ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮಂಗಳೂರು: ನಾಲ್ಕ ತಿಂಗಳ ಮಗುವನ್ನು ನೀರಿನ ಟಬ್ ನಲ್ಲಿ ಮುಳುಗಿಸಿ ಕೊಂದು ತಾಯಿ ಆತ್ಮಹತ್ಯೆ

ನಾಲ್ಕು ತಿಂಗಳ ಮಗುವನ್ನು ನೀರು ತುಂಬಿದ ಪ್ಲಾಸ್ಟಿಕ್ ಟಬ್ ನಲ್ಲಿ ಮುಳುಗಿಸಿ ಕೊಂದ ತಾಯಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ನಡೆದಿದೆ.
Published on

ಮಂಗಳೂರು: ನಾಲ್ಕು ತಿಂಗಳ ಮಗುವನ್ನು ನೀರು ತುಂಬಿದ ಪ್ಲಾಸ್ಟಿಕ್ ಟಬ್ ನಲ್ಲಿ ಮುಳುಗಿಸಿ ಕೊಂದ ತಾಯಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ನಡೆದಿದೆ. ಗುಜ್ಜರಕೆರೆಯ ಮುಹಮ್ಮದ್ ಉನೈಸ್ ಎಂಬವರ ಪತ್ನಿ ಫಾತಿಮಾ ರುಕಿಯಾ (23) ಮತ್ತು ನಾಲ್ಕು ತಿಂಗಳ ಮಗು ಅಬ್ದುಲ್ಲಾ ಮೃತರು ಎಂದು ಗುರುತಿಸಲಾಗಿದೆ.

ಫಾತಿಮಾ ರುಕಿಯಾ ಅವರು ಸುಮಾರು ಒಂದೂವರೆ ವರ್ಷದ ಹಿಂದೆ ಮುಹಮ್ಮದ್ ಉನೈಸ್ ಎಂಬವರನ್ನು ವಿವಾಹವಾಗಿದ್ದರು. 2023 ಜುಲೈ 7 ರಂದು ಹೆರಿಗೆಯಾಗಿತ್ತು. ಇವರಿಗೆ ಅಬ್ದುಲ್ಲಾ ಹೂದ್ ಎಂಬ ಮಗು ಇತ್ತು. ಹೆರಿಗೆಯಾದ ಬಳಿಕ ಮಾನಸಿಕ ಖಿನ್ನತೆಗೆ ಒಳಗಾಗಿದ್ದು,ಫಾತಿಮಾ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತನ್ನ ತಾಯಿ ಬಳಿ ಹೇಳುತ್ತಿದ್ದರು ಎನ್ನಲಾಗಿದೆ.

ಇಂದು ಬೆಳಗ್ಗೆ ಮನೆಯಲ್ಲಿ ಯಾರೂ ಇಲ್ಲದ ಸಮಯ ಫಾತಿಮಾ ರುಕಿಯಾ ತಾನು ವಾಸವಾಗಿದ್ದ ಮಂಗಳೂರು ನಗರದ ಗುಜ್ಜರಕೆರೆ ಲೇಕ್ ವ್ಯೂ ಅಪಾರ್ಟ್ಮೆಂಟ್​ನ ಫ್ಲಾಟ್ ನಂಬರ್ 507ರ ಬೆಡ್ ರೂಮ್​ನ ಗ್ಯಾಲರಿಯಲ್ಲಿ ಪ್ಲಾಸ್ಟಿಕ್ ಟಬ್​ನಲ್ಲಿ ನೀರು ತುಂಬಿಸಿ ಮಗುವನ್ನು ನೀರಿನಲ್ಲಿ ಮುಳುಗಿಸಿ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾಳೆ.

ಬಳಿಕ ತಾನೂ ಕೂಡ ರೂಮಿನ ಕಿಟಕಿಯ ಕಬ್ಬಿಣದ ಸರಳಿಗೆ ಸೀರೆಯಿಂದ ಕಟ್ಟಿ ಮತ್ತೊಂದು ತುದಿಯಿಂದ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com