ಚಿಕ್ಕಮಗಳೂರು ವಕೀಲ ಪ್ರೀತಂ ಮೇಲೆ ಹಲ್ಲೆ ಆರೋಪ: ಸ್ವಯಂಪ್ರೇರಿತ ಪ್ರಕರಣ ದಾಖಲು, ಹೈಕೋರ್ಟ್ ನಲ್ಲಿ ವಿಚಾರಣೆ

ಚಿಕ್ಕಮಗಳೂರಿನ ವಕೀಲ ಪ್ರೀತಂ ಮೇಲೆ ಪೊಲೀಸರು ನಡೆಸಿರುವ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಆರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಅತ್ಯಂತ ಕಡಿಮೆ ಅವಧಿಯಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅಡ್ವೊಕೇಟ್ ಜನರಲ್ ಹೈಕೋರ್ಟ್‌ಗೆ ತಿಳಿಸಿದ್ದಾರೆ.
ಕರ್ನಾಟಕ ಹೈಕೋರ್ಟ್
ಕರ್ನಾಟಕ ಹೈಕೋರ್ಟ್

ಬೆಂಗಳೂರು: ಚಿಕ್ಕಮಗಳೂರಿನ ವಕೀಲ ಪ್ರೀತಂ ಮೇಲೆ ಪೊಲೀಸರು ನಡೆಸಿರುವ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಆರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಅತ್ಯಂತ ಕಡಿಮೆ ಅವಧಿಯಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅಡ್ವೊಕೇಟ್ ಜನರಲ್ ಹೈಕೋರ್ಟ್‌ಗೆ ತಿಳಿಸಿದ್ದಾರೆ.

ಚಿಕ್ಕಮಗಳೂರು ವಕೀಲ ಪ್ರೀತಂ ಮೇಲಿನ ಹಲ್ಲೆ ಪ್ರಕರಣ ಸಂಬಂಧ ಹೈಕೋರ್ಟ್​ನಲ್ಲಿ ಸ್ವಯಂಪ್ರೇರಿತ ಪ್ರಕರಣವನ್ನಾಗಿಸಿ ಮುಖ್ಯ ನ್ಯಾಯಮೂರ್ತಿಗಳಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿದೆ.

ವಕೀಲ ಪ್ರೀತಂ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಬೆಂಗಳೂರಿನ ವಕೀಲರ ಸಂಘ ನೀಡಿದ ಮನವಿಯನ್ನು ಗಂಭೀರವಾಗಿ ಪರಿಗಣಿಸಿ ಸ್ವಯಂಪ್ರೇರಿತ ಪ್ರಕರಣವನ್ನಾಗಿಸಿ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ, ಹಾಜರಾಗಿದ್ದ ಅಡ್ವೋಕೇಟ್​ ಜನರಲ್​, ಘಟನೆ ಸಂಬಂಧ ಆರು ಮಂದಿ ಪೊಲೀಸರನ್ನು ಅಮಾನತು ಮಾಡಲಾಗಿದೆ. ಅತ್ಯಂತ ಕಡಿಮೆ ಅವಧಿಯಲ್ಲಿ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ವಿವರಿಸಿದರು.

ಪ್ರಕರಣದ ಗಂಭೀರತೆ ಅರಿತು ಮತ್ತು ಕರ್ತವ್ಯಲೋಪದ ಮೇಲೆ ಆರು ಮಂದಿ ಪೊಲೀಸರನ್ನು ಡಿಸೆಂಬರ್ 1ರಂದು ಅಮಾನತು ಮಾಡಲಾಗಿದೆ. ಈ ಪೈಕಿ ಒಬ್ಬರು ಸಹಾಯಕ ಪೊಲೀಸ್ ಇನ್ಸ್​ಪೆಕ್ಟರ್, ಒಬ್ಬರು ಪಿಎಸ್ಐ ಮತ್ತು ನಾಲ್ವರು ಕಾನ್ಸ್​ಟೇಬಲ್​ಗಳಾಗಿದ್ದಾರೆ. ಪ್ರಕರಣದ ತನಿಖೆಯನ್ನು ಚಿಕ್ಕಮಗಳೂರು ಉಪವಿಭಾಗದ ಡಿವೈಎಸ್ಪಿ ಎಚ್ ಎಂ ಶೈಲೇಂದ್ರ ಅವರಿಗೆ ವಹಿಸಲಾಗಿದೆ.

ಕರ್ನಾಟಕ ರಾಜ್ಯ ವಕೀಲರ ಪರಿಷತ್ ಅಧ್ಯಕ್ಷ ವಿಶಾಲ್ ರಘು ಮತ್ತು ಕೆಎಸ್​ಬಿಸಿ ಕಾರ್ಯದರ್ಶಿ ಹಾಗೂ ಹಿರಿಯ ವಕೀಲ ಎಸ್ ಬಸವರಾಜ ಅವರು ವಕೀಲರ ಮೇಲಿನ ದೌರ್ಜನ್ಯ ನಿಷೇಧ ಮಸೂದೆಯು ಸಕ್ಷಮ ಪ್ರಾಧಿಕಾರದ ಮುಂದೆ ಪರಿಗಣನೆಗೆ ಬಾಕಿ ಇದೆ ಎಂದು ತಿಳಿಸಿದ್ದಾರೆ. ಹೀಗಾಗಿ, ಈ ಹಂತದಲ್ಲಿ ಯಾವುದೇ ಅಭಿಪ್ರಾಯ ವ್ಯಕ್ತಪಡಿಸಲು ಅಥವಾ ಯಾವುದೇ ನಿರ್ದೇಶನ ನೀಡುವುದು ನಮಗೆ ಸಾಧ್ಯವಿಲ್ಲ ಎಂದು ಪೀಠ ತಿಳಿಸಿತು.

ಚಿಕ್ಕಮಗಳೂರಿನ ಪ್ರತಿಭಟನಾ ಸ್ಥಳದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಿದ್ದ ಎಎಬಿ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ ಅವರಿಗೆ ಅಡ್ವೊಕೇಟ್ ಜನರಲ್ ಅವರು ವೈಯಕ್ತಿಕವಾಗಿ ಪ್ರಕರಣ ಪರಿಶೀಲಿಸುತ್ತಿದ್ದು, ಯಾವುದೇ ತೆರನಾದ ಗಂಭೀರ ಕ್ರಮಗಳನ್ನು ಕೈಗೊಳ್ಳದಂತೆ ವಕೀಲರಿಗೆ ತಿಳಿಸಲಾಗಿದೆ. ನ್ಯಾಯಾಲಯದ ಕೆಲಸದಿಂದ ದೂರ ಉಳಿಯದಂತೆ ವಕೀಲರಿಗೆ ತಿಳಿಸುವಂತೆಯೂ ಸೂಚಿಸಲಾಗಿದೆ.

ವಕೀಲ ಪ್ರೀತಂ ಹೇಳಿಕೆ ದಾಖಲು ಮಾಡಿಕೊಳ್ಳಲಾಗಿದ್ದು, ಐಪಿಸಿ ಕಲಂ 506, 341, 307, 324, 326 ಮತ್ತು 504ರ ಜೊತೆಗೆ 149ರ ಅಡಿಯಲ್ಲಿ ಚಿಕ್ಕಮಗಳೂರು ಟೌನ್ ಠಾಣೆಯಲ್ಲಿ ಡಿಸೆಂಬರ್ 1ರ ಮಧ್ಯರಾತ್ರಿ ಪ್ರಕರಣ ದಾಖಲಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com