2 ದೊಡ್ಡ ರಾಜ್ಯಗಳಲ್ಲಿ ಬಿಜೆಪಿಗೆ ಗೆಲುವು ಸಿಕ್ಕಿದೆ, ಈ ಫಲಿತಾಂಶ ಮತ್ತೆ ಮೋದಿ ಪ್ರಧಾನಿ ಎಂದು ಹೇಳ್ತುತ್ತಿದೆ: ಶಾಸಕ ಮುನಿರತ್ನ

ರಾಜಸ್ಥಾನ ಹಾಗೂ ಮಧ್ಯಪ್ರದೇಶ ಎರಡೂ ದೊಡ್ಡ ರಾಜ್ಯಗಳಲ್ಲಿ ನಮಗೆ ಗೆಲುವು ಸಿಕ್ಕಿದೆ. ಛತ್ತೀಸ್‌ಗಢದಲ್ಲೂ ಬಿಜೆಪಿ ಗೆಲ್ಲುವ ವಿಶ್ವಾಸವಿದೆ. ಈ ಫಲಿತಾಂಶ ಲೋಕಸಭೆಗೆ ಒಳ್ಳೆಯ ವಾತಾವರಣ ನಿರ್ಮಾಣ ಮಾಡಿದೆ ಎಂದು ಆರ್‌ಆರ್ ನಗರ ಶಾಸಕ ಮುನಿರತ್ನ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಆರ್‌ಆರ್ ನಗರ ಶಾಸಕ ಮುನಿರತ್ನ
ಆರ್‌ಆರ್ ನಗರ ಶಾಸಕ ಮುನಿರತ್ನ

ಬೆಂಗಳೂರು: ರಾಜಸ್ಥಾನ ಹಾಗೂ ಮಧ್ಯಪ್ರದೇಶ ಎರಡೂ ದೊಡ್ಡ ರಾಜ್ಯಗಳಲ್ಲಿ ನಮಗೆ ಗೆಲುವು ಸಿಕ್ಕಿದೆ. ಛತ್ತೀಸ್‌ಗಢದಲ್ಲೂ ಬಿಜೆಪಿ ಗೆಲ್ಲುವ ವಿಶ್ವಾಸವಿದೆ. ಈ ಫಲಿತಾಂಶ ಲೋಕಸಭೆಗೆ ಒಳ್ಳೆಯ ವಾತಾವರಣ ನಿರ್ಮಾಣ ಮಾಡಿದೆ ಎಂದು ಆರ್‌ಆರ್ ನಗರ ಶಾಸಕ ಮುನಿರತ್ನ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಲ್ಲಿನ ಗ್ಯಾರಂಟಿ ತೆಲಂಗಾಣದಲ್ಲಿ ವರ್ಕ್ ಆಗಿದೆ. ನಮ್ಮ ನಿರೀಕ್ಷೆ ತೆಲಂಗಾಣದಲ್ಲಿ ಹುಸಿಯಾಯ್ತು. ಆದರೆ ಉಳಿದ ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ ಎಂದು ಸಂತಸ ವ್ಯಕ್ತಪಡಿಸಿದರು,

ಇಂದಿನ ಫಲಿತಾಂಶ ಮತ್ತೆ ಮೋದಿ ಪ್ರಧಾನಿ ಎನ್ನುವುದನ್ನೇ ಹೇಳುತ್ತಿದೆ. ಪ್ರಧಾನಿ ಮೋದಿ ಮೂರನೇ ಬಾರಿಗೆ ಪ್ರಮಾಣವಚನ ಸ್ವೀಕಾರ ಮಾಡುತ್ತಾರೆ. ಇಂದು ಬಿಜೆಪಿಗೆ ಒಳ್ಳೆಯ ದಿನ ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com