ವಕೀಲರ ಮೇಲೆ ಪ್ರಕರಣ: 6 ಪೊಲೀಸ್ ಅಧಿಕಾರಿಗಳ ಅಮಾನತು, ಸ್ವಯಂ ಪ್ರೇರಿತ ಅರ್ಜಿ ವಿಚಾರಣೆ ಆರಂಭಿಸಿದ ಹೈಕೋರ್ಟ್

ಚಿಕ್ಕಮಗಳೂರಿನಲ್ಲಿ ವಕೀಲರೊಬ್ಬರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ  ಹೈಕೋರ್ಟ್ ಸ್ವಯಂ ಪ್ರೇರಿತ ಅರ್ಜಿ ವಿಚಾರಣೆ ವೇಳೆ ಆರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದೆ.
ವಕೀಲರ ಪ್ರತಿಭಟನೆ ಚಿತ್ರ
ವಕೀಲರ ಪ್ರತಿಭಟನೆ ಚಿತ್ರ

ಬೆಂಗಳೂರು: ಚಿಕ್ಕಮಗಳೂರಿನಲ್ಲಿ ವಕೀಲರೊಬ್ಬರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ  ಹೈಕೋರ್ಟ್ ಸ್ವಯಂ ಪ್ರೇರಿತ ಅರ್ಜಿ ವಿಚಾರಣೆ ವೇಳೆ ಆರು ಪೊಲೀಸ್ ಅಧಿಕಾರಿಗಳ ಅಮಾನತನ್ನು ಶುಕ್ರವಾರ ದಾಖಲು ಮಾಡಿಕೊಂಡಿದೆ. 

‘‘ವಿಷಯದ ಗಂಭೀರತೆ ಹಾಗೂ ಚಿಕ್ಕಮಗಳೂರು ಟೌನ್ ಪೊಲೀಸ್ ಠಾಣೆಯ ಆರು ಮಂದಿ ಪೊಲೀಸ್ ಅಧಿಕಾರಿಗಳು ಕರ್ತವ್ಯಲೋಪ ಎಸಗಿರುವ ಹಿನ್ನೆಲೆಯಲ್ಲಿ ಒಬ್ಬರು ಸಹಾಯಕ ಸಬ್ ಇನ್ಸ್‌ಪೆಕ್ಟರ್, ನಾಲ್ವರು ಕಾನ್‌ಸ್ಟೆಬಲ್‌ಗಳು ಮತ್ತು ಒಬ್ಬರು ಸಬ್‌ಇನ್ಸ್‌ಪೆಕ್ಟರ್ ಅವರನ್ನು ಡಿಸೆಂಬರ್ 1 ರ ಕಚೇರಿ ಆದೇಶದ ಮೂಲಕ ಅಮಾನತುಗೊಳಿಸಲಾಗಿದೆ ಎಂದು ಅಡ್ವೊಕೇಟ್ ಜನರಲ್ ಅವರ ವಿವರ ಸಲ್ಲಿಕೆ ನಂತರ ನ್ಯಾಯಾಲಯ ತನ್ನ ಆದೇಶದಲ್ಲಿ ತಿಳಿಸಿದೆ.

ನ್ಯಾಯಾಲಯದ ವಿಚಾರಣೆಯಿಂದ ದೂರವಿಡುವಂತಹ ತೀವ್ರ ಕ್ರಮಗಳನ್ನು ತೆಗೆದುಕೊಳ್ಳದಂತೆ ನ್ಯಾಯಾಲಯವು ವಕೀಲರನ್ನು ಕೇಳಿದೆ. ಗುರುವಾರ ರಾತ್ರಿ ಮಾರುಕಟ್ಟೆ ರಸ್ತೆಯಲ್ಲಿ ಹೆಲ್ಮೆಟ್ ಇಲ್ಲದೆ ಬೈಕ್ ಚಲಾಯಿಸಿದ್ದಕ್ಕಾಗಿ ಪೊಲೀಸರು ತಡೆದಿದ್ದ ವಕೀಲ ಪ್ರೀತಮ್‌ಗೆ ಸಂಬಂಧಿಸಿದ ಪ್ರಕರಣ ಇದಾಗಿದೆ. ವಾಗ್ವಾದದ ನಂತರ ಅವರನ್ನು ಠಾಣೆಗೆ ಕರೆದೊಯ್ದು ಥಳಿಸಲಾಗಿದೆ ಎಂದು ಆರೋಪಿಸಲಾಗಿದೆ.

ವಕೀಲರ ಪ್ರತಿಭಟನೆಯ ನಂತರ ಆರು ಪೊಲೀಸರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅಡ್ವೊಕೇಟ್ ಜನರಲ್ ಅವರು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರ ಪೀಠದ ಮುಂದೆ ಪೊಲೀಸ್ ಇಲಾಖೆಯು ಈ ವಿಷಯದಲ್ಲಿ ಕೈಗೊಂಡ ಕ್ರಮಗಳ ವಿವರ ನೀಡುವ ಮೆಮೊವನ್ನು ಸಲ್ಲಿಸಿದರು.

‘‘ಪ್ರಕರಣದ ತೀವ್ರತೆ ಪರಿಗಣಿಸಿ ತನಿಖೆಯನ್ನು ಚಿಕ್ಕಮಗಳೂರು ಉಪವಿಭಾಗದ ಉಪ ಪೊಲೀಸ್ ವರಿಷ್ಠಾಧಿಕಾರಿ ಶೈಲೇಂದ್ರ ಎಚ್.ಎಂ ಅವರಿಗೆ ವಹಿಸಲಾಗಿದೆ ಎಂದು ನ್ಯಾಯಾಲಯ ದಾಖಲಿಸಿದೆ. ಘಟನೆಯ ನಂತರ ಚಿಕ್ಕಮಗಳೂರಿನಲ್ಲಿ ಠಿಕಾಣಿ ಹೂಡಿರುವ ವಕೀಲರ ಸಂಘದ ಬೆಂಗಳೂರು ಅಧ್ಯಕ್ಷ ವಿವೇಕ್ ಸುಬ್ಬಾ ರೆಡ್ಡಿ, ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಿದ್ದರು.

ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳ ಸಹಕಾರವನ್ನು ನ್ಯಾಯಾಲಯ ಅವರಿಗೆ ತಿಳಿಸಿದೆ. ಚಿಕ್ಕಮಗಳೂರಿನ ವಕೀಲರ ಸಂಘದೊಂದಿಗೆ ಮಾಹಿತಿ ಹಂಚಿಕೊಳ್ಳುವುದಾಗಿ ಹಾಗೂ ಅಲ್ಲಿನ ವಕೀಲರು ಎಂದಿನಂತೆ ನ್ಯಾಯಾಲಯಕ್ಕೆ ಹಾಜರಾಗುವಂತೆ ತಿಳಿಸುವುದಾಗಿ ರೆಡ್ಡಿ ನ್ಯಾಯಾಲಯಕ್ಕೆ ಭರವಸೆ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com