ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಲಿಖಿತ ವಾದ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ 2 ವಾರಗಳ ಕಾಲಾವಕಾಶ

ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ರಮೇಶ್‌ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿದಂತೆ ಲಿಖಿತ ವಾದ ಸಲ್ಲಿಸಲು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಎರಡು ವಾರಗಳ ಕಾಲಾವಕಾಶ ನೀಡಿದೆ.
ರಮೇಶ್ ಜಾರಕಿಹೊಳಿ
ರಮೇಶ್ ಜಾರಕಿಹೊಳಿ

ಬೆಂಗಳೂರು: ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ರಮೇಶ್‌ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿದಂತೆ ಲಿಖಿತ ವಾದ ಸಲ್ಲಿಸಲು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಎರಡು ವಾರಗಳ ಕಾಲಾವಕಾಶ ನೀಡಿದೆ.

ಸಿಡಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆ ಮಾಡಿರುವುದನ್ನು ಪ್ರಶ್ನಿಸಿ ಸಂತ್ರಸ್ತೆ ಹಾಗೂ ಇತರರು ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠ ಶುಕ್ರವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ಹಾಜರಾಗಿ, ಲಿಖಿತ ವಾದಾಂಶ ಮತ್ತು ಪ್ರಕರಣ ವಿವರಗಳನ್ನು ಸಂಕ್ಷಿಪ್ತ ರೂಪದಲ್ಲಿ ಸಲ್ಲಿಸಲು ಕಾಲಾವಕಾಶ ನೀಡುವಂತೆ ಕೋರಿದರು.

ಇದಕ್ಕೆ ಆಕ್ಷೇಪಿಸಿದ ಪೀಠವು ಈಗಾಗಲೇ ಸಾಕಷ್ಟು ಸಮಯ ನೀಡಲಾಗಿದೆ. ಆದರೂ ಲಿಖಿತ ವಾದಾಂಶ ಸಲ್ಲಿಸಲು ವಿಳಂಬ ಮಾಡಲಾಗುತ್ತಿದೆ ಎಂದು ಹೇಳಿತು.

ನಂತರ ಸರ್ಕಾರಿ ವಕೀಲರ ಮನವಿ ಮೇರೆಗೆ ಲಿಖಿತ ವಾದಾಂಶ ಮತ್ತು ಪ್ರಕರಣ ವಿವರವನ್ನು ಸಂಕ್ಷಿಪ್ತ ರೂಪದಲ್ಲಿ ಸಲ್ಲಿಸಲು ಎರಡು ವಾರ ಕಾಲಾವಕಾಶ ನೀಡಿ ವಿಚಾರಣೆಯನ್ನು ಡಿಸೆಂಬರ್‌ 15ಕ್ಕೆ ಮುಂದೂಡಿತು

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com