ರಾಜ್ಯ

ಟಿಕ್ ಟಾಕ್ ಸ್ಟಾರ್ ಕೊಲೆಗೆ ಬಿಗ್ ಟ್ವಿಸ್ಟ್: ಕರ್ನಾಟಕ ಪೊಲೀಸರಿಂದ 8 ಮಂದಿ ವಶಕ್ಕೆ

ಟಿಕ್ ಟಾಕ್ ಸ್ಟಾರ್ ಕೊಲೆಗೆ ಬಿಗ್ ಟ್ವಿಸ್ಟ್: ಕರ್ನಾಟಕ ಪೊಲೀಸರಿಂದ 8 ಮಂದಿ ವಶಕ್ಕೆ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಬೆಂಗಳೂರು ಮೂಲದ ಟಿಕ್ ಟಾಕ್ ಸ್ಟಾರ್ ನವೀನ್​ ಅಪಹರಣ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಟ್ವಿಸ್ಟ್ ದೊರೆತಿದ್ದು, ಈ ಕೊಲೆ ಪ್ರಕರಣವನ್ನು ಬೇಧಿಸಿರುವ ಪೊಲೀಸರು 8 ಮಂದಿಯನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ್ದಾರೆ.

ನವೀನ್ ಕೊಲೆ ಪ್ರಕರಣವನ್ನು ಮೈಸೂರಿನ ನಂಜನಗೂಡು ಪೊಲೀಸರು ಬೇಧಿಸಿದ್ದು, ನವೀನ್​ ಕೊಲೆ ಸಂಬಂಧ ಎಂಟು ಜನ ಆರೋಪಿಗಳನ್ನ ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದ್ದಾರೆ. 

ಬೆಂಗಳೂರಿನ ಮಾಜಿ ಕಾರ್ಪೋರೆಟರ್ ಅಣ್ಣನ ಮಗನ ಕೊಲೆ ಸೇಡಿಗಾಗಿ ನವೀನ್ ರನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಈ ಹಿಂದೆ ಬೆಂಗಳೂರಿನ ಕಗ್ಗಲಿಪುರ ವ್ಯಾಪ್ತಿಯಲ್ಲಿ ನಡೆದಿದ್ದ ವಿನೋದ್ ಎಂಬುವವರ ಕೊಲೆ ಪ್ರಕರಣದಲ್ಲಿ ನವೀನ್ ಜೈಲಿಗೆ ಹೋಗಿ ಬಂದಿದ್ದ.​ ಬಳಿಕ ಟಿಕ್‌ ಟಾಕ್‌ ಮಾಡುತ್ತಿದ್ದರಿಂದ ನವೀನ್ ಟಿಕ್ ಟಾಕ್ ಸ್ಟಾರ್ ಎಂದೆ ಗುರುತಿಸಿಕೊಂಡಿದ್ದ. ಹೀಗಾಗಿ ಆ ಕೊಲೆ ಸೇಡಿಗಾಗಿ ನವೀನ್​ ಹತ್ಯೆ ಮಾಡಲಾಗಿದೆ ಎನ್ನುವ ಮಾಹಿತಿ ಸಿಕ್ಕಿದ್ದು, ಈ ಬಗ್ಗೆ ನಂಜನಗೂಡು  ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಇದೇ ತಿಂಗಳು ಇದೇ ಆಗಸ್ಟ್ 27ರಂದು ಟಿಕ್ ಟಾಕ್ ಸ್ಟಾರ್ ನವೀನ್ ಇಬ್ಬರು ಯುವತಿಯರೊಂದಿಗೆ ಬೆಂಗಳೂರಿನಿಂದ ಮೈಸೂರಿಗೆ ಆಗಮಿಸಿದ್ದ. ಇಬ್ಬರು ಯುವತಿಯರ ಜೊತೆ ಮೈಸೂರಿಗೆ ಆಗಮಿಸಿ ಅರಮನೆ ಮುಂದೆ ರೀಲ್ಸ್ ಮಾಡುತ್ತಿದ್ದ ವೇಳೆ ದುಷ್ಕರ್ಮಿಗಳು ರಾತ್ರಿ 9.45ರ ಸಮಯದಲ್ಲಿ ಕಾರಿನಲ್ಲಿ ಬಂದು ಅಪಹರಣ ಮಾಡಿಕೊಂಡು ಹೋಗಿದ್ದರು. ಬಳಿಕ ನಂಜನಗೂಡಿನ ಗೋಳೂರಿನ‌ ನಾಲೆಯಲ್ಲಿ ಶವ ಪತ್ತೆಯಾಗಿತ್ತು. ಅಪರಿಚಿತ ವ್ಯಕ್ತಿಯ ಕೊಲೆ ಎಂದು ನಂಜನಗೂಡು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಮುಖ ಆರೋಪಿ ಮಾಜಿ ಕಾರ್ಪೊರೇಟರ್‌ನ ಸೋದರಳಿಯನಾಗಿದ್ದು, ರಾಜಕೀಯವಾಗಿ ಉತ್ತಮ ಸಂಪರ್ಕ ಹೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳ ಬಂಧನ ಕುರಿತು ಪೊಲೀಸರು ಇನ್ನೂ ಅಧಿಕೃತ ಘೋಷಣೆ ಮಾಡಬೇಕಿದೆ. ಮುಂದಿನ ತನಿಖೆ ನಡೆಯುತ್ತಿದೆ.
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.