ಹೆಣ್ಣು ಭ್ರೂಣ ಹತ್ಯೆ ಪ್ರಕರಣ: ಮತ್ತೊರ್ವ ನರ್ಸ್ ಬಂಧನ; ಸಿಐಡಿ ತನಿಖೆ ಆರಂಭ

ರಾಜ್ಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಹೆಣ್ಣು ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣ ಸಂಬಂಧ ಮತ್ತೋರ್ವ ನರ್ಸ'ನ್ನು ಪೊಲೀಸರು ಸೋಮವಾರ ಬಂಧನಕ್ಕೊಳಪಡಿಸಿದ್ದು, ಸಿಐಡಿ ಅಧಿಕಾರಿಗಳು ಪ್ರಕರಣದ ತನಿಖೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಹೆಣ್ಣು ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣ ಸಂಬಂಧ ಮತ್ತೋರ್ವ ನರ್ಸ'ನ್ನು ಪೊಲೀಸರು ಸೋಮವಾರ ಬಂಧನಕ್ಕೊಳಪಡಿಸಿದ್ದು, ಸಿಐಡಿ ಅಧಿಕಾರಿಗಳು ಪ್ರಕರಣದ ತನಿಖೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ.

ಶುಶ್ರೂಷಕಿ ಉಷಾರಾಣಿ (35) ಬಂಧಿತ ಆರೋಪಿ. ಮೈಸೂರಿನ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಉಷಾರಾಣಿ, ಜಾಲದ ಪ್ರಮುಖ ಆರೋಪಿ ಡಾ. ಚಂದನ್ ಬಲ್ಲಾಳ್ ಹಾಗೂ ಚೆನ್ನೈನ ವೈದ್ಯರೊಬ್ಬರ ತಂಡದಲ್ಲಿದ್ದರು ಎನ್ನಲಾಗಿದೆ.

ಈ  ನಡುವ ಸಿಐಡಿ ಅಧಿಕಾರಿಗಳು ಪ್ರಕರಣದ ತನಿಖೆಯನ್ನು ಅಧಿಕೃತವಾಗಿ ಆರಂಭಿಸಿದ್ದಾರೆ. ಹೆಣ್ಣು ಭ್ರೂಣ ಲಿಂಗ ಪತ್ತೆ ಜಾಲ ಭೇದಿಸಿದ್ದ ಬೈಯಪ್ಪನಹಳ್ಳಿ ಠಾಣೆ ಇನ್ಸ್ ಪೆಕ್ಟರ್ ಪ್ರಶಾಂತ್ ಮತ್ತು  ನವಜಾತ ಶಿಶು ಮಾರಾಟ ಪ್ರಕರಣದ ತನಿಖೆ ನಡೆಸಿದ ಸಿಸಿಬಿ ಅಧಿಕಾರಿಗಳನ್ನು ಭೇಟಿಯಾಗಿ ಸಮಾಲೋಚಿಸಿದರು.

ಈ ವೇಳೆ ಎರಡು ಪ್ರಕರಣ ಸಂಬಂಧ ಇದೂವರೆಗೆ ನಡೆದಿರುವ ತನಿಖೆ ಬಗ್ಗೆ ಮಾಹಿತಿ ಪಡೆದ ಸಿಐಡಿ ತಂಡವು, ಬಳಿಕ ಎಲ್ಲಾ ದಾಖಲೆಗಳನ್ನು ತನಿಖಾಧಿಕಾರಿಗಳಿಂದ ಸ್ವೀಕರಿಸಿ ತೆರಳಿತು.

ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ಪ್ರಕರಣದಲ್ಲಿ ಇಬ್ಬರು ವೈದ್ಯರು ಹಾಗೂ ಇಬ್ಬರು ನರ್ಸ್ ಸೇರಿದಂತೆ 11 ಮಂದಿಯನ್ನು ಬೈಯಪ್ಪನಹಳ್ಳಿ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ತಲೆಮರೆಸಿಕೊಂಡಿರುವ ಇನ್ನುಳಿದ ಆರೋಪಿಗಳಿಗೆ ಸಿಐಡಿ ಬೇಟೆ ಶುರು ಮಾಡಲಿದೆ. ಅದೇ ರೀತಿ ನವಜಾತ ಶಿಶು ಮಾರಾಟ ಪ್ರಕರಣದಲ್ಲಿ ಕೂಡ 10 ಮಂದಿಯನ್ನು ಸಿಸಿಬಿ ಬಂಧಿಸಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com