ತೆರಿಗೆ ಸಂಗ್ರಹ: 5 ಇಲಾಖೆಗಳ ಪ್ರಗತಿ ಪರಿಶೀಲಿಸಿದ ಸಿಎಂ ಸಿದ್ದರಾಮಯ್ಯ, ಹಣದ ಕೊರತೆಯಾಗದಂತೆ ಎಚ್ಚರ ವಹಿಸಲು ಸೂಚನೆ

ರಾಜ್ಯದಲ್ಲಿ ತೆರಿಗೆ ಸಂಗ್ರಹಣಗೆ ಚುರುಕು ನೀಡುವ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಸರ್ಕಾರಕ್ಕೆ ಆದಾಯ ತಂದುಕೊಡುವ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು.
ವಾಣಿಜ್ಯ ತೆರಿಗೆ ಇಲಾಖೆ ಪ್ರಗತಿ ಪರಿಶೀಲನೆ ನಡೆಸುತ್ತಿರುವ ಸಿಎಂ ಸಿದ್ದರಾಮಯ್ಯ.
ವಾಣಿಜ್ಯ ತೆರಿಗೆ ಇಲಾಖೆ ಪ್ರಗತಿ ಪರಿಶೀಲನೆ ನಡೆಸುತ್ತಿರುವ ಸಿಎಂ ಸಿದ್ದರಾಮಯ್ಯ.

ಬೆಂಗಳೂರು: ರಾಜ್ಯದಲ್ಲಿ ತೆರಿಗೆ ಸಂಗ್ರಹಣಗೆ ಚುರುಕು ನೀಡುವ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಸರ್ಕಾರಕ್ಕೆ ಆದಾಯ ತಂದುಕೊಡುವ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು.

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಹಾಗೂ ಅಭಿವೃದ್ಧಿ ಕಾಮಗಾರಿಗಳಿಗೆ ಹಣ ಕೊರತೆಯಾಗದಂತೆ ಎಚ್ಚರ ವಹಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿಗಳು ಸರ್ಕಾರಕ್ಕೆ ಆದಾಯ ತಂದುಕೊಡುವ ಐದೂ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು.

ಬಜೆಟ್ ನಲ್ಲಿ ಪ್ರಸಕ್ತ ಸಾಲಿನಲ್ಲಿ ವಾಣಿಜ್ಯ ತೆರಿಗೆಗಳಿಂದ 1.01 ಲಕ್ಷ ಕೋಟಿ ರೂ, ಮೋಟಾರು ವಾಹನ ತೆರಿಗೆಯಿಂದ 11,500 ಕೋಟಿ ರೂ. ನೋಂದಣಿ ಮತ್ತು ಮುದ್ರಾಂಕ ಇಲಾಖೆಯಿಂದ 25,000 ಕೋಟಿ ರೂ, ರಾಜ್ಯ ಅಬಕಾರಿ ಇಲಾಖೆಯಿಂದ 36,0000 ಕೋಟಿ ರೂ. ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ 9 ಸಾವಿರ ಕೋಟಿ ರೂ, ಆದಾಯ ಸಂಗ್ರಹ ಗುರಿ ಹೊಂದಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com