜೈನ್, ಉದಯ್ ಜೈನ್ ಮತ್ತು ವೀರೇಂದ್ರ ಹೆಗ್ಗಡೆ ಅವರ ಸಹೋದರನ ಮಗ ನಿಶ್ಚಲ್ ಜೈನ್ ನನ್ನ ಮಗಳ ಮೇಲೆ ಅತ್ಯಾಚಾರವೆಸಗಿದ್ದಾರೆ" ಎಂದು ಆರೋಪಿಸಿದರು.

ಈ ವೇಳೆ ಪ್ರತಿಭಟನ್ನುದ್ದೇಶಿಸಿ ಮಾತನಾಡಿದ ನಳಿನ್ ಕುಮಾರ್ ಕಟೀಲ್ ಅವರು, ಅಪರಾಧ ನಡೆದ 12 ದಿನಗಳಲ್ಲಿ ಪ್ರಕರಣವನ್ನು ಸಿಐಡಿಗೆ ಒಪ್ಪಿಸಿದ್ದು ಬಿಜೆಪಿ ಸರ್ಕಾರ ಎಂದು ಹೇಳಿದರು.

ಈ ನಡುವೆ ಸೌಜನ್ಯ ಅವರ ಕುಟುಂಬ ಪಾದಯಾತ್ರೆಗೆ ಆಗಮಿಸುವ ವೇಳೆ ಅಣ್ಣಪ್ಪ ಸ್ವಾಮಿ ಬೆಟ್ಟದ ಬಳಿ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿತ್ತು. ಸ್ಥಳದಲ್ಲಿ ಸಾವಿರಾರು ಜನರು ಜಮಾಯಿಸಿದ್ದು ಕಂಡು ಬಂದಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com