ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂದಿನ 2 ದಿನಗಳ ಕಾಲ ಮಳೆ ಮುನ್ಸೂಚನೆ

ಮುಂದಿನ ಎರಡು ದಿನಗಳ ಕಾಲ ರಾಜ್ಯದ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಮುಂದಿನ ಎರಡು ದಿನಗಳ ಕಾಲ ರಾಜ್ಯದ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ.

ನೈಋತ್ಯ ಮಾನ್ಸೂನ್ ಕರಾವಳಿ ಕರ್ನಾಟಕದಲ್ಲಿ ದುರ್ಬಲವಾಗಿದೆ. ಆದರೆ, ಒಳನಾಡಿನಲ್ಲಿ ಸಾಮಾನ್ಯವಾಗಿದೆ. ಆಗಸ್ಟ್ 27 ರಂದು ಬೆಳಿಗ್ಗೆ 8 ಗಂಟೆಯವರೆಗೆ ರಾಜ್ಯದ ಕೆಲವು ಭಾಗಗಳಲ್ಲಿ ಮಳೆಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ 5 ಸೆಂ.ಮೀ, ತುಮಕೂರಿನ ಗುಬ್ಬಿ ಮತ್ತು ಚಿಕ್ಕನಹಳ್ಳಿಯಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ. ಬೇವೂರು ಮತ್ತು ಯಲಬುರ್ಗಾ, ಕವಡಿಮಟ್ಟಿ (ಯಾದಗಿರಿ), ಹೊಸಕೋಟೆ (ಬೆಂಗಳೂರು ಗ್ರಾಮಾಂತರ), ಶೃಂಗೇರಿ (ಚಿಕ್ಕಮಗಳೂರು), ಬೆಳ್ಳೂರು (ಮಂಡ್ಯ) ಮತ್ತು ದಾವಣಗೆರೆಯಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ.

ಕುಕನೂರು, ಮುನಿರಾಬಾದ್ (ಕೊಪ್ಪಳ), ರಾಯಚೂರು ಮತ್ತು ದೇವದುರ್ಗ (ರಾಯಚೂರು), ಶೋರಾಪುರ (ಯಾದಗಿರಿ), ಚನ್ನಗಿರಿ (ದಾವಣಗೆರೆ), ಶಿವಮೊಗ್ಗ, ಕಡೂರು ಮತ್ತು ಕೊಟ್ಟೂರಿನಲ್ಲಿ ತಲಾ 1 ಸೆಂ.ಮೀ ಮಳೆ ದಾಖಲಾಗಿದೆ.

ಮುಂದಿನ ಎರಡು ದಿನಗಳ ಕಾಲ ರಾಜ್ಯದ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳಿವೆ ಎಂದು ಮಾಹಿತಿ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com