ಬೆಳಗಾವಿಯಲ್ಲಿ ಮಹಾಮೇಳಾವ್‌ ಆಯೋಜನೆ: ಅನುಮತಿ ನಿರಾಕರಣೆ ಹಿನ್ನೆಲೆ ಎಂಇಎಸ್‌ ಪ್ರತಿಭಟನೆ

ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನಕ್ಕೆ ತಡೆಯೊಡ್ಡುವ ಉದ್ದೇಶದಿಂದ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಕಾರ್ಯಕರ್ತರು ಸೋಮವಾರ ಪ್ರತಿಭಟನೆ ಆರಂಭಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಳಗಾವಿ: ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನಕ್ಕೆ ತಡೆಯೊಡ್ಡುವ ಉದ್ದೇಶದಿಂದ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಕಾರ್ಯಕರ್ತರು ಸೋಮವಾರ ಪ್ರತಿಭಟನೆ ಆರಂಭಿಸಿದ್ದಾರೆ.

ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಚಂದಗಡ ತಾಲ್ಲೂಕಿನ ಶಿನೋಳಿಯಲ್ಲಿ ಎಂಇಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, 'ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಲೇಬೇಕು' ಎಂದು ಘೋಷಣೆ ಕೂಗಿದ್ದಾರೆ.

ಇದೇ ವೇಳೆ ಮಹಾರಾಷ್ಟ್ರದಿಂದ ಕರ್ನಾಟಕದ ಗಡಿಯೊಳಗೆ ನುಗ್ಗಲು ಪ್ರಯತ್ನಿಸಿದ್ದು, ಪೊಲೀಸರು ತಡೆದಿದ್ದರಿಂದ ಬೆಳಗಾವಿ-ವೆಂಗುರ್ಲಾ ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ.

ಇದೀಗ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.

ಬೆಳಗಾವಿಯಲ್ಲಿ ಮಹಾಮೇಳಾವ್ ಆಯೋಜಿಸಲು ಎಂಇಎಸ್ ಪ್ರಯತ್ನ ನಡೆಸಿತ್ತು. ಆದರೆ, ಜಿಲ್ಲಾಡಳಿತ ನಿಷೇಧ ಹೇರಿದ್ದರಿಂದ ಮಹಾರಾಷ್ಟ್ರದಲ್ಲಿ ಪ್ರತಿಭಟನೆ ನಡೆಸುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com