ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮಡಿಕೇರಿಯಲ್ಲಿ ಕೆಎಸ್‌ಆರ್‌ಟಿಸಿ ಉದ್ಯೋಗಿ ಆತ್ಮಹತ್ಯೆಗೆ ಯತ್ನ, ಹಿರಿಯ ಅಧಿಕಾರಿ ವಿರುದ್ಧ ಶೋಷಣೆ ಆರೋಪ!

ಕೊಡಗಿನಲ್ಲಿ ಕೆಎಸ್‌ಆರ್‌ಟಿಸಿ ಇಲಾಖೆಯ ಉದ್ಯೋಗಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದು ಹಿರಿಯ ಅಧಿಕಾರಿ ವಿರುದ್ಧ ಶೋಷಣೆ ಆರೋಪ ಮಾಡಿದ್ದಾರೆ. ಸಂತ್ರಸ್ತನ ಹೇಳಿಕೆಯನ್ನು ಮಡಿಕೇರಿ ನಗರ ಪೊಲೀಸರು ದಾಖಲಿಸಿಕೊಂಡಿದ್ದು ಘಟನೆಗೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲಾಗಿಲ್ಲ.

ಮಡಿಕೇರಿ: ಕೊಡಗಿನಲ್ಲಿ ಕೆಎಸ್‌ಆರ್‌ಟಿಸಿ ಇಲಾಖೆಯ ಉದ್ಯೋಗಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದು ಹಿರಿಯ ಅಧಿಕಾರಿ ವಿರುದ್ಧ ಶೋಷಣೆ ಆರೋಪ ಮಾಡಿದ್ದಾರೆ. ಸಂತ್ರಸ್ತನ ಹೇಳಿಕೆಯನ್ನು ಮಡಿಕೇರಿ ನಗರ ಪೊಲೀಸರು ದಾಖಲಿಸಿಕೊಂಡಿದ್ದು ಘಟನೆಗೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲಾಗಿಲ್ಲ.

ಆತ್ಮಹತ್ಯೆಗೆ ಯತ್ನಿಸಿದ ನೌಕರನನ್ನು 24 ವರ್ಷದ ಅಭಿಷೇಕ್ ಎಂದು ತಿಳಿದುಬಂದಿದ್ದು ಕೆಎಸ್‌ಆರ್‌ಟಿಸಿ ಇಲಾಖೆಯಲ್ಲಿ ಮೂರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಅಭಿಷೇಕ್ ತನ್ನ ತಂದೆ ನಿಧನರಾದ ನಂತರ ಅನುಕಂಪದ ಆಧಾರದ ಮೇಲೆ ಕೆಎಸ್‌ಆರ್‌ಟಿಸಿಯಲ್ಲಿ ಹುದ್ದೆಯನ್ನು ಪಡೆದಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ. 

ಪುತ್ತೂರು ಕೆಎಸ್‌ಆರ್‌ಟಿಸಿ ವಿಭಾಗದಲ್ಲಿ ಅಭಿಷೇಕ್ ಆರು ತಿಂಗಳು ಸೇವೆ ಸಲ್ಲಿಸಿದ್ದು ನಂತರ 2.5 ವರ್ಷಗಳ ಹಿಂದೆ ಮಡಿಕೇರಿ ವಿಭಾಗಕ್ಕೆ ವರ್ಗಾವಣೆಗೊಂಡಿದ್ದರು. ಅಭಿಷೇಕ್ ಗೆ ಕೆಲಸದ ಒತ್ತಡ ಜಾಸ್ತಿಯಾಗಿತ್ತು. ಮಡಿಕೇರಿ ಕೆಎಸ್‌ಆರ್‌ಟಿಸಿ ಡಿಪೋದ ವ್ಯವಸ್ಥಾಪಕಿ ಹಿರಿಯ ಅಧಿಕಾರಿ ಗೀತಾ ಅವರು ಅಭಿಷೇಕ್ ನನ್ನು ಟಾರ್ಗೆಟ್ ಮಾಡಿ ಶೋಷಣೆ ಮಾಡುತ್ತಿದ್ದಾರೆ ಎಂದು ಆಗಾಗ್ಗೆ ನನ್ನ ಬಳಿ ಹೇಳಿಕೊಳ್ಳುತ್ತಿದ್ದನು ಎಂದು ಅಭಿಷೇಕ್ ತಾಯಿ ಹೇಳಿದ್ದಾರೆ.

ಮಂಗಳವಾರ ಸಂಜೆ ಮಡಿಕೇರಿಗೆ ಭೇಟಿ ನೀಡಿದ್ದ ಪುತ್ತೂರು ವಿಭಾಗದ ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಜಯಕರ ಶೆಟ್ಟಿ ಹಾಗೂ ಕೆಎಸ್‌ಆರ್‌ಟಿಸಿ ಅಧಿಕಾರಿಗಳ ಎದುರೇ ಅಭಿಷೇಕ್ ವಿಷ ಸೇವಿಸಿದ್ದಾನೆ. ನಿರ್ವಾಹಕಿ ಗೀತಾ ಶೋಷಣೆ ಮಾಡಿದ್ದಾರೆ ಎಂದು ಆರೋಪಿಸಿ ಅಭಿಷೇಕ್ ಅಧಿಕಾರಿಗಳ ಸಮ್ಮುಖದಲ್ಲಿ ವಿಷ ಸೇವಿಸಿ ಕುಸಿದು ಬಿದ್ದಿದ್ದಾನೆ. ಕೂಡಲೇ ಅವರನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇದೇ ವೇಳೆ ಆಸ್ಪತ್ರೆಗೆ ಭೇಟಿ ನೀಡಿದ ಅಧಿಕಾರಿ ಜಯಕರ ಶೆಟ್ಟಿ ಅವರು ಡಿಪೋ ಮ್ಯಾನೇಜರ್ ವಿರುದ್ಧದ ಆರೋಪಗಳನ್ನು ತಳ್ಳಿಹಾಕಿದರು.

ಮಡಿಕೇರಿ ನಗರ ಠಾಣೆ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ಸಂತ್ರಸ್ತ ಅಭಿಷೇಕ್ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಸಂತ್ರಸ್ತೆಯ ಔಪಚಾರಿಕ ದೂರಿನ ನಂತರವೇ ಎಫ್‌ಐಆರ್ ದಾಖಲಿಸಲಾಗುವುದು ಎಂದು ಇಲಾಖೆಯ ಮೂಲಗಳು ಖಚಿತಪಡಿಸಿವೆ. ಆಸ್ಪತ್ರೆಗೆ ಭೇಟಿ ನೀಡಿದ ಇತರ ಕೆಲವು ನೌಕರರು ಕೆಎಸ್‌ಆರ್‌ಟಿಸಿ ಡಿಪೋ ವ್ಯವಸ್ಥಾಪಕರ ಶೋಷಣೆ ವಿರುದ್ಧ ಧ್ವನಿ ಎತ್ತಿದ್ದಾರೆ. ಡಿಪೋ ಮ್ಯಾನೇಜರ್ ಗೀತಾ ಅವರನ್ನು ವರ್ಗಾವಣೆ ಮಾಡಲಾಗಿದ್ದು, ನಗರದಲ್ಲಿ ಹೊಸ ಅಧಿಕಾರಿ ಅಧಿಕಾರ ವಹಿಸಿಕೊಳ್ಳುವವರೆಗೂ ಅವರು ಮಡಿಕೇರಿಯಲ್ಲಿಯೇ ಇರಲಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com