ಗ್ಯಾರಂಟಿ ವಿಫಲವಾಗಿಲ್ಲ, ನಮ್ಮ ತಪ್ಪುಗಳನ್ನು ಸರಿಪಡಿಸಿಕೊಳ್ಳುತ್ತೇವೆ: ಸಿಎಂ ಸಿದ್ದರಾಮಯ್ಯ

ನಮ್ಮ ಗ್ಯಾರಂಟಿ ಯೋಜನೆಗಳು ವಿಫಲವಾಗಿಲ್ಲ. ಗ್ಯಾರಂಟಿ ಯೋಜನೆಯನ್ನು ತೆಲಂಗಾಣದಲ್ಲಿಯೂ ಹೆಚ್ಚು ಪ್ರಚಾರ ಮಾಡಿದ್ದರಿಂದ ಅಲ್ಲಿ ಕಾಂಗ್ರೆಸ್ ಬಹುಮತದೊಂದಿಗೆ ಗೆಲುವು ಸಾಧಿಸಿದೆ. ಆದರೆ, ಉಳಿದ 3 ರಾಜ್ಯಗಳಲ್ಲಿ ಸೋತಿದ್ದೇವೆ. ನಮ್ಮ ತಪ್ಪುಗಳನ್ನು ಸರಿಪಡಿಸಿಕೊಳ್ಳುತ್ತೇವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದರು.
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಮ್ಮ ಗ್ಯಾರಂಟಿ ಯೋಜನೆಗಳು ವಿಫಲವಾಗಿಲ್ಲ. ಗ್ಯಾರಂಟಿ ಯೋಜನೆಯನ್ನು ತೆಲಂಗಾಣದಲ್ಲಿಯೂ ಹೆಚ್ಚು ಪ್ರಚಾರ ಮಾಡಿದ್ದರಿಂದ ಅಲ್ಲಿ ಕಾಂಗ್ರೆಸ್ ಬಹುಮತದೊಂದಿಗೆ ಗೆಲುವು ಸಾಧಿಸಿದೆ. ಆದರೆ, ಉಳಿದ 3 ರಾಜ್ಯಗಳಲ್ಲಿ ಸೋತಿದ್ದೇವೆ. ನಮ್ಮ ತಪ್ಪುಗಳನ್ನು ಸರಿಪಡಿಸಿಕೊಳ್ಳುತ್ತೇವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದರು.

ಬೆಳಗಾವಿಯಲ್ಲಿ ವಿಧಾನಮಂಡಲದ ಚಳಿಗಾಲ ಅಧಿವೇಶನ ಆರಂಭಕ್ಕೂ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇಂದಿನಿಂದ ಅಧಿವೇಶನ ಪ್ರಾರಂಭವಾಗಲಿದ್ದು, ವಿರೋಧ ಪಕ್ಷದವರು ಕೇಳುವ ಪ್ರತಿಯೊಂದು ಪ್ರಶ್ನೆಗೂ ಉತ್ತರಿಸಲು ಸರ್ಕಾರ ಸಿದ್ಧವಿದೆ. ಈ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳತ್ತಲೂ ಗಮನಹರಿಸಲಾಗುವುದು ಎಂದು ಹೇಳಿದರು.

ಬಳಿಕ ಪಂಚ ರಾಜ್ಯಗಳ ಚುನಾವಣೆ ಕುರಿತು ಮಾತನಾಡಿ, ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಯನ್ನು ತೆಲಂಗಾಣದಲ್ಲಿಯೂ ಹೆಚ್ಚು ಪ್ರಚಾರ ಮಾಡಿದ್ದರಿಂದ ಅಲ್ಲಿ ಕಾಂಗ್ರೆಸ್ ಬಹುಮತದೊಂದಿಗೆ ಗೆಲುವು ಸಾಧಿಸಿದೆ. ಮಧ್ಯಪ್ರದೇಶ ರಾಜ್ಯದಲ್ಲಿ ಗೆಲುವು ಸಾಧಿಸಿರುವ ಬಿಜೆಪಿಯವರೂ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಎಂದಿಗೂ ಚುನಾವಣೆಯಲ್ಲಿ ಗೆಲುವು ಸಾಧಿಸಲೆಂದು ಗ್ಯಾರಂಟಿ ಯೋಜನೆಗಳನ್ನು ಘೋಷಿಸುವುದಿಲ್ಲ. ಬಡಜನರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುವ ಪ್ರಾಮಾಣಿಕತೆಯಿಂದ ಇವುಗಳನ್ನು ಜಾರಿಗೊಳಿಸಲಾಗಿದೆ. ಗ್ಯಾರಂಟಿ ಯೋಜನೆಗಳೆಲ್ಲ ಬಡವರ ಕಾರ್ಯಕ್ರಮಗಳು.

ನಮ್ಮ ಸರ್ಕಾರ ರಚನೆಯಾಗಿ ಆರು ತಿಂಗಳು ಕಳೆದರೂ ಬಿಜೆಪಿಯವರಿಗೆ ವಿಪಕ್ಷ ನಾಯಕರನ್ನು ಆಯ್ಕೆ ಮಾಡಿರಲಿಲ್ಲ. ವಿರೋಧ ಪಕ್ಷದವರಿಗೆ ಸರ್ಕಾರವನ್ನು ಪ್ರಶ್ನಿಸುವ ಯಾವ ನೈತಿಕತೆಯೂ ಇಲ್ಲ. ಅವರು ಜಂಟಿಯಾಗಿ ಹೋರಾಟ ನಡೆಸಿದರೂ, ಅವರ ಎಲ್ಲ ಹೋರಾಟಗಳಿಗೆ ಉತ್ತರಿಸಲು ಸರ್ಕಾರ ಸಿದ್ಧವಿದೆ ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com