ಬೆಂಗಳೂರು: ಅತ್ತಿಬೆಲೆ– ಹೊಸಕೋಟೆ ನಡುವೆ ಬಿಎಂಟಿಸಿಯ ನೂತನ ಹವಾನಿಯಂತ್ರಿತ ವೋಲ್ವೋ ಬಸ್ ಸೇವೆ ಭಾನುವಾರದಿಂದ ಆರಂಭಗೊಂಡಿದೆ.
ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ಅತ್ತಿಬೆಲೆ ಬಸ್ ನಿಲ್ದಾಣದಲ್ಲಿ ಹವಾನಿಯಂತ್ರಿತ ವೋಲ್ವೋ ಬಸ್ 'ಗಳಿಗೆ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ಬಸ್‌ಗಳ ಸಂಚಾರ ಹೆಚ್ಚಿಸಲಾಗುವುದು. ಅತ್ತಿಬೆಲೆಗೆ ಸುಸಜ್ಜಿತ ಬಸ್ ನಿಲ್ದಾಣದ ಅವಶ್ಯಕತೆ ಇದೆ. ಮುಂದಿನ ದಿನಗಳಲ್ಲಿ ಆಧುನಿಕ ಬಸ್ ನಿಲ್ದಾಣ ನಿರ್ಮಿಸಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಆನೇಕಲ್ ಶಾಸಕ ಬಿ. ಶಿವಣ್ಣ, ಬಿಎಂಟಿಸಿ ನಿರ್ದೇಶಕಿ ಕಲಾ ಕೃಷ್ಣಸ್ವಾಮಿ, ಮುಖ್ಯ ಸಂಚಾರ ವ್ಯವಸ್ಥಾಪಕ ಜಿ.ಟಿ.ಪ್ರಭಾಕರ ರೆಡ್ಡಿ, ಕೇಂದ್ರೀಯ ಮತ್ತು ಪೂರ್ವ ವಲಯದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಹಾಗೂ ವಿಭಾಗೀಯ ಸಂಚಾರ ಅಧಿಕಾರಿಗಳು ಹಾಜರಿದ್ದರು.
ಈಗಾಗಲೇ ಈ ಮಾರ್ಗದಲ್ಲಿ 37 ಸಾಮಾನ್ಯ ಬಸ್‌ಗಳು 300 ಟ್ರಿಪ್‌ಗಳನ್ನು ನಡೆಸುತ್ತಿವೆ. ಇದರ ಜೊತೆಗೆ ಇನ್ನು ಮುಂದೆ 10 ಬಸ್‌ಗಳು ಪ್ರತಿದಿನ 57 ಟ್ರಿಪ್ ಸಂಚರಿಸಲಿವೆ.
Advertisement