ಮುಂದಿನ ವರ್ಷದಿಂದ ಪ್ರತಿ ವಾರ್ಡ್‌ನಲ್ಲಿ ಬೆಂಗಳೂರು ಹಬ್ಬ ಆಚರಣೆ: ಡಿಸಿಎಂ ಡಿಕೆ.ಶಿವಕುಮಾರ್

ಮುಂದಿನ ವರ್ಷದಿಂದ ನಗರದ ಪ್ರತಿ ವಾರ್ಡ್‌ ಹಾಗೂ ವಿಧಾನಸಭೆ ಕ್ಷೇತ್ರದಲ್ಲಿ ‘ಬೆಂಗಳೂರು ಹಬ್ಬ’ವನ್ನು ಆಯೋಜಿಸಲಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಗುರುವಾರ ಹೇಳಿದರು.
ಡಿಸಿಎಂ ಡಿಕೆ.ಶಿವಕುಮಾರ್
ಡಿಸಿಎಂ ಡಿಕೆ.ಶಿವಕುಮಾರ್
Updated on

ಬೆಂಗಳೂರು: ಮುಂದಿನ ವರ್ಷದಿಂದ ನಗರದ ಪ್ರತಿ ವಾರ್ಡ್‌ ಹಾಗೂ ವಿಧಾನಸಭೆ ಕ್ಷೇತ್ರದಲ್ಲಿ ‘ಬೆಂಗಳೂರು ಹಬ್ಬ’ವನ್ನು ಆಯೋಜಿಸಲಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಗುರುವಾರ ಹೇಳಿದರು.

‘ಅನ್‌ಬಾಕ್ಸಿಂಗ್ ಬೆಂಗಳೂರು ಫೌಂಡೇಷನ್’ ವತಿಯಿಂದ ಆಯೋಜಿಸಲಾಗಿರುವ ‘ಬಿ.ಎಲ್‌.ಆರ್‌ ಹ‌ಬ್ಬ’ದ ಅಂಗವಾಗಿ ಚಿಕ್ಕಪೇಟೆಯಲ್ಲಿ ಗುರುವಾರ ನಡೆದ ಕೆಂಪೇಗೌಡರ ಎತ್ತಿನ ಬಂಡಿ ಮೆರವಣಿಗೆಗೆ ಡಿಕೆ.ಶಿವಕುಮಾರ್ ಅವರು ನಿನ್ನೆ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ನಾಡಪ್ರಭು ಕೆಂಪೇಗೌಡರು ಚಿಕ್ಕಪೇಟೆಯಿಂದ ನಾಲ್ಕು ದಿಕ್ಕಿಗೆ ನಾಲ್ಕು ಜೋಡಿ ಎತ್ತಿನ ಗಾಡಿಯನ್ನು ತೆಗೆದುಕೊಂಡು ಹೋಗಿದ್ದರು. ಎಲ್ಲ ವೃತ್ತಿ, ಎಲ್ಲಾ ಜನಾಂಗ, ಎಲ್ಲಾ ಧರ್ಮದವರನ್ನೂ ಒಟ್ಟಿಗೆ ಸೇರಿಸಿ ಬೆಂಗಳೂರು ನಗರ ಕಟ್ಟಿದರು. ಪ್ರಪಂಚದ ಎಲ್ಲ ಜನ ಬೆಂಗಳೂರಿನ ಮೂಲಕ ಭಾರತವನ್ನು ನೋಡುತ್ತಿದ್ದಾರೆ. ಇದಕ್ಕೆ ಕೆಂಪೇಗೌಡರು ಹಾಕಿಕೊಟ್ಟ ಅಡಿಪಾಯ ಕಾರಣ. ಇದನ್ನು ನಾವು ಉಳಿಸಿಕೊಂಡು, ಬೆಳೆಸಿಕೊಂಡು ಹೋಗಬೇಕು ಎಂದು ಹೇಳಿದರು.

ಬೆಂಗಳೂರು ಹಬ್ಬವು ಬೆಂಗಳೂರಿನ ಕಲೆ, ಸಂಸ್ಕೃತಿ ಮತ್ತು ಜೀವನವನ್ನು ಕೊಂಡಾಡುವ 11 ದಿನಗಳ ಹಬ್ಬವಾಗಿದ್ದು, ಈ ಉತ್ಸವಕ್ಕೆ ಸರ್ಕಾರ ಎಲ್ಲಾ ಬೆಂಬಲವನ್ನು ನೀಡುತ್ತಿದೆ. ಕಲೆ, ಸಂಸ್ಕೃತಿ, ತಂತ್ರಜ್ಞಾನ ಮುಂತಾದವುಗಳನ್ನು ಕೇಂದ್ರೀಕರಿಸುವ ಈ ಉತ್ಸವವು ನಗರದ ಸುಮಾರು 300 ಸ್ಥಳಗಳಲ್ಲಿ ನಡೆಯಲಿದ್ದು, ಇದನ್ನು ದೊಡ್ಡ ಮಟ್ಟದಲ್ಲಿ ಯಶಸ್ವಿಗೊಳಿಸುವಂತೆ ಸಾರ್ವಜನಿಕರಿಗೆ ಕರೆ ನೀಡುತ್ತಿದ್ದೇನೆಂದು ತಿಳಿಸಿದರು.

ಮುಂದಿನ ವರ್ಷದಿಂದ ಪ್ರತಿ ವಾರ್ಡ್ ಮತ್ತು ವಿಧಾನಸಭಾ ಕ್ಷೇತ್ರದಲ್ಲಿ ಬೆಂಗಳೂರು ಹಬ್ಬ ನಡೆಯಲಿದ್ದು, ಜನರು ನಮ್ಮ ಬೆಂಗಳೂರಿನ ಮೂಲವನ್ನು ಉಳಿಸಿಕೊಂಡು ಹೋಗಬೇಕು. ಬೆಂಗಳೂರಿನ ಸಂಸ್ಕೃತಿ ಜೀವಂತವಾಗಿರಲು ಜನರು ಈ ಹಬ್ಬವನ್ನು ದೊಡ್ಡ ಮಟ್ಟದಲ್ಲಿ ಯಶಸ್ವಿಗೊಳಿಸಬೇಕು ಎಂದರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com