ನವೆಂಬರ್ 29 ರಿಂದ ಡಿಸೆಂಬರ್ 1 ರವರೆಗೆ ಬೆಂಗಳೂರು ಟೆಕ್ ಶೃಂಗಸಭೆ

ಸಾಫ್ಟ್‌ವೇರ್‌ ತಂತ್ರಜ್ಞಾನಗಳ ರಫ್ತಿನ ವಿಚಾರದಲ್ಲಿ ರಾಜ್ಯ ದೇಶದಲ್ಲೇ ಮೊದಲನೇ ಸ್ಥಾನದಲ್ಲಿದ್ದು, ದೇಶದ ಒಟ್ಟಾರೆ ಸಾಫ್ಟ್‌ವೇರ್‌ ರಫ್ತು ಪ್ರಮಾಣದಲ್ಲಿ ಶೇ.40 ಕರ್ನಾಟಕದ್ದಾಗಿದೆ. ಬೆಂಗಳೂರು ವಿಶ್ವದ ನಾಲ್ಕನೇ ಅತಿದೊಡ್ಡ ತಂತ್ರಜ್ಞಾನ ಕ್ಲಸ್ಟರ್‌ ಆಗಿದ್ದು. ನಾವು ವಿಶ್ವದ ಅತ್ಯುತ್ತಮ ನುರಿತ ಉದ್ಯೋಗಿಗಳನ್ನು ಹೊಂದಿದ್ದೇವೆಂದು...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಸಾಫ್ಟ್‌ವೇರ್‌ ತಂತ್ರಜ್ಞಾನಗಳ ರಫ್ತಿನ ವಿಚಾರದಲ್ಲಿ ರಾಜ್ಯ ದೇಶದಲ್ಲೇ ಮೊದಲನೇ ಸ್ಥಾನದಲ್ಲಿದ್ದು, ದೇಶದ ಒಟ್ಟಾರೆ ಸಾಫ್ಟ್‌ವೇರ್‌ ರಫ್ತು ಪ್ರಮಾಣದಲ್ಲಿ ಶೇ.40 ಕರ್ನಾಟಕದ್ದಾಗಿದೆ. ಬೆಂಗಳೂರು ವಿಶ್ವದ ನಾಲ್ಕನೇ ಅತಿದೊಡ್ಡ ತಂತ್ರಜ್ಞಾನ ಕ್ಲಸ್ಟರ್‌ ಆಗಿದ್ದು. ನಾವು ವಿಶ್ವದ ಅತ್ಯುತ್ತಮ ನುರಿತ ಉದ್ಯೋಗಿಗಳನ್ನು ಹೊಂದಿದ್ದೇವೆಂದು  ಐಟಿ ಹಾಗೂ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಸೋಮವಾರ ಹೇಳಿದರು.

ಬೆಂಗಳೂರಿನಲ್ಲಿ 2023ರ ನವೆಂಬರ್‌ 29ರಿಂದ ಮೂರು ದಿನಗಳ ಕಾಲ ನಡೆಯಲಿರುವ 26ನೇ ಬೆಂಗಳೂರು ಟೆಕ್‌ ಶೃಂಗಸಭೆ ಹಿನ್ನೆಲೆಯಲ್ಲಿ ನಿನ್ನೆ ನಡೆದ ಗ್ಲೋಬಲ್‌ ಇನೋವೇಷನ್‌ ಅಲಿಯನ್ಸ್‌ ಪಾಲುದಾರರ ಸಭೆಯಲ್ಲಿ ಸಚಿವರು ಮಾತನಾಡಿದರು.

ಸಾಫ್ಟ್‌ವೇರ್ ರಫ್ತಿನ ವಿಷಯದಲ್ಲಿ ಕರ್ನಾಟಕ ದೇಶದಲ್ಲಿ ಮೊದಲ ಸ್ಥಾನದಲ್ಲಿದೆ. ದೇಶದ ಒಟ್ಟಾರೆ ಸಾಫ್ಟ್‌ವೇರ್ ರಫ್ತು ಪ್ರಮಾಣದಲ್ಲಿ ಶೇ.40 ರಾಜ್ಯದ್ದಾಗಿದೆ. ಬೆಂಗಳೂರು ವಿಶ್ವದ 4ನೇ ಅತಿದೊಡ್ಡ ತಂತ್ರಜ್ಞಾನ ಕ್ಲಸ್ಟರ್ ಆಗಿದ್ದು, ನಾವು ವಿಶ್ವದ ಅತ್ಯುತ್ತಮ ನುರಿತ ಉದ್ಯೋಗಿಗಳನ್ನ ಹೊಂದಿದ್ದೇವೆ. ಭವಿಷ್ಯಕ್ಕಾಗಿ ಹೆಚ್ಚು ಚೇತರಿಸಿಕೊಳ್ಳುವ ಅಗತ್ಯವಿದ್ದು, ಕರ್ನಾಟಕ ಸರ್ಕಾರ ನಾವೀನ್ಯತೆಗಳ ಸವಾಲುಗಳಿಗೆ ಸಿದ್ಧವಾಗಿದೆ. ಉದಯೋನ್ಮುಖ ತಂತ್ರಜ್ಞಾನಗಳಿಗಾಗಿ ನಾವು ಕೌಶಲ್ಯ ಸಲಹಾ ಸಮಿತಿಯನ್ನ ಹೊಂದಿದ್ದೇವೆಂದು ಹೇಳಿದರು.

