ಮಂಗಳೂರು: ಚಲಿಸುತ್ತಿದ್ದ ಬಸ್ ನಿಂದ ಬಿದ್ದು 23 ವರ್ಷದ ಕಂಡಕ್ಟರ್ ಸಾವು

ಮಂಗಳೂರು: ಕಂಡಕ್ಟರ್ ವೊಬ್ಬರು ಚಲಿಸುತ್ತಿದ್ದ ಬಸ್ ನಿಂದ ಆಕಸ್ಮಿಕವಾಗಿ ಬಿದ್ದು ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಮಂಗಳೂರಿನ ನಂತೂರು ಸರ್ಕಲ್ ಬಳಿ ಈ ಘಟನೆ ಸಂಭವಿಸಿದ್ದು, ಮೃತ ಕಂಡಕ್ಟರ್ ರನ್ನು 23 ವರ್ಷದ ಬಾಗಲಕೋಟೆ ನಿವಾಸಿ ಈರಯ್ಯ(ಗುರು) ಎಂದು ಗುರುತಿಸಲಾಗಿದೆ. ಬಸ್ ನ ಮುಂಭಾಗದ ಬಾಗಿಲಿನ ಫುಟ್ ಬೋರ್ಡ್ ನಲ್ಲಿ ನಿಂತಿದ್ದ ಈರಯ್ಯ ಬಸ್ ತಿರುವಿನಲ್ಲಿ ವೇಗವಾಗಿ ಚಲಿಸುತ್ತಿದ್ದಾಗ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದಾರೆ.
ಕೂಡಲೇ ಅಲ್ಲಿಯೇ ಕರ್ತವ್ಯ ನಿರತರಾಗಿದ್ದ ಸಂಚಾರಿ ಪೊಲೀಸ್ ಪೇದೆಯೊಬ್ಬರು ಅವರನ್ನು ಸ್ಥಳೀಯರ ನೆರವಿನಿಂದ ಆಟೋದಲ್ಲಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟು ಹೊತ್ತಿಗಾಗಲೇ ಈರಯ್ಯ ಸಾವನ್ನಪ್ಪಿದ್ದರು ಎಂದು ಹೇಳಲಾಗಿದೆ.
ಅಪಘಾತದ ವೇಳೆ ಬಸ್ ಕದ್ರಿಯ ಪಡುವಾದಿಂದ ಶಿವಬಾಗ್‌ಗೆ ಪ್ರಯಾಣಿಸುತ್ತಿತ್ತು ಎಂದು ಹೇಳಲಾಗಿದೆ. ಬಸ್‌ನ ಬಾಗಿಲಲ್ಲಿ ನಿಂತಿದ್ದ ಈರಯ್ಯ ಅವರ ಸಮತೋಲನ ಹಾಗೂ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.
ಈರಯ್ಯ ಅಪಘಾತಕ್ಕೀಡಾದ ವಿಡಿಯೋ ಸ್ಥಳದಲ್ಲಿ ನಿಂತಿದ್ದ ಕಾರೊಂದರ ಡ್ಯಾಶ್ ಬೋರ್ಡ್ ಕ್ಯಾಮೆರಾದಲ್ಲಿ ದಾಖಲಾಗಿದ್ದು, ಇದೀಗ ಈ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


