ಡಿಸೆಂಬರ್‌ನಲ್ಲಿ ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮ, ದಲೈಲಾಮಾ ಮಂಡ್ಯಕ್ಕೆ ಭೇಟಿ

ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಮತ್ತು ಟಿಬೆಟಿಯನ್ ಧಾರ್ಮಿಕ ಗುರು ದಲೈ ಲಾಮಾ ಅವರು ಡಿಸೆಂಬರ್‌ನಲ್ಲಿ ಕರ್ನಾಟಕದ ಮಂಡ್ಯಕ್ಕೆ ಭೇಟಿ ನೀಡಿ, ಅಂತಾರಾಷ್ಟ್ರೀಯ ಯೋಗ ಮತ್ತು ಧ್ಯಾನ ಕೇಂದ್ರಕ್ಕೆ ಶಂಕುಸ್ಥಾಪನೆ...
ಬರಾಕ್ ಒಬಾಮ, ದಲೈಲಾಮಾ
ಬರಾಕ್ ಒಬಾಮ, ದಲೈಲಾಮಾ

ಬೆಂಗಳೂರು: ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಮತ್ತು ಟಿಬೆಟಿಯನ್ ಧಾರ್ಮಿಕ ಗುರು ದಲೈ ಲಾಮಾ ಅವರು ಡಿಸೆಂಬರ್‌ನಲ್ಲಿ ಕರ್ನಾಟಕದ ಮಂಡ್ಯಕ್ಕೆ ಭೇಟಿ ನೀಡಿ, ಅಂತಾರಾಷ್ಟ್ರೀಯ ಯೋಗ ಮತ್ತು ಧ್ಯಾನ ಕೇಂದ್ರಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಮಂಡ್ಯದ ಹಲ್ಲೆಗೆರೆ ಗ್ರಾಮದಲ್ಲಿ ಭೂತಾಯಿ ಟ್ರಸ್ಟ್ ಈ ಆಧ್ಯಾತ್ಮಿಕ ಕೇಂದ್ರವನ್ನು ನಿರ್ಮಿಸುತ್ತಿದೆ ಎಂದು ಮುಖ್ಯಮಂತ್ರಿ ಕಚೇರಿ ಗುರುವಾರ ತಿಳಿಸಿದೆ.

ಈ ಸಂಬಂಧ ಅಮೆರಿಕದ ವೈದ್ಯ ಡಾ.ಲಕ್ಷ್ಮೀನರಸಿಂಹಮೂರ್ತಿ ನೇತೃತ್ವದ ನಿಯೋಗ, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಹಲ್ಲೇಗೆರೆ ಗ್ರಾಮಕ್ಕೆ ಹೆಲಿಪ್ಯಾಡ್, ರಸ್ತೆ, ಚರಂಡಿ, ವಿದ್ಯುತ್, ಕುಡಿಯುವ ನೀರು ಮತ್ತಿತರ ಸೌಲಭ್ಯ ಕಲ್ಪಿಸಲು ನೆರವು ನೀಡುವಂತೆ ಕೋರಿದ್ದಾರೆ ಎಂದು ಸಿಎಂಒ ಕಚೇರಿ ಪ್ರಕಟಣೆ ತಿಳಿಸಿದೆ.

ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಿಎಂ ಶೀಘ್ರವೇ ಅಧಿಕಾರಿಗಳ ಸಭೆ ನಡೆಸುವುದಾಗಿ ಭರವಸೆ ನೀಡಿದ್ದಾರೆ.

ಆಧ್ಯಾತ್ಮಿಕ ಕೇಂದ್ರದ ಕಾರ್ಯವೈಖರಿಯನ್ನು ವಿವರಿಸಿದ ನಿಯೋಗದ ಸದಸ್ಯರು, ಹಲ್ಲೇಗೆರೆ ಮಂಡ್ಯ ಜಿಲ್ಲೆಗೆ ಮಾತ್ರವಲ್ಲದೆ ಇಡೀ ರಾಜ್ಯಕ್ಕೆ ದೊಡ್ಡ ಕೊಡುಗೆಯಾಗಲಿದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com