ಸೈಬರ್‌ ಸೆಕ್ಯುರಿಟಿ, ಅಗ್ರಿ ಇನೋವೇಶನ್, ಡೇಟಾ ಸೈನ್ಸ್ ಮತ್ತು ಎಐ, ಏರೋಸ್ಪೇಸ್, ಸೆಮಿಕಂಡಕ್ಟರ್ ಫೇಬಲ್ಸ್, ಮಿಷಿನ್ ಇಂಟೆಲಿಜೆನ್ಸ್ ಮತ್ತು ರೊಬೊಟಿಕ್ಸ್, ಅನಿಮೇಷನ್ ಮುಂತಾದ ಕ್ಷೇತ್ರಗಳಲ್ಲಿ ನಮ್ಮ ಪರಿಣತಿಯಿದೆ. ಆಟೋಮೊಬೈಲ್ ಟೆಕ್, ಗೇಮಿಂಗ್ ವೇಗವರ್ಧಕ ಮತ್ತು ವರ್ತುಲ ಆರ್ಥಿಕ ಪ್ರಯೋಗಾಲಯ ಮುಂತಾದ ಕ್ಷೇತ್ರಗಳಲ್ಲಿಯೂ ನಮ್ಮ ಪರಿಸರ ವ್ಯವಸ್ಥೆಗಳೊಂದಿಗೆ ಸಹಕರಿಸಲು ನಾವು ಬಯಸುತ್ತೇವೆ ಎಂದು ಮಾಹಿತಿ ನೀಡಿದರು.

ಬೆಂಗಳೂರು ಟೆಕ್‌ ಶೃಂಗಸಭೆಯ 26ನೇ ಆವೃತ್ತಿ ನವೆಂಬರ್‌ 29 ರಿಂದ ಡಿಸೆಂಬರ್‌ 1ರವೆಗೆ ನಡೆಯಲಿದೆ. ಶೃಂಗಸಭೆಯಲ್ಲಿ ಆಸ್ಟ್ರೇಲಿಯಾ, ಫ್ರಾನ್ಸ್‌, ಜಪಾನ್‌, ನೆದರ್‌ಲ್ಯಾಂಡ್‌, ಇಸ್ರೇಲ್‌, ಇಂಗ್ಲೆಂಡ್‌, ಸ್ವಿಡ್ಜರ್‌ಲ್ಯಾಂಡ್‌ ಸೇರಿ ಸುಮಾರು ಐವತ್ತಕ್ಕೂ ಅಧಿಕ ದೇಶಗಳು ಇದರಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಸುಮಾರು 200ಕ್ಕೂ ಹೆಚ್ಚು ಜಾಗತಿಕ ತಂತ್ರಜ್ಞಾನ ಸಂಸ್ಥೆಗಳ ಪರಿಣಿತರು ವೇದಿಕೆ ಹಂಚಿಕೊಳ್ಳಲಿದ್ದಾರೆ. ಗ್ಲೋಬಲ್‌ ಇನ್ನೋವೇಷ‌ನ್‌ ಅಲೈನ್ಸ್‌ (ಜಿಐಎ) ಪಾಲುದಾರ ದೇಶಗಳಿಂದ ಸುಮಾರು 16 ಸಂವಾದಗಳು ನಡೆಯಲಿವೆ.

ಕೃತಕ ಬುದ್ದಿಮತ್ತೆ, ಸೆಮಿಕಂಡಕ್ಟರ್‌, ಕ್ವಾಂಟಂ ಕಂಪ್ಯೂಟಿಂಗ್‌, ಸ್ಪೇಸ್‌ ಟೆಕ್‌, ಡಿಜಿಟಲ್‌ ಹೆಲ್ತ್‌, ಇ-ಕಾಮರ್ಸ್‌ ಮತ್ತು 6ಜಿ ಬಗ್ಗೆ ಬೆಂಗಳೂರು ಟೆಕ್‌ ಶೃಂಗಸಭೆಯಲ್ಲಿ ಚರ್ಚೆಗಳು ನಡೆಯಲಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com