ಮಾಜಿ ಸಿಎಂ ಕುಮಾರಸ್ವಾಮಿ ಆರೋಗ್ಯ ಸ್ಥಿರ: ಅಪೊಲೊ ಆಸ್ಪತ್ರೆ ಹೆಲ್ತ್ ಬುಲೆಟಿನ್ ರಿಲೀಸ್

ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದೆ.
ಎಚ್.ಡಿ ಕುಮಾರಸ್ವಾಮಿ
ಎಚ್.ಡಿ ಕುಮಾರಸ್ವಾಮಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದೆ.

ಇಂದು ಬೆಳಗ್ಗಿನ ಜಾವ 3.40ಕ್ಕೆ ಕುಮಾರಸ್ವಾಮಿಯವರು ಸುಸ್ತು ಬಳಲಿಕೆಯಿಂದ ಆಸ್ಪತ್ರೆಗೆ ದಾಖಲಾಗಿದ್ರು. ಸದ್ಯ ಹೆಚ್‍ಡಿಕೆ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಡಾ. ಸತೀಶ್ಚಂದ್ರ ಹಾಗೂ ವೈದ್ಯರ ತಂಡ ಕುಮಾರಸ್ವಾಮಿಯವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ.

ಕುಮಾರಸ್ವಾಮಿಯವರ ಆರೋಗ್ಯ ಸ್ಥಿರವಾಗಿದೆ. ಅವರ ಆರೋಗ್ಯದ ಬಗ್ಗೆ ತೀವ್ರ ನಿಗಾ ವಹಿಸಲಾಗಿದೆ. ಅವರ ಶೀಘ್ರ ಚೇತರಿಕೆಗಾಗಿ ಎಲ್ಲರೂ ಪ್ರಾರ್ಥಿಸೋಣ ಎಂದು ಅಪೋಲೋ ಆಸ್ಪತ್ರೆಯ  ಯೂನಿಟ್ ಹೆಡ್ ಹಾಗೂ ಉಪಾಧ್ಯಕ್ಷ ಡಾ ಗೋವಿಂದಯ್ಯ ಯತೀಶ್ ತಿಳಿಸಿದ್ದಾರೆ. ಸದ್ಯ, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಈ ಸಂಬಂಧ ಕಾಲ ಕಾಲಕ್ಕೆ ಮಾಹಿತಿ ನೀಡಲಾಗುವುದು ಎಂದೂ ತಿಳಿಸಲಾಗಿದೆ.

ಕುಮಾರಸ್ವಾಮಿ ಆರೋಗ್ಯ ವಿಚಾರಿಸಲು ಪತ್ನಿ ಅನಿತಾ ಕುಮಾರಸ್ವಾಮಿ ಅಪೋಲೋ ಆಸ್ಪತ್ರೆಗೆ ಭೇಟಿ  ನೀಡಿದರು.  ಎರಡು ಬಾರಿ ವಿದೇಶ ಪ್ರವಾಸ ಕೈಗೊಂಡಿದ್ದ ಕುಮಾರಸ್ವಾಮಿ ಸದ್ಯ ಮನೆಯಲ್ಲೇ ಇದ್ದರು. ಮಂಗಳವಾರ ತಡರಾತ್ರಿ ಇವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ ಎನ್ನಲಾಗಿದೆ. ಅಲ್ಲದೇ ಸತತ ಪ್ರವಾಸದ ಹಿನ್ನೆಲೆ ಜ್ವರ ಕಾಣಿಸಿಕೊಂಡಿದ್ದು, ಮಂಗಳವಾರ ತಡರಾತ್ರಿ ಬನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com