ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಆಪ್ತ ಪೃಥ್ವಿ ಸಿಂಗ್ ಗೆ ಚಾಕು ಇರಿತ

ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಆಪ್ತ ಪೃಥ್ವಿ ಸಿಂಗ್ ಗೆ ಚಾಕು ಇರಿಯಲಾಗಿದೆ.
ಪೃಥ್ವಿ ಸಿಂಗ್
ಪೃಥ್ವಿ ಸಿಂಗ್

ಬೆಳಗಾವಿ: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಆಪ್ತ ಪೃಥ್ವಿ ಸಿಂಗ್ ಗೆ ಚಾಕು ಇರಿಯಲಾಗಿದೆ. 

ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯನಾಗಿರುವ ಪೃಥ್ವಿ ಸಿಂಗ್ ಮೇಲೆ ಬೆಳಗಾವಿಯ ಜಯನಗರದ ನಿವಾಸದ ಬಳಿ ಹಲ್ಲೆ ಮಾಡಲಾಗಿದೆ. ಚೂರಿ ಇರಿತದಲ್ಲಿ ಪೃಥ್ವಿ ಸಿಂಗ್ ಕೈ ಮತ್ತು ಬೆನ್ನಿಗೆ ಗಾಯಗಳಾಗಿವೆ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಹೋತರ ಎಂಎಲ್ ಸಿ ಚನ್ನರಾಜ ಹಟ್ಟಿಹೊಳಿ ಆಪ್ತರು ಪೃಥ್ವಿ ಸಿಂಗ್ ಮೇಲೆ ಹಲ್ಲೆ ನಡೆಸಿದ್ದಾರೆ. ಚನ್ನರಾಜ ಬೆಂಬಲಿಗರಾದ ಸದ್ದಾಂ, ಸುಜಯ್ ಮತ್ತು ಚನ್ನರಾಜ ಬಾಡಿಗಾರ್ಡ್ ಹಲ್ಲೆ ನಡೆಸಿದ್ದಾರೆ. 

ಪೃಥ್ವಿ ಸಿಂಗ್ ಜೊತೆ ಚನ್ನರಾಜ ಹಟ್ಟಿಹೊಳಿ ಆಪ್ತರು ಮಾತನಾಡುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com