ಬೆಂಗಳೂರಿನ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ: ಸ್ಥಳಕ್ಕೆ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ದೌಡು

ಐಟಿ ಸಿಟಿ ಬೆಂಗಳೂರಿನ ಹಲವು ಶಾಲೆಗಳಿಗೆ ಶುಕ್ರವಾರ ಬೆಳ್ಳಂಬೆಳಗ್ಗೆ ಬಾಂಬ್ ಬೆದರಿಕೆ ಇಮೇಲ್ ಗಳು ಬಂದಿದೆ. ಕಳೆದ ವರ್ಷ ಕೂಡ ಬೆಂಗಳೂರಿನ ಸುಮಾರು 30 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಗಳು ಬಂದಿದ್ದವು. ಇದೀಗ ಮತ್ತೆ ಅಂತಹ ಘಟನೆ ಪುನರಾವರ್ತನೆಯಾಗಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಐಟಿ ಸಿಟಿ ಬೆಂಗಳೂರಿನ ಹಲವು ಶಾಲೆಗಳಿಗೆ ಶುಕ್ರವಾರ ಬೆಳ್ಳಂಬೆಳಗ್ಗೆ ಬಾಂಬ್ ಬೆದರಿಕೆ ಕರೆ ಬಂದಿದೆ.
ಕಳೆದ ವರ್ಷ ಕೂಡ ಬೆಂಗಳೂರಿನ ಸುಮಾರು 30 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಗಳು ಬಂದಿದ್ದವು. ಇದೀಗ ಮತ್ತೆ ಅಂತಹ ಘಟನೆ ಪುನರಾವರ್ತನೆಯಾಗಿದೆ. 

ಈ ಬಾರಿ ಬೆಂಗಳೂರಿನ 15ಕ್ಕೂ ಹೆಚ್ಚು ಶಾಲೆಗಳಿಗೆ ಆಗಂತುಕರು ಬಾಂಬ್ ಬೆದರಿಕೆ ಇಮೇಲ್ ಗಳು ಹಾಕಿದ್ದಾರೆ. ಇ- ಮೇಲ್ ಮೂಲಕ ಬಸವೇಶ್ವರ ನಗರದ ನ್ಯಾಪಲ್, ವಿದ್ಯಾಶಿಲ್ಪ ಸೇರಿದಂತೆ 15 ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಿದ್ದಾರೆ.

ಮಹದೇವಪುರದ ಗೋಪಾಲನ್ ಇಂಟನ್ರ್ಯಾಷನಲ್ ಶಾಲೆ, ವರ್ತೂರು ಠಾಣಾ ವ್ಯಾಪ್ತಿಯ ಡೆಲ್ಲಿ ಪಬ್ಲಿಕ್ ಸ್ಕೂಲ್, ಮಾರತ್ತಹಳ್ಳಿ ಠಾಣಾ ವ್ಯಾಪ್ತಿಯ ನ್ಯೂ ಅಕಾಡೆಮಿ ಸ್ಕೂಲ್, ಹೆಣ್ಣೂರು ಠಾಣಾ ವ್ಯಾಪ್ತಿಯ ಸೇಂಟ್ ವಿನ್ಸೆಂಟ್ ಪೌಲ್ ಶಾಲೆ, ಗೋವಿಂದಪುರ ಠಾಣಾ ವ್ಯಾಪ್ತಿಯ ಇಂಡಿಯನ್ ಪಬ್ಲಿಕ್ ಸ್ಕೂಲ್‍ನಲ್ಲಿ ಬಾಂಬ್ ಇಟ್ಟಿರುವುದಾಗಿ ದುಷ್ಕರ್ಮಿಗಳು ಬೆದರಿಸಿದ್ದರು. 

ಬಾಂಬ್ ಬೆದರಿಕೆ ಇಮೇಲ್ ಗಳು ಹಿನ್ನೆಲೆಯಲ್ಲಿ ಕೂಡಲೇ ಶಾಲೆಗೆ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ದೌಡಾಯಿಸಿ ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ. 

ಶಾಲೆಗೆ ಓಡೋಡಿ ಬಂದ ಪೋಷಕರು: ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಮಕ್ಕಳನ್ನು ಶಾಲೆಯಿಂದ ಮನೆಗೆ ವಾಪಸ್ ಕಳುಹಿಸಿದ್ದಾರೆ. ಆತಂಕಗೊಂಡ ಪೋಷಕರು ಶಾಲೆಯ ಬಳಿ ಓಡಿ ಬಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com