ಅಮೂಲಾಗ್ರ ತನಿಖೆ ನಡೆಸಿ ದುಷ್ಟರ ಹೆಡೆಮುರಿ ಕಟ್ಟಬೇಕು: ಎಚ್.ಡಿ ಕುಮಾರಸ್ವಾಮಿ

ಸಿಲಿಕಾನ್ ಸಿಟಿಯ ಸುಮಾರು ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿರುವ ಪ್ರಕರಣ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್‍ ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.
ಎಚ್.ಡಿ ಕುಮಾರಸ್ವಾಮಿ
ಎಚ್.ಡಿ ಕುಮಾರಸ್ವಾಮಿ

ಬೆಂಗಳೂರು: ಸಿಲಿಕಾನ್ ಸಿಟಿಯ ಸುಮಾರು ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿರುವ ಪ್ರಕರಣ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್‍ ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ಈ ಸಂಬಂಧ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿರುವ ಹೆಚ್‍ಡಿ  ಕುಮಾರಸ್ವಾಮಿ ಶಾಂತಿ ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡುವ ಹುನ್ನಾರ ಇದಾಗಿದೆ ಎಂದು ಹೇಳಿದ್ದಾರೆ. ಶಾಲೆಗಳಿಗೆ ಅನಾಮಧೇಯ ವ್ಯಕ್ತಿಗಳು ಬಾಂಬ್ ಬೆದರಿಕೆ ಒಡ್ಡಿರುವುದು ಕಳವಳಕಾರಿ. ಮಕ್ಕಳು, ಪೋಷಕರು ತೀವ್ರವಾಗಿ ಕಳವಳಗೊಂಡಿದ್ದು, ಅವರಲ್ಲಿ ಭೀತಿ ಸೃಷ್ಟಿಸಿ, ಶಾಂತಿ ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡುವ ದುರುದ್ದೇಶದಿಂದಲೇ ದುಷ್ಟಶಕ್ತಿಗಳು ಇಂತಹ ಹುನ್ನಾರ ನಡೆಸಿರಬಹುದು ಎಂದಿದ್ದಾರೆ.

ರಾಜ್ಯ  ಕಾಂಗ್ರೆಸ್ ಸರ್ಕಾರವು ಯಾವುದೇ ಕಾರಣಕ್ಕೂ ಈ ಘಟನೆಯನ್ನು ಲಘುವಾಗಿ ಪರಿಗಣಿಸಬಾರದು. ಪೋಷಕರು ಮಕ್ಕಳನ್ನು ಧೈರ್ಯವಾಗಿ ಶಾಲೆಗಳಿಗೆ ಕಳಿಸುವಂತಹ ಸುರಕ್ಷತೆ, ಭದ್ರತೆಯ ಖಾತರಿಯನ್ನು ನೀಡಬೇಕು ಎಂದಿದ್ದಾರೆ.

ಈ ಬೆದರಿಕೆಗಳ ಬಗ್ಗೆ ಅಮೂಲಾಗ್ರ ತನಿಖೆ ನಡೆಸಿ, ಇದರ ಹಿಂದೆ ಯಾರಿದ್ದಾರೆ? ಮೂಲ ಯಾವುದು ಎನ್ನುವುದನ್ನು ಪತ್ತೆ ಹಚ್ಚಿ ದುಷ್ಟರ ಹೆಡೆಮುರಿ ಕಟ್ಟಬೇಕು. ಈ ಬಗ್ಗೆ ಕೇಂದ್ರ ಸರಕಾರದ ನೆರವು ಪಡೆಯುವ ಬಗ್ಗೆ ರಾಜ್ಯ ಸರಕಾರ ಮೀನಾಮೇಷ ಎಣಿಸಬಾರದು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